ವಿವಾದಕ್ಕೆ ಕಾರಣವಾಯ್ತೇ ಶಾಸಕರ ತರಬೇತಿ ಶಿಬಿರ? ಸಂಪನ್ಮೂಲ ವ್ಯಕ್ತಿಗಳ ಮರುಪರಿಶೀಲನೆಗೆ ಆಗ್ರಹ

ಶಿಬಿರದ ವಿಚಾರವಾಗಿ ಸ್ಪೀಕರ್ ಯುಟಿ ಖಾದರ್​​ಗೆ ಈ ಮಾಜಿ ಎಂಎಲ್ಸಿ ರಮೇಶ್ ಬಾಬು ಪತ್ರ ಬರೆದಿದ್ದು, ಸಂಪನ್ಮೂಲ ವ್ಯಕ್ತಿಗಳನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ.

ವಿವಾದಕ್ಕೆ ಕಾರಣವಾಯ್ತೇ ಶಾಸಕರ ತರಬೇತಿ ಶಿಬಿರ? ಸಂಪನ್ಮೂಲ ವ್ಯಕ್ತಿಗಳ ಮರುಪರಿಶೀಲನೆಗೆ ಆಗ್ರಹ
ಸ್ಪೀಕರ್ ಯುಟಿ ಖಾದರ್
Follow us
Ganapathi Sharma
|

Updated on: Jun 22, 2023 | 6:08 PM

ಬೆಂಗಳೂರು: ಹೊಸಾಗಿ ಈ ಬಾರಿ ಶಾಸಕರಾಗಿ ಆಯ್ಕೆಯಾದವರಿಗೆ ತರಬೇತಿ ನೀಡುವುದಕ್ಕಾಗಿ ವಿಧಾನಸಭಾ ಸ್ಪೀಕರ್ ಯುಟಿ ಖಾದರ್ (UT Khader)​ ಹಮ್ಮಿಕೊಂಡಿರುವ ಮೂರು ದಿನಗಳ ತರಬೇತಿ ಶಿಬಿರ ಇದೀಗ ಚರ್ಚೆಗೆ ಗ್ರಾಸವಾಗಿದೆ. ಶಿಬಿರಕ್ಕೆ ಕರೆಸಲಾಗುತ್ತಿರುವ ಸಂಪನ್ಮೂಲ ವ್ಯಕ್ತಿಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ಅಪಸ್ವರ ಕೇಳಿಬಂದಿದ್ದು, ಒಂದು ಸಿದ್ಧಾಂತಕ್ಕೆ ಅಂಟಿಕೊಂಡವರಿಗೆ ಸ್ಪೀಕರ್ ಅವಕಾಶ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಸಂಪನ್ಮೂಲ ವ್ಯಕ್ತಿಗಳನ್ನು ಮರು ಪರಿಶೀಲಿಸುವಂತೆ ಆಗ್ರಹ ವ್ಯಕ್ತವಾಗಿದೆ.

ಶಿಬಿರದ ವಿಚಾರವಾಗಿ ಸ್ಪೀಕರ್ ಯುಟಿ ಖಾದರ್​​ಗೆ ಈ ಮಾಜಿ ಎಂಎಲ್ಸಿ ರಮೇಶ್ ಬಾಬು ಪತ್ರ ಬರೆದಿದ್ದು, ಸಂಪನ್ಮೂಲ ವ್ಯಕ್ತಿಗಳನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ.

ತರಬೇತಿ ಶಿಬಿರಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ, ಮೊಹಮ್ಮದ್ ಕುಂಞ, ಗುರುರಾಜ್ ಕರ್ಜಗಿ, ರವಿಶಂಕರ್ ಗುರೂಜಿ ಅವರನ್ನು ಯುಟಿ ಖಾದರ್ ಆಯ್ಕೆ ಮಾಡಿದ್ದಾರೆ.

ಸಂಪನ್ಮೂಲ ವ್ಯಕ್ತಿಗಳ ಆಯ್ಕೆ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿಯೂ ಚರ್ಚೆ ಆರಂಭವಾಗಿದೆ. ಹಲವರು ಸಂಪನ್ಮೂಲ ವ್ಯಕ್ತಿಗಳ ಆಯ್ಕೆಯನ್ನು ಸಮರ್ಥಿಸಿದ್ದರೆ ಇನ್ನು ಅನೇಕರು ರಾಜಕೀಯ ಮತ್ತು ಆಡಳಿತಾತ್ಮಕ ವಿಚಾರಗಳ ಬಗ್ಗೆ ತರಬೇತಿ ನೀಡುವುದಕ್ಕೆ ರಾಜಕಾರಣ ಹಾಗೂ ಆಡಳಿತದಲ್ಲಿ ಮಾಗಿದ ಹಿರಿಯ ರಾಜಕಾರಣಿಗಳು ಸಿಗಲಿಲ್ಲವೇ ಎಂದೂ ಪ್ರಶ್ನಿಸಿದ್ದಾರೆ.

ಸ್ಪೀಕರ್ ಆದವರು ಪಕ್ಷ ಹಾಗೂ ಒಂದು ಪಕ್ಷದ ಸಿದ್ಧಾಂತವನ್ನಷ್ಟೇ ನೋಡಿಕೊಂಡು ಇರಲಾಗುವುದಿಲ್ಲ. ರಾಜಕಾರಣದಲ್ಲಿ ಧರ್ಮವನ್ನು ಬೆರೆಸಲಾಗದು ಎಂದು ಇನ್ನು ಕೆಲವು ಮಂದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಜು 03ರಿಂದ ಅಧಿವೇಶನ ಆರಂಭ, ಜೂ 26ರಿಂದ ನೂತನ ಶಾಸಕರಿಗೆ ತರಬೇತಿ ಶಿಬಿರ: ವಿಧಾನಸಭಾಧ್ಯಕ್ಷ ಯುಟಿ ಖಾದರ್‌

ಎಲ್ಲಿ ನಡೆಯಲಿದೆ ಶಾಸಕರಿಗೆ ತರಬೇತಿ?

ನೆಲಮಂಗಲದ ಸಮೀಪ ಧರ್ಮಸ್ಥಳ ಕ್ಷೇಮವನದಲ್ಲಿ ನೂತನ ಶಾಸಕರಿಗೆ ತರಬೇತಿ ಕಾರ್ಯಕ್ರಮ ನಡೆಯಲಿದೆ. ಜೂನ್ 26ಕ್ಕೆ ಆರಂಭಗೊಂಡು ಜೂನ್ 28ರ ವರೆಗೆ ಮೂರು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಗಳು ಮಾತ್ರವಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ, ಎಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ಮಂದಿ ಹಿರಿಯ ರಾಜಕಾರಣಿಗಳೂ ಶಿಬಿರಾರ್ಥಿಗಳ ಜತೆ ಸಂವಾದದಲ್ಲಿ ಭಾಗವಹಿಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ