ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ? ಹೀಗಿದೆ ಕ್ಷೇತ್ರ ಹಂಚಿಕೆ ಲೆಕ್ಕಾಚಾರ

ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಬೆನ್ನಲ್ಲೇ ಬಿಜೆಪಿಯು ಮುಂಬರುವ ಲೋಕಸಭಾ ಚುನಾವಣೆಗೆ ಈಗಿನಿಂದಲೇ ತೆರೆಮರೆಯಲ್ಲಿ ಸಿದ್ಧತೆ ಆರಂಭಿಸಿದ್ದು, ಸೋಲಿ ಸೇಡು ತೀರಿಸಿಕೊಳ್ಳಲು ಜೆಡಿಎಸ್​ನೊಂದಿಗೆ ಕಣಕ್ಕಿಳಿಯುವ ಲೆಕ್ಕಾಚಾರದಲ್ಲಿ ಬಿಜೆಪಿ ಇದೆ.

ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ? ಹೀಗಿದೆ ಕ್ಷೇತ್ರ ಹಂಚಿಕೆ ಲೆಕ್ಕಾಚಾರ
ಜೆಡಿಎಸ್-ಬಿಜೆಪಿ
Follow us
ರಮೇಶ್ ಬಿ. ಜವಳಗೇರಾ
|

Updated on:Jun 05, 2023 | 12:13 PM

ಬೆಂಗಳೂರು: ಈ ಬಾರಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Elections 2023) ಬಿಜೆಪಿ ಮತ್ತು ಜೆಡಿಎಸ್ ಹೀನಾಯ ಸೋಲು ಕಂಡಿದ್ದು, ಇದೀಗ ಲೋಕಸಭೆ ಚುನಾವಣೆ (Loksabha Elections 2024) ಮೇಲೆ ಕಣ್ಣಿಟ್ಟಿದೆ. ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿರುವ ಕಾಂಗ್ರೆಸ್(Congress)​ ವಿರುದ್ಧ ಬಿಜೆಪಿ (BJP) ಸೋಲಿನ ಸೇಡು ಲೋಕಸಭೆ ಚುನಾವಣೆಯಲ್ಲಿ ತೀರಿಸಿಕೊಳ್ಳವ ತವಕದಲ್ಲಿದೆ. ಇದಕ್ಕೆ ಜೆಡಿಎಸ್ ಸಹ​ ಸಾಥ್ ಕೊಡುವಂತಿದೆ. ಹೌದು..2024ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಬಿಜೆಪಿ ಗಂಭೀರ ಚಿಂತನೆ ನಡೆಸಿ ಒಂದು ಹಂತಕ್ಕೆ ಬಂದಿದೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡರೆ ಮುಂದಾಗುವ ಸಾಧಕ ಮತ್ತು ಬಾಧಕಗಳ ಬಗ್ಗೆ ಬಿಜೆಪಿ ನಾಯಕರು ಚರ್ಚೆ ನಡೆಸಿಯೇ ಕೊನೆಗೆ ದಳಪತಿಗಳ ಜತೆ ಮೈತ್ರಿಗೆ ಒಲವು ತೋರಿದ್ದಾರೆ ಎಂದು ತಿಳಿದುಬಂದಿದೆ.

2029ರಲ್ಲಿ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕರ್ನಾಟಕದಲ್ಲಿ 28 ಕ್ಷೇತ್ರಗಳ ಪೈಕಿ 25ರಲ್ಲಿ ಗೆದ್ದು ಬೀಗಿತ್ತು. ಆದ್ರೆ, ಈ ಬಾರಿ ಅಷ್ಟು ಸ್ಥಾನಗಳಲ್ಲಿ ಗೆಲ್ಲುವ ವಾತಾವರಣ ಇಲ್ಲ. ಹೀಗಾಗಿ ಜೆಡಿಎಸ್​ನೊಂದಿಗೆ ಮೈತ್ರಿ ಮಾಡಿಕೊಂಡು ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಬಿಜೆಪಿ ಪ್ಲಾನ್ ಮಾಡಿದೆ. ಹೀಗಾಗಿ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ ಗೆದ್ದೇ ಗೆಲ್ಲುವ 15ರಿಂದ 18 ಕ್ಷೇತ್ರಗಳ ಬಗ್ಗೆ ಮಾತ್ರ ಬಿಜೆಪಿ ಹೆಚ್ಚಿನ ಒತ್ತು ನೀಡಲು ತೀರ್ಮಾನಿಸಿದ್ದು, ಇನ್ನುಳಿದ ಕ್ಷೇತ್ರಗಳನ್ನು ಜೆಡಿಎಸ್​ಗೆ ಬಿಟ್ಟು ಕೊಡುವ ಲೆಕ್ಕಾಚಾರಗಳು ನಡೆದಿವೆ ಎಂದು ಮೂಲಗಳು ತಿಳಿಸಿವೆ. ಐದು ಗ್ಯಾರಂಟಿಗಳೊಂದಿಗೆ ಕಾಂಗ್ರೆಸ್ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆದ್ದಿದ್ದು, ಇದೀಗ ಅದೇ ಹುಮ್ಮಸ್ಸಿನಲ್ಲಿರುವ ಕಾಂಗ್ರೆಸ್​ ಲೋಕಸಭೆ ಚುನಾವಣೆ ಗೆಲ್ಲುವ ವಿಶ್ವಾಸದಲ್ಲಿದೆ. ಅಲ್ಲದೇ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಜಾರಿ ಮಾಡಿದೆ. ಇದು ಲೋಕಸಭೆ ಚುನಾವಣೆ ಮೇಲೂ ಪ್ರಭಾವ ಬೀರುವ ಸಾಧ್ಯತೆಗಳಿವೆ. ಆದ್ದರಿಂದ ಜೆಡಿಎಸ್​ ಜೊತೆ ಒಪ್ಪಂದ ಮಾಡಿಕೊಂಡು ಚುನಾವಣೆಗೆ ಹೋಗುವುದು ಸೂಕ್ತ. ಮೈತ್ರಿಯಾದರೆ ಕಾಂಗ್ರೆಸ್ ಮಣಿಸಲು ಸುಲಭ ಎಂಬ ಲೆಕ್ಕಾಚಾರ ಬಿಜೆಪಿ ಹಾಗೂ ಜೆಡಿಎಸ್​ನದ್ದಾಗಿದೆ.

ಕಾಂಗ್ರೆಸ್ ಕಟ್ಟಿಹಾಕಲು ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿ ಬಗ್ಗೆ ಈಗಾಗಲೇ ಸಾಧಕ ಬಾಧಕಗಳ ಬಗ್ಗೆ ಎರಡೂ ಪಕ್ಷಗಳಲ್ಲಿ ಚರ್ಚೆ ಆಗಿದ್ದು, ಬಿಜೆಪಿ ಹಾಗೂ ಜೆಡಿಎಸ್ ಮತಗಳು ಕ್ರೂಢೀಕರಣವಾದರೆ ಕಾಂಗ್ರೆಸ್ ಮಣಿಸಲು ಸುಲಭ ಎಂದು ಎರಡೂ ಪಕ್ಷಗಳ ನಾಯಕರ ಲೆಕ್ಕಾಚಾರವಾಗಿದೆ. 20ರಿಂದ 22 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಕಣಕ್ಕಿಸಲು ಚಿಂತನೆ ನಡೆಸಿದೆ. ಇನ್ನುಳಿದಂತೆ 6ರಿಂದ 8 ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸುವ ಮಾತುಕತೆಗಳು ನಡೆದಿವೆ ಎನ್ನಲಾಗಿದೆ. ಇನ್ನು ಲೋಕಸಭಾ ಚುನಾವಣೆಗೂ ಮುನ್ನ ಎದುರಾಗುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಿಂದಲೇ ಮೈತ್ರಿಗೆ ಮುನ್ನುಡಿ ಬರೆಯುವ ಸಾಧ್ಯತೆಗಳಿವೆ. ಇದಕ್ಕಾಗಿಯೇ ಕಳೆದ ಮೂರು ದಿನಗಳ ಹಿಂದೆಯೇ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ದೆಹಲಿಗೆ ತೆರಳಿ ಬಿಜೆಪಿ ರಾಷ್ಟ್ರೀಯ ನಾಯಕರೊಂದಿಗೆ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜೆಡಿಎಸ್​ಗೆ ಯಾವೆಲ್ಲ ಕ್ಷೇತ್ರಗಳು?

ಒಂದು ವೇಳೆ ಬಿಜೆಪಿ ಜೆಡಿಎಸ್​ ಮೈತ್ರಿ ಪಕ್ಕಾ ಆದರೆ ದಳಪತಿಗಳಿಗೆ ಯಾವೆಲ್ಲ ಲೋಕಸಭಾ ಕ್ಷೇತ್ರಗಳು ದೊರೆಯಲಿವೆ ಎನ್ನುವುದನ್ನು ನೊಡುವುದಾದರೆ, ಬಹುತೇಕ ಇಡೀ ಹಳೇ ಮೈಸೂರು ಭಾಗವನ್ನೇ ಜೆಡಿಎಸ್​ಗೆ ಬಿಟ್ಟು ಕೊಡುವ ಚಿಂತನೆಯಲ್ಲಿ ಬಿಜೆಪಿ ಇದೆ. ಹಾಸನ, ಮಂಡ್ಯ, ರಾಮನಗರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಇನ್ನು ಎರಡ್ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸುವ ಸಾಧ್ಯೆತಗಳಿವೆ.

ಹಾಲಿ ಸಂಸದರಿಗೆ ಟಿಕೆಟ್‌ ತಪ್ಪುವ ಸಾಧ್ಯತೆ

ಹಾಲಿ ಇರುವ 25 ಬಿಜೆಪಿ ಸಂಸದರ ಪೈಕಿ 12ಕ್ಕೂ ಹೆಚ್ಚು ಸಂಸದರಿಗೆ ಟಿಕೆಟ್‌ ತಪ್ಪುವ ಸಾಧ್ಯತೆಯಿದೆ. ಕೆಲವರಿಗೆ ವಯಸ್ಸು ಹಾಗೂ ಅನಾರೋಗ್ಯದ ಕಾರಣದಿಂದ ಟಿಕೆಟ್‌ ತಪ್ಪದರೆ, ಇನ್ನು ಕೆಲವರಿಗೆ ಪಕ್ಷದ ಸಂಘಟನೆಯಲ್ಲಿನ ನಿಷ್ಕ್ರೀಯತೆ ಮತ್ತು ನಿರಾಸಕ್ತಿ ಕಾರಣಕ್ಕಾಗಿ ಟಿಕೆಟ್‌ ನೀಡದೇ ಇರುವ ಸಾಧ್ಯತೆಗಳಿವೆ. ಜತೆಗೆ ಕೆಲವರು ಸತತವಾಗಿ ಮೂರ್ನಾಲ್ಕು ಬಾರಿ ಗೆದ್ದಿರುವುದರಿಂದ ಆಡಳಿತ ವಿರೋಧಿ ಅಲೆ ಇರುವುದರಿಂದ ಟಿಕೆಟ್​ ಕೈತಪ್ಪುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಒಟ್ಟಿನಲ್ಲಿ ಸದ್ಯ ರಾಜ್ಯ ರಾಜಕಾರಣದಲ್ಲಿ ಲೋಕಸಭೆ ಚುನಾವಣೆಗೆ ಸಕಲ ಸಿದ್ಧತೆಗಳು ನಡೆದಿದ್ದು, ಜೆಡಿಎಸ್-ಬಿಜೆಪಿ ಮೈತ್ರಿ ಯಾವ ರೀತಿ ಇರಲಿದೆ? ಇದಕ್ಕೆ ಕಾಂಗ್ರೆಸ್ ಹೇಗೆ ತಿರುಗೇಟು ನೀಡಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

Published On - 12:04 pm, Mon, 5 June 23

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ