ಶೀಘ್ರವೇ ಕರ್ನಾಟಕ ರಾಜ್ಯ ಬಿಜೆಪಿ ಕೋರ್ ಕಮಿಟಿ ಪುನಾರಚನೆ ಸಾಧ್ಯತೆ; ಯಾರಿಗೆಲ್ಲಾ ಸ್ಥಾನ?
ಹಾಲಿ ಕೋರ್ ಕಮಿಟಿಯಲ್ಲಿ ಬಸವರಾಜ್ ಬೊಮ್ಮಾಯಿ ಇಲ್ಲ. ಬಿಜೆಪಿ ಕೋರ್ ಕಮಿಟಿ ಪುನಾರಚನೆಯಲ್ಲಿ ಬೊಮ್ಮಾಯಿಗೆ ಸ್ಥಾನ ಸಿಗಲಿದೆ. ಕೇಂದ್ರ, ರಾಜ್ಯದಲ್ಲಿ ಸಚಿವ ಸ್ಥಾನ ಪಡೆದಿರುವ ಕೆಲವರಿಗೆ ಸ್ಥಾನ ಸಿಗಲಿದೆಯೇ ಎಂಬ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಬೆಂಗಳೂರು: ಶೀಘ್ರದಲ್ಲೇ ಕರ್ನಾಟಕ ರಾಜ್ಯ ಬಿಜೆಪಿ ಕೋರ್ ಕಮಿಟಿ ಪುನಾರಚನೆ ಸಾಧ್ಯತೆ ಇದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಸ್ಥಾನಕ್ಕೇರಿದ ಬೆನ್ನಲ್ಲೇ ಪುನಾರಚನೆ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಹೊಸ ಕೋರ್ ಕಮಿಟಿಯಲ್ಲಿ ಹಲವು ಬದಲಾವಣೆ ನಿಶ್ಚಿತ. ಡಿಸಿಎಂ ಸ್ಥಾನಗಳೂ ಇಲ್ಲ ಹಾಗೂ ಕೆಲ ಸಚಿವರಿಗೆ ಕೊಕ್ ಹಿನ್ನೆಲೆಯಲ್ಲಿ, 4-5 ನಾಯಕರ ಕೈಬಿಟ್ಟು ಹೊಸ ನಾಯಕರ ಸೇರ್ಪಡೆ ಚಿಂತನೆ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನೇತೃತ್ವದ ರಾಜ್ಯ ಬಿಜೆಪಿ ಕೋರ್ ಕಮಿಟಿ ಶೀಘ್ರವೇ ಪುನಾರಚನೆ ಆಗಲಿದೆ ಎಂದು ತಿಳಿದುಬಂದಿದೆ.
ರಾಜ್ಯ ಬಿಜೆಪಿ ಕೋರ್ ಕಮಿಟಿ ಪುನಾರಚನೆಯಲ್ಲಿ ಕೆಲವರು ಔಟ್ ಆಗಲಿದ್ದಾರೆ. ಸಿಎಂ ಸ್ಥಾನ ಅಲಂಕರಿಸಿರುವ ಬಸವರಾಜ್ ಬೊಮ್ಮಾಯಿ ಇನ್ ಆಗಲಿದ್ದಾರೆ. ಬಿ.ಎಸ್. ಯಡಿಯೂರಪ್ಪ, ಪ್ರಲ್ಹಾದ್ ಜೋಶಿ ಕೋರ್ ಕಮಿಟಿಯಲ್ಲಿ ಮುಂದುವರಿಯಲಿದ್ದಾರೆ. ಸಚಿವ ಸ್ಥಾನ ಕಳೆದುಕೊಂಡ ಜಗದೀಶ್ ಶೆಟ್ಟರ್ಗೆ ಸ್ಥಾನ ಅನುಮಾನ ಎಂದು ಹೇಳಲಾಗುತ್ತಿದೆ. ಕೆ.ಎಸ್. ಈಶ್ವರಪ್ಪ, ಆರ್. ಅಶೋಕ್, ಬಿ. ಶ್ರೀರಾಮುಲು ಕಮಿಟಿಯಲ್ಲಿ ಮುಂದುವರಿಯಲಿದ್ದಾರೆ.
ಉಪಮುಖ್ಯಮಂತ್ರಿ ಆಗಿದ್ದ ಡಾ. ಅಶ್ವತ್ಥ್ ನಾರಾಯಣ ಕೋರ್ ಕಮಿಟಿಯಲ್ಲಿ ಮುಂದುವರಿದರೆ, ಮತ್ತೊಬ್ಬ ಡಿಸಿಎಂ ಆಗಿದ್ದ ಲಕ್ಷ್ಮಣ ಸವದಿ ಮುಂದುವರಿಯುವುದು ಅನುಮಾನವಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಹಲವು ಬದಲಾವಣೆ ಹಿನ್ನೆಲೆಯಲ್ಲಿ, ಈ ಬಾರಿ ಕೋರ್ ಕಮಿಟಿಯಲ್ಲಿ ನಾಲ್ಕೈದು ನಾಹಾಲಿ ಕೋರ್ ಕಮಿಟಿಯಲ್ಲಿ ಬಸವರಾಜ್ ಬೊಮ್ಮಾಯಿ ಇಲ್ಲ. ಬಿಜೆಪಿ ಕೋರ್ ಕಮಿಟಿ ಪುನಾರಚನೆಯಲ್ಲಿ ಬೊಮ್ಮಾಯಿಗೆ ಸ್ಥಾನ ಸಿಗಲಿದೆ. ಕೇಂದ್ರ, ರಾಜ್ಯದಲ್ಲಿ ಸಚಿವ ಸ್ಥಾನ ಪಡೆದಿರುವ ಕೆಲವರಿಗೆ ಸ್ಥಾನ ಸಿಗಲಿದೆಯೇ ಎಂಬ ಬಗ್ಗೆ ಅನುಮಾನ ವ್ಯಕ್ತವಾಗಿದೆ.ಯಕರಿಗೆ ಸ್ಥಾನ ಸಿಗಲಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಹಾಲಿ ಕೋರ್ ಕಮಿಟಿಯಲ್ಲಿ ಬಸವರಾಜ್ ಬೊಮ್ಮಾಯಿ ಇಲ್ಲ. ಬಿಜೆಪಿ ಕೋರ್ ಕಮಿಟಿ ಪುನಾರಚನೆಯಲ್ಲಿ ಬೊಮ್ಮಾಯಿಗೆ ಸ್ಥಾನ ಸಿಗಲಿದೆ. ಕೇಂದ್ರ, ರಾಜ್ಯದಲ್ಲಿ ಸಚಿವ ಸ್ಥಾನ ಪಡೆದಿರುವ ಕೆಲವರಿಗೆ ಸ್ಥಾನ ಸಿಗಲಿದೆಯೇ ಎಂಬ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಇದನ್ನೂ ಓದಿ: ಜನರ ಆಶೀರ್ವಾದ ಕೇಳಲು ಹೊರಡುತ್ತಿದ್ದಾರೆ ಕೇಂದ್ರ ಸಚಿವರು; ಆಗಸ್ಟ್ 16ರಿಂದ ಪ್ರಾರಂಭ ಬಿಜೆಪಿ ಜನಾಶೀರ್ವಾದ ಯಾತ್ರೆ
ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ 2 ಐಷಾರಾಮಿ ಕಾರುಗಳಿಗೆ ಬೆಂಕಿ: ಚುರುಕುಗೊಂಡ ಪೊಲೀಸ್ ತನಿಖೆ