ಗುತ್ತಿಗೆಯಲ್ಲಿ ಮುಸ್ಲಿಂಗೆ ಮೀಸಲು ಮಸೂದೆ ಅಂಗೀಕಾರ: ಸರ್ಕಾರದ ವಿರುದ್ಧ ತೊಡೆತಟ್ಟಿದ ಬಿಜೆಪಿ
ವಿರೋಧದ ಮಧ್ಯೆಯೇ ವಿಧಾನಸಭೆಯಲ್ಲಿ ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ ಮಸೂದೆ ಅಂಗೀಕಾರವಾಗಿದೆ. ಈ ವಿಚಾರವಾಗಿ ಇಂದು ವಿಧಾನಸಭೆಯಲ್ಲಿ ಹೈಡ್ರಾಮಾ ನಡೆದಿದೆ. ಬಳಿಕ ಈ ವಿಚಾರವಾಗಿ ಬಿಜೆಪಿ ನಿಯೋಗ ರಾಜ್ಯಪಾಲರ ಕಾರ್ಯದರ್ಶಿಗೆ ದೂರು ಸಲ್ಲಿಸಿದೆ. ಕೇಂದ್ರ ಸಚಿವೆ ಶೋಭಾ ಕೂಡ ರಾಜ್ಯಪಾಲರಿಗೆ ಪತ್ರ ಬರೆದು ಈ ವಿಧೇಯಕಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, ಮಾರ್ಚ್ 21: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸದ್ಯ ಹನಿಟ್ರ್ಯಾಪ್ ಮತ್ತು ಮುಸ್ಲಿಂ ಮೀಸಲಾತಿ (Muslim reservation) ವಿಚಾರಗಳು ಸಾಕಷ್ಟು ಕೋಲಾಹಲ ಎಬ್ಬಿಸಿವೆ. ಇಂದು ವಿಧಾನಸಭೆ ಕಲಾಪದಲ್ಲಿ ಮುಸ್ಲಿಂ ಮೀಸಲಾತಿ ವಿಧೇಯಕ ಕುರಿತು ಚರ್ಚೆ ವೇಳೆ ಹೈಡ್ರಾಮಾವೇ ನಡೆದಿದೆ. ಪರ-ವಿರೋಧದ ಮಧ್ಯೆ ಕೊನೆಗೂ ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ ಮಸೂದೆ ಅಂಗೀಕಾರವಾಗಿದೆ. ಸದ್ಯ ಈ ವಿಚಾರವಾಗಿ ಸರ್ಕಾರದ ವಿರುದ್ಧ ತೊಡೆತಟ್ಟಿರುವ ಬಿಜೆಪಿ ಮೀಸಲಾತಿ ರದ್ದು ಮಾಡುವಂತೆ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ (bjp) ನಿಯೋಗ ರಾಜ್ಯಪಾಲರ ಕಾರ್ಯದರ್ಶಿಗೆ ದೂರು ಸಲ್ಲಿಸಿದೆ.
ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿಗೆ ಬಿಜೆಪಿ ಸಾಕಷ್ಟು ವಿರೋಧಿಸುತ್ತಿದೆ. ಆದರೂ ವಿರೋಧದ ನಡುವೆ ಬಿಲ್ ಮಂಡನೆ ಆಗಿದೆ. ಹೀಗಿರುವಾಗ ಮೀಸಲಾತಿ ರದ್ದು ಅಥವಾ ಕೈಬಿಡುವಂತೆ ಬಿಜೆಪಿ ನಿಯೋಗ ರಾಜ್ಯಪಾಲರ ಕಾರ್ಯದರ್ಶಿಗೆ ದೂರು ಸಲ್ಲಿಸಿದೆ. ಅದೇ ರೀತಿಯಾಗಿ ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ 18 ಸದಸ್ಯರ ಅಮಾನತು ಖಂಡಿಸಿ ರಾಜಭವನಕ್ಕೆ ಭೇಟಿ ನೀಡಿದ ಬಿಜೆಪಿ ನಾಯಕರ ನಿಯೋಗ, ರಾಜ್ಯಪಾಲರ ಕಾರ್ಯದರ್ಶಿ ಮೂಲಕ ದೂರು ಸಲ್ಲಿಸಿದೆ.
ಇದನ್ನೂ ಓದಿ: ವಿಧಾನಸಭೆಯಲ್ಲಿ ಹೈಡ್ರಾಮಾ: ಸ್ಪೀಕರ್ ಮೇಲೆ ಕಾಗದ ಚೂರು ಎಸೆದ ಶಾಸಕರು!
ಧರ್ಮೇಂದ್ರ ಪ್ರಧಾನ್ ತಂದೆ ದೇಬೇಂದ್ರ ಪ್ರಧಾನ್ ನಿಧನದ ಹಿನ್ನೆಲೆ ಒಡಿಶಾದ ಭುವನೇಶ್ವರಕ್ಕೆ ರಾಜ್ಯಪಾಲ ಟಿ.ಸಿ.ಗೆಹ್ಲೋಟ್ ಸಂತಾಪ ಸೂಚಿಸಲು ತೆರಳಿದ್ದು, ಹೀಗಾಗಿ ರಾಜ್ಯಪಾಲರ ಕಾರ್ಯದರ್ಶಿಗೆ ಆರ್.ಅಶೋಕ್ ನೇತೃತ್ವದಲ್ಲಿ ದೂರು ನೀಡಲಾಗಿದೆ.
ಸಿದ್ದರಾಮಯ್ಯ ಮುಸ್ಲಿಮರ ಪರವಾಗಿ ನಿಂತಿದ್ದಾರೆ: ಆರ್ ಅಶೋಕ್
ದೂರು ಬಳಿಕ ಆರ್. ಅಶೋಕ್ ಪ್ರತಿಕ್ರಿಯಿಸಿದ್ದು, ಧರ್ಮಾಧಾರಿತ ಮೀಸಲಾತಿ ನೀಡಲು ಯಾವುದೇ ಅಧಿಕಾರ ಇಲ್ಲ. ಇದೊಂದು ರೀತಿ ಹಲಾಲ್ ಬಜೆಟ್ ಮಾಡಿದ್ದಾರೆ. ಹಿಂದೂ-ಮುಸ್ಲಿಂ ಒಟ್ಟಿಗೆ ಹೋಗಬೇಕೆಂದು ಸಂವಿಧಾನ ಹೇಳುತ್ತೆ. ಹಿಂದೂಗಳನ್ನು ಭಾಗ ಮಾಡಿದ್ದಾರೆ, ಇದು ಸಂವಿಧಾನ ವಿರೋಧಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸ್ಲಿಮರ ಪರವಾಗಿ ನಿಂತಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.
ರಾಜ್ಯಪಾಲರಿಗೆ ಕೇಂದ್ರ ಸಚಿವೆ ಶೋಭಾ ಮನವಿ
ಇನ್ನು ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ವಿಧೇಯಕಕ್ಕೆ ಒಪ್ಪಿಗೆ ನೀಡದಂತೆ ರಾಜ್ಯಪಾಲರಿಗೆ ಪತ್ರದ ಮೂಲಕ ಕೇಂದ್ರ ಸಚಿವೆ ಶೋಭಾ ಮನವಿ ಮಾಡಿದ್ದಾರೆ. ‘ಇದು ಸರ್ಕಾರಿ ಟೆಂಡರ್‌ಗಳು ಮತ್ತು ಒಪ್ಪಂದಗಳಲ್ಲಿ ಮುಸ್ಲಿಮರಿಗೆ 2B ಅಡಿಯಲ್ಲಿ 4% ಮೀಸಲಾತಿಯನ್ನು ನೀಡಲು ಪ್ರಯತ್ನಿಸಲಾಗುತ್ತಿದೆ. ಕರ್ನಾಟಕ ವಿಧಾನಸಭೆಯಲ್ಲಿ ವಿರೋಧದ ಮಧ್ಯೆಯೇ ವಿಧಾನಸಭೆಯಲ್ಲಿ ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡುವ ವಿಧೇಯಕ ಬಿಲ್ ಮಂಡನೆ ಮಾಡಲಾಗಿದೆ. ಈ ವಿಚಾರವಾಗಿ ಇಂದು ವಿಧಾನಸಭೆಯಲ್ಲಿ ಹೈಡ್ರಾಮಾ ನಡೆದಿದೆ. ಬಳಿಕ ಈ ವಿಚಾರವಾಗಿ ಬಿಜೆಪಿ ನಿಯೋಗ ರಾಜ್ಯಪಾಲರ ಕಾರ್ಯದರ್ಶಿಗೆ ದೂರು ಸಲ್ಲಿಸಿದೆ. ಕೇಂದ್ರ ಸಚಿವೆ ಶೋಭಾ ಕೂಡ ರಾಜ್ಯಪಾಲರಿಗೆ ಪತ್ರ ಬರೆದು ಈ ವಿಧೇಯಕಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಪರಿಚಯಿಸಲಾದ ಈ ಮಸೂದೆಯು ಸಂವಿಧಾನಬಾಹಿರ, ತಾರತಮ್ಯ ಮತ್ತು ಭಾರತೀಯ ಸಂವಿಧಾನದ ನೀತಿಗೆ ವಿರುದ್ಧವಾಗಿದೆ’ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಸದ್ದಿಲ್ಲದೇ ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಘೋಷಿಸಿದ ಸಿದ್ದರಾಮಯ್ಯ!
ಭಾರತೀಯ ಸಂವಿಧಾನವು ಧರ್ಮದ ಆಧಾರದ ಮೇಲೆ ಮೀಸಲಾತಿಯನ್ನು ಅನುಮತಿಸುವುದಿಲ್ಲ, ಏಕೆಂದರೆ ಸಮಾನತೆ, ತಾರತಮ್ಯ ಮಾಡದಿರುವುದು ಮತ್ತು ಸಾರ್ವಜನಿಕ ಉದ್ಯೋಗದಲ್ಲಿ ಸಮಾನ ಅವಕಾಶ ತತ್ವಗಳನ್ನು ಉಲ್ಲಂಘಿಸುತ್ತದೆ. ಗೌರವಾನ್ವಿತ ಸುಪ್ರೀಂ ಕೋರ್ಟ್ ದೃಢೀಕರಣ ಕ್ರಮವು ಧಾರ್ಮಿಕ ಗುರುತಿನ ಆಧಾರದ ಮೇಲೆ ಅಲ್ಲ, ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆಯನ್ನು ಆಧರಿಸಿರಬೇಕು ಎಂದು ತೀರ್ಪು ನೀಡಿದೆ. ಪ್ರಸ್ತಾವಿತ ತಿದ್ದುಪಡಿಯು ಸಾಂವಿಧಾನಿಕ ರಕ್ಷಣೆಗಳ ಮುಕ್ತ ವಂಚನೆಯಾಗಿದೆ ಮತ್ತು ನ್ಯಾಯಾಂಗದಿಂದ ರದ್ದುಗೊಳ್ಳುವ ಸಾಧ್ಯತೆಯಿದೆ. ಅಂತಹ ಮೀಸಲಾತಿಯನ್ನು ನೀಡುವುದು ನಮ್ಮ ಸಾಂವಿಧಾನಿಕ ಚೌಕಟ್ಟಿನ ಸಮಗ್ರತೆಯನ್ನು ಹಾಳುಮಾಡುವುದಲ್ಲದೆ, ನಮ್ಮ ರಾಷ್ಟ್ರದ ಜಾತ್ಯತೀತ ರಚನೆಯನ್ನು ಅಪಾಯಕ್ಕೆ ಸಿಲುಕಿಸುತ್ತದೆ. ಹಾಗಾಗಿತಿದ್ದುಪಡಿ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ ಮಾಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:58 pm, Fri, 21 March 25