ವೋಟರ್ ಐಡಿ ಪ್ರಕರಣ: ಕಾಂಗ್ರೆಸ್ ವಿರುದ್ಧವೇ ಹಗರಣ ತಿರುಗಿಸಿದ ಬಿಜೆಪಿ, ಮಹತ್ವದ ದಾಖಲೆ ಬಿಡುಗಡೆ

ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ಪ್ರತ್ಯಸ್ತ್ರ ಪ್ರಯೋಗಿಸಿದೆ.

ವೋಟರ್ ಐಡಿ ಪ್ರಕರಣ:  ಕಾಂಗ್ರೆಸ್ ವಿರುದ್ಧವೇ ಹಗರಣ ತಿರುಗಿಸಿದ ಬಿಜೆಪಿ, ಮಹತ್ವದ ದಾಖಲೆ ಬಿಡುಗಡೆ
ಬಿಜೆಪಿ ಮತ್ತು ಕಾಂಗ್ರೆಸ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Nov 19, 2022 | 7:36 PM

ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್  ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ ಪ್ರಕಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ರೆ, ಇತ್ತ ಈ ವಿಚಾರಕ್ಕೆ ಆಡಳಿತರೂಢ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ಜಟಾಪಟಿ ಜೋರಾಗಿದೆ. ಇನ್ನು ಇದರ ಬಗ್ಗೆ ಮೊದಲಿಗೆ ಧ್ವನಿ ಎತ್ತಿ ದೂರು ದಾಖಲಿಸಿದ್ದ ಕಾಂಗ್ರೆಸ್​ ವಿರುದ್ಧವೇ ಇದೀಗ ಬಿಜೆಪಿ ಪ್ರತ್ಯಸ್ತ್ರ ಪ್ರಯೋಗಿಸಿದ್ದು,  ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ಮಹತ್ವದ ದಾಖಲೆ ಬಿಡುಗಡೆ ಮಾಡಿದೆ.

ವೋಟರ್​ ಐಡಿ ಅಕ್ರಮ: ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ ಕರ್ನಾಟಕ ಕಾಂಗ್ರೆಸ್

ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ಹಗರಣ ತಿರುಗಿಸಿದ ಬಿಜೆಪಿ, ಸ್ಫೋಟಕ ದಾಖಲೆಗಳ ಜತೆ ಕಾಂಗ್ರೆಸ್ ವಿರುದ್ಧ ದೂರು ಚುನಾವಣೆ ಆಯೋಗಕ್ಕೆ ದೂರು ನೀಡಿದೆ. ಚಿಲುಮೆ ಸಂಸ್ಥೆಗೆ ಅನುಮತಿ ಕೊಟ್ಟಿದ್ದೇ ಕಾಂಗ್ರೆಸ್, ಸಿದ್ದರಾಮಯ್ಯ ಸಿಎಂ ಆಗಿದ್ದಾಗ 2017ರಲ್ಲಿ ಚಿಲುಮೆ ಸಂಸ್ಥೆಗೆ ಅನುಮತಿ ನೀಡಲಾಗಿದೆ. 2017ರ ಸೆಪ್ಟೆಂಬರ್ 27ರಂದು ಬಿಬಿಎಂಪಿ ಅನುಮತಿ ಕೊಟ್ಟಿತ್ತು ಎಂದು ದೂರಿನಲ್ಲಿ ಹಲವು ದಾಖಲೆಗಳನ್ನು ಚುನಾವಣೆ ಆಯೋಗಕ್ಕೆ ಸಲ್ಲಿಸಿದೆ.

BBMP ವೈಟ್​​ಫೀಲ್ಡ್ ಉಪವಲಯದಲ್ಲಿ ಕಾರ್ಯನಿರ್ವಹಿಸಲು ಅನುಮತಿ ನೀಡಿದೆ. ಬಿಎಲ್​​ಒಗಳು, ಜಿಲ್ಲಾಧಿಕಾರಿಗಳು, ಕಂದಾಯ ಅಧಿಕಾರಿಗಳ ಜೊತೆಗೂಡಿ ಮತದಾನ ಪಟ್ಟಿ ಪರಿಷ್ಕರಣೆ & ಇತರೆ ಕಾರ್ಯಗಳನ್ನ ನಿರ್ವಹಿಸಲು ಆದೇಶ ಹೊರಡಿಸಿತ್ತು ಎಂದು 2017ರ ಸೆಪ್ಟೆಂಬರ್​​ 27ರಂದು ಅನುಮತಿ ನೀಡಿದ್ದ ದಾಖಲೆ ಬಿಡುಗಡೆ ಮಾಡಿದೆ.

ಬಿಎಲ್ ಓಗಳ ಜೊತೆ ಸೇರಿಕೊಂಡು ನಿಯಮಾನುಸಾರ ಕೆಲಸ ನಿರ್ವಹಿಸಲು ಚಿಲುಮೆ ಸಂಸ್ಥೆಗೆ ಪಾಲಿಕೆ ಆದೇಶ ನೀಡಿತ್ತು. ಆದರೆ ಚಿಲುಮೆ ಸಂಸ್ಥೆ ಬಿಎಲ್ ಓಗಳ ಬದಲಾಗಿ ತಾವೇ ಬಿಎಲ್ ಓಗಳಾಗಿ ನಕಲಿ ಐಡಿ ಸೃಷ್ಟಿಸಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿರುವ ಆರೋಪ ಬಂದಿದೆ. ಹೀಗಾಗಿ ಚಿಲುಮೆ ಸಂಸ್ಥೆ ತಪ್ಪು ಮಾಡಿದ್ರೆ ನಮ್ಮ ಪಕ್ಷಕ್ಕೇನು ಸಂಬಂಧ ಎಂದು ಬಿಜೆಪಿ ವಾದಿಸುತ್ತಿದೆ.

ಸಿದ್ದರಾಮಯ್ಯ ಅವಧಿಯಲ್ಲೇ ಆದೇಶ ಹಿನ್ನಲೆ ಸಿದ್ದರಾಮಯ್ಯನವರೇ ಪ್ರಮುಖ ಆರೋಪಿ ಎಂದು ಕೌಂಟರ್ ಸಿಎಂಗೆ ಗೊತ್ತಿರಲೇಬೇಕು ಎಂಬ ಸಿದ್ದರಾಮಯ್ಯ ವಾದವನ್ನೇ ಮುಂದಿಟ್ಟುಕೊಂಡು ಅಂದು ಆದೇಶ ನೀಡಿದ ಸಂದರ್ಭದಲ್ಲಿ ಸಿಎಂ ಆಗಿದ್ದಾಗ ಸಿದ್ದರಾಮಯ್ಯಗೆ ಗೊತ್ತಿರಲಿಲ್ಲವೇ ಎಂದು ಬಿಜೆಪಿ ಪ್ರಶ್ನಿಸಿದೆ.

ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಕೇಳುತ್ತಿರುವ ಸಿದ್ದರಾಮಯ್ಯಗೆ ಈಗ ಇದೇ ದಾಖಲೆ ಮುಂದಿಟ್ಟು ಸಿದ್ದು ವಿರುದ್ಧವೇ ತನಿಖೆ ನಡೆಸಬೇಕು ಎನ್ನುವುದು ಬಿಜೆಪಿ ಆಗ್ರಹಿಸುತ್ತಿದೆ. ಈ ಪ್ರಕರಣದ ಬೀಜ ಬಿತ್ತಿದ್ದೇ ಅಂದಿನ ಕಾಂಗ್ರೆಸ್ ಸರ್ಕಾರ ಎನ್ನುತ್ತಿರುವ ಬಿಜೆಪಿ, ಇದನ್ನೇ ಮುಂದಿಟ್ಟುಕೊಂಡು ಕಾಂಗ್ರೆಸ್ ವಿರುದ್ಧ ಹರಿಹಾಯಲು ಕೆಲ ಸಚಿವರಿಗೆ ಪಕ್ಷದಿಂದ ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ಧ ತೀವ್ರವಾಗಿ ಹೋರಾಡಲು ಬಿಜೆಪಿ ನಿರ್ಧರಿಸಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ