AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಪ್ರಧಾನಿ ದೇವೇಗೌಡರನ್ನ ಹಿಂದಿನ ರಾತ್ರಿ ಮುಖ್ಯಮಂತ್ರಿ ಕಾಟಾಚಾರಕ್ಕೆ ಕರೆದರು -ಬಿಜೆಪಿ ಸಂಸ್ಕಾರ, ಶಿಷ್ಟಾಚಾರ ಇದೇನಾ? ಜೆಡಿಎಸ್ ಮತ್ತೆ ಟ್ವೀಟ್​!

ಘನವೇತ್ತ ಮಾನ್ಯ ಮುಖ್ಯಮಂತ್ರಿಗಳು ಬರೆದ ʼಘನವೇತ್ತʼ ಪತ್ರವನ್ನೊಮ್ಮೆ ʼಸಂಘಸಂಸ್ಕಾರʼದ ಬಿಜೆಪಿಗರು ಗಮನಿಸಬೇಕು. ಪತ್ರದಲ್ಲಿ ಮಾಜಿ ಪ್ರಧಾನಿಗಳ ಹೆಸರೆಲ್ಲಿ ಬರೆಯಲ್ಪಟ್ಟಿದೆ? (ಕೊನೆಯಲ್ಲಿ) ಕನ್ನಡ ನೆಲದ ಏಕೈಕ ಪ್ರಧಾನಿಯಾಗಿದ್ದ ಮೇರು ನಾಯಕರಿಗೆ ಪತ್ರ ಬರೆಯುವ ಸಂಸ್ಕಾರ, ಶಿಷ್ಟಾಚಾರ ಇದೇನಾ? - ಜೆಡಿಎಸ್ ಟ್ವೀಟ್

ಮಾಜಿ ಪ್ರಧಾನಿ ದೇವೇಗೌಡರನ್ನ ಹಿಂದಿನ ರಾತ್ರಿ ಮುಖ್ಯಮಂತ್ರಿ ಕಾಟಾಚಾರಕ್ಕೆ ಕರೆದರು -ಬಿಜೆಪಿ ಸಂಸ್ಕಾರ, ಶಿಷ್ಟಾಚಾರ ಇದೇನಾ? ಜೆಡಿಎಸ್ ಮತ್ತೆ ಟ್ವೀಟ್​!
ದೇವೇಗೌಡರನ್ನ ಹಿಂದಿನ ರಾತ್ರಿ ಮುಖ್ಯಮಂತ್ರಿ ಕಾಟಾಚಾರಕ್ಕೆ ಕರೆದರು: ಬಿಜೆಪಿ ಸಂಸ್ಕಾರ, ಶಿಷ್ಟಾಚಾರ ಇದೇನಾ? ಜೆಡಿಎಸ್ ಮತ್ತೆ ಟ್ವೀಟ್​!
Follow us
TV9 Web
| Updated By: ಸಾಧು ಶ್ರೀನಾಥ್​

Updated on: Nov 12, 2022 | 10:24 AM

ಬೆಂಗಳೂರು: ರಾಜಧಾನಿ ಬೆಂಗಳೂರಿನ ನಿರ್ಮಾತೃ ಕೆಂಪೇಗೌಡರ ಪ್ರಗತಿಯ ಪ್ರತಿಮೆಯನ್ನು (Kempegowda Statue) ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ನಿನ್ನೆ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಅನಾವರಣ ಮಾಡಿದ್ದಾರೆ. ಈ ಮಧ್ಯೆ, ಆಡಳಿತಾರೂಢ ಬಿಜೆಪಿ (Karnataka BJP) ಮತ್ತು ಜೆಡಿಎಸ್ (JDS) ನಡುವಣ ರಾಜಕೀಯ ವೈಷಮ್ಯ ಢಾಳಾಗಿ ಅನಾವರಣಗೊಂಡಿದೆ. ಮಾಜಿ ಪ್ರಧಾನಿಯನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿರಲಿಲ್ಲ ಎಂದು ಮೊದಲು ಕೂಗಾಡಿದ ಜೆಡಿಎಸ್ ಟ್ವೀಟ್​​ಗಳಿಗೆ ಬಿಜೆಪಿ ಪ್ರತ್ಯುತ್ತರ ನೀಡಿತು. ಆಮಂತ್ರಣ ಪತ್ರಿಕೆಯನ್ನೂ ತಲುಪಿಸಿದ್ದೇವೆ, ದೊಡ್ಡಗೌಡರಿಗೆ (HD Devegowda) ಫೋನೂ ಮಾಡಿದ್ದೇವೆ ಎಂದು ಸಿಎಂ ಬೊಮ್ಮಾಯಿ (Basavaraj Bommai) ಅವರೇ ಹೇಳಿದರು. ಅದಕ್ಕೆ ತಡಬಡಾಯಿಸಿದ ಜೆಡಿಎಸ್, ಇಂದು ಬೆಳಗ್ಗೆ ಮತ್ತೆ ಟ್ವೀಟ್ ಮಾಡಿ, ಅಲ್ಲ ಅದು ಹಂಗಲ್ಲ. ಕರೆದಿದ್ದು ನಿಜ. ಆದರೆ ಕರೆದ ರೀತಿ ನೀತಿ ಸರಿಯಿಲ್ಲ ಎಂದು ಅಲವತ್ತುಕೊಂಡಿದೆ. ಮೇರು ನಾಯಕನ ವಿಷಯದಲ್ಲಿ ಬಿಜೆಪಿ ಸಂಸ್ಕೃತಿ, ಸಂಸ್ಕಾರ, ಶಿಷ್ಟಾಚಾರ ಇದೇನಾ? ಎಂದು ಮತ್ತೆ ಟ್ವೀಟ್ ಮಾಡಿ, ಕಿಡಿಕಾರಿದೆ.

ಕೆಂಪೇಗೌಡ ಪ್ರತಿಮೆ ಉದ್ಘಾಟನೆಗೆ ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡರನ್ನ ಆಹ್ವಾನಿಸದ ವಿಚಾರವಾಗಿ ಟ್ವೀಟ್​ ಮೂಲಕ ಬಿಜೆಪಿ ವಿರುದ್ಧ ಮತ್ತೆ ಜೆಡಿಎಸ್ ಪಕ್ಷ ಆಕ್ರೋಶ ವ್ಯಕ್ತಪಡಿಸಿದೆ. ಮಾಡಿದ ತಪ್ಪನ್ನೇ ಸಮರ್ಥಿಸಿಕೊಳ್ಳುವುದು ಬಿಜೆಪಿಗೆ ಸಿದ್ಧಿಸಿರುವ ಕಲೆ. ಪ್ರತಿಮೆ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನಿಸಿ ಸಿಎಂ ಪತ್ರ ಬರೆದಿದ್ದರು. ಹೆಚ್​ಡಿಡಿಗೆ ಕರೆ ಮಾಡಿ ಪತ್ರ ಬರೆದಿದ್ದಾರೆ ಬಿಜೆಪಿ ಟ್ವೀಟ್ ಮಾಡಿದೆ.

ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಹೆಚ್​.ಡಿ.ದೇವೇಗೌಡರ ಹೆಸರೇ ಇಲ್ಲ. ನವೆಂಬರ್ 11ರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಪತ್ರ ಬರೆದಿದ್ದು ಯಾವಾಗ? ಆ ಪತ್ರ ಮಾಜಿ ಪ್ರಧಾನಿಗಳ ನಿವಾಸಕ್ಕೆ ತಲುಪಿಸಿದ್ದು ಯಾವಾಗ? ಕಮಲದವರ ಕಣ್ಣಿಗೆ ಕಾಮಾಲೆ ಬಡಿದಿದೆಯಾ, ಹೇಗೆ? ಸಿಎಂ ಪತ್ರವನ್ನು ‘ಸಂಘ ಸಂಸ್ಕಾರ’ದ ಬಿಜೆಪಿಗರು ಗಮನಿಸಬೇಕು. ಪತ್ರದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಹೆಸರೆಲ್ಲಿ ಬರೆಯಲ್ಪಟ್ಟಿದೆ? ಮೇರು ನಾಯಕನಿಗೆ ಪತ್ರ ಬರೆಯುವ ಸಂಸ್ಕಾರ, ಶಿಷ್ಟಾಚಾರ ಇದೇನಾ? ಎಂದು ಟ್ವೀಟ್​​ ಮಾಡಿ ಜೆಡಿಎಸ್ ಗುಡುಗಿದೆ.

ಜನರಿಗೆ ಸತ್ಯ ಯಾವುದು? ಸುಳ್ಳು ಯಾವುದು? ಎಂಬುದು ತಿಳಿಯಲಿ -ಜೆಡಿಎಸ್ ​ಸರಣಿ ಟ್ವೀಟ್ ಸಾರಾಂಶ ಹೀಗಿದೆ:

ಮಾಡಿದ ತಪ್ಪನ್ನೇ ಲಜ್ಜೆಗೆಟ್ಟು ಸಮರ್ಥಿಸಿಕೊಳ್ಳುವುದು ಕಮಲಪಕ್ಷಕ್ಕೆ ಸಿದ್ಧಿಸಿರುವ ಕಲೆ. ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲ! ಆದರೆ; ಮುಖ್ಯಮಂತ್ರಿಗಳೇ ಪತ್ರ ಬರೆದು ಶ್ರೀ @H_D_Devegowda ಅವರನ್ನು ಆಹ್ವಾನಿಸಿದ್ದಾರೆಂದು ಜನರ ದಿಕ್ಕು ತಪ್ಪಿಸುತ್ತಿರುವ ರಾಜ್ಯ @BJP4Karnataka ಸರಕಾರ, ಅಸಲಿ ಕಥೆಯನ್ನೇ ಮುಚ್ಚಿಡುತ್ತಿದೆ. 1/8

ಮುಖ್ಯಮಂತ್ರಿಗಳು, ಮಾಜಿ ಪ್ರಧಾನಿಗಳಿಗೆ ಕರೆ ಮಾಡಿ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನಿಸಿ ಪತ್ರ ಬರೆದಿದ್ದಾರೆ ಎಂದು ಬಿಜೆಪಿ ಟ್ವೀಟಿಸಿದೆ.

ಸರಿ; ನವೆಂಬರ್‌ 11ರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು, ಪತ್ರ ಬರೆದಿದ್ದು ಯಾವಾಗ? ಆ ಪತ್ರವನ್ನು ಮಾಜಿ ಪ್ರಧಾನಿಗಳ ನಿವಾಸಕ್ಕೆ ತಲುಪಿಸಿದ್ದು ಯಾವಾಗ? 2/8

ಕಮಲದವರ ಕಣ್ಣಿಗೆ ಕಾಮಾಲೆ ಬಡಿದಿದೆಯಾ, ಹೇಗೆ? ಘನವೇತ್ತ ಮಾನ್ಯ ಮುಖ್ಯಮಂತ್ರಿಗಳು ಬರೆದ ʼಘನವೇತ್ತʼ ಪತ್ರವನ್ನೊಮ್ಮೆ ʼಸಂಘಸಂಸ್ಕಾರʼದ ಬಿಜೆಪಿಗರು ಗಮನಿಸಬೇಕು. ಪತ್ರದಲ್ಲಿ ಮಾಜಿ ಪ್ರಧಾನಿಗಳ ಹೆಸರೆಲ್ಲಿ ಬರೆಯಲ್ಪಟ್ಟಿದೆ? (ಕೊನೆಯಲ್ಲಿ) ಕನ್ನಡ ನೆಲದ ಏಕೈಕ ಪ್ರಧಾನಿಯಾಗಿದ್ದ ಮೇರು ನಾಯಕರಿಗೆ ಪತ್ರ ಬರೆಯುವ ಸಂಸ್ಕಾರ, ಶಿಷ್ಟಾಚಾರ ಇದೇನಾ? 3/8

ಮರುದಿನ 12.50ರ ಸಮಾರಂಭಕ್ಕೆ ರಾತ್ರಿ 9 ಗಂಟೆಗೆ ಮಾಜಿ ಪ್ರಧಾನಿಗಳಿಗೆ ಕಾಟಾಚಾರದ ಕರೆ ಮಾಡಿದ ಮುಖ್ಯಮಂತ್ರಿಗಳು, ತಾವು ಬರೆದ ಪತ್ರವನ್ನು ತಲುಪಿಸಿದ್ದು ಮಧ್ಯರಾತ್ರಿ 12.30 ಗಂಟೆಗೆ!! ಹಾಗಾದರೆ, ಅವರ ಮೊದಲ ಪತ್ರ ಹೋಗಿದ್ದು ಯಾರಿಗೆ? ಇಂಥ ಹಿರಿಯರ ವಿಷಯದಲ್ಲಿ ಜಬಾಬ್ದಾರಿ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳು ವರ್ತಿಸುವ ರೀತಿ ಹೀಗೇನಾ? 4/8

ಇದರಲ್ಲಿ ಸುಳ್ಳಾಡುವುದೇನಿದೆ? ಮುಖ್ಯಮಂತ್ರಿಗಳು ಬರೆದ ಪತ್ರವನ್ನು ಇಲ್ಲಿ ಲಗತ್ತಿಸಲಾಗಿದೆ. ಹಾಗಾದರೆ, ಮುಖ್ಯಮಂತ್ರಿಗಳೇ ಎಲ್ಲವನ್ನೂ ಹೇಳಲಿ. ಜನರಿಗೂ ಸತ್ಯ ಯಾವುದು? ಸುಳ್ಳು ಯಾವುದು? ಎನ್ನುವುದು ತಿಳಿಯಲಿ. ಸತ್ಯ ಹೇಳುವ ದಮ್ಮು, ತಾಖತ್ತು ಮುಖ್ಯಮಂತ್ರಿಗಳಿಗೆ ಇದೆ ಎಂದು ನಾವು ಭಾವಿಸುತ್ತೇವೆ. 5/8

ಇನ್ನು ಕನ್ನಡದ ಆಸ್ಮಿತೆ ಪ್ರಶ್ನೆ. ಬಿಜೆಪಿಗೆ ನಾಚಿಕೆಯಾಗಬೇಕು, ಹಿಂದಿ ಹೇರಿಕೆ ವಾಕರಿಕೆ ಬರುವಷ್ಟಿದೆ. ಉದ್ಯೋಗದಲ್ಲಿ ಕನ್ನಡಿಗರಿಗೆ ಪಂಗನಾಮ, ಈ ನೆಲದ ಸಂಸ್ಕೃತಿ, ಭಾಷೆ, ಆಚಾರ-ವಿಚಾರಗಳನ್ನು ಹತ್ತಿಕ್ಕಿ,ಇಡೀ ದಕ್ಷಿಣ ಭಾರತೀಯರನ್ನು ದೆಹಲಿ ಗುಲಾಮರನ್ನಾಗಿ ಮಾಡಲು ಹೊರಟಿರುವ ಬಿಜೆಪಿಗರಾ ಕನ್ನಡದ ಮಣ್ಣಿನ ಮಕ್ಕಳನ್ನು ಗುರುತಿಸಿದ್ದು? 6/8

‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’; ಇದು ಭಾರತ ಕಂಡ ಪರಮ ಢೋಂಗೀ ಘೋಷಣೆ. ಇದಕ್ಕೆ ʼಸಬ್ ಕಾ ಸರ್ವನಾಶ್ʼ ಎಂದು ಸೇರಿದರೆ ಪರಿಪೂರ್ಣ. ಕರ್ನಾಟಕದಲ್ಲಿ ಶಿಕ್ಷಣ, ಧರ್ಮ, ಜಾತಿ, ಆಚಾರ, ವಿಚಾರ, ಆಹಾರ, ಉಡುಪುಗಳ ವಿಷಯದಲ್ಲೂ ಬಿಜೆಪಿ ಮಾಡಿದ್ದು ಸಾಕ್ಷಾತ್ ಸರ್ವನಾಶವೇ. 7/8

ಕುಟುಂಬ ರಾಜಕಾರಣ ಅಂತೀರಾ? ಗುಜರಾತಿನಿಂದ ಶುರುವಾಗಿ ದೆಹಲಿವರೆಗೂ ಹಬ್ಬಿ, ಬಿಸಿಸಿಐ ಒಳಹೊಕ್ಕಿ ಕೂತಿದ್ದು ಯಾರ ಕುಟುಂಬ? ಕರ್ನಾಟಕದಲ್ಲಿ ಬೆಳೆದು ನಿಂತ ಬಿಜೆಪಿ ವಂಶವೃಕ್ಷಗಳೆಷ್ಟು? ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ, ಗುಜರಾತ್ ನಿಂದ ಒಡಿಶಾವರೆಗೆ ವ್ಯಾಪಿಸಿರುವ ಬಿಜೆಪಿ ವಂಶವೃಕ್ಷಗಳ ಕೊಂಬೆಗಳ ಲೆಕ್ಕ ಬಿಚ್ಚಿಡಬೇಕೆ? 8/8

RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು
ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ: ವಿಡಿಯೋ ವೈರಲ್
ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ: ವಿಡಿಯೋ ವೈರಲ್
ಐತಿಹಾಸಿಕ ಪ್ರವಾಸಿತಾಣ ನಂದಿಗಿರಿಧಾಮ ಫುಲ್ ಟ್ರಾಫಿಕ್ ಜಾಮ್..!
ಐತಿಹಾಸಿಕ ಪ್ರವಾಸಿತಾಣ ನಂದಿಗಿರಿಧಾಮ ಫುಲ್ ಟ್ರಾಫಿಕ್ ಜಾಮ್..!