AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪೇಗೌಡ ಪ್ರತಿಮೆ ಉದ್ಘಾಟನೆಗೆ ದೇವೇಗೌಡ್ರನ್ನ ಆಹ್ವಾನಿಸಿಲ್ಲ: ಜೆಡಿಎಸ್ ಆರೋಪಕ್ಕೆ ಸಾಕ್ಷಿ ಸಮೇತ ತಿರುಗೇಟು ಕೊಟ್ಟ ಬಿಜೆಪಿ

ಬೆಂಗಳೂರಿನ ದೇವನಹಳ್ಳಿ ಏರ್​ಪೋರ್ಟ್​ ಬಳಿ ಕೆಂಪೇಗೌಡ ಪ್ರತಿಮೆ ಉದ್ಘಾಟನೆಗೆ ದೇವೇಗೌಡ್ರನ್ನ ಆಹ್ವಾನಿಸಿಲ್ಲ ಎನ್ನವ ಜೆಡಿಎಸ್ ಆರೋಪಕ್ಕೆ ಬಿಜೆಪಿ ಸಾಕ್ಷಿ ಸಮೇತ ತಿರುಗೇಟು ನೀಡಿದೆ.

ಕೆಂಪೇಗೌಡ ಪ್ರತಿಮೆ ಉದ್ಘಾಟನೆಗೆ ದೇವೇಗೌಡ್ರನ್ನ ಆಹ್ವಾನಿಸಿಲ್ಲ: ಜೆಡಿಎಸ್ ಆರೋಪಕ್ಕೆ ಸಾಕ್ಷಿ ಸಮೇತ ತಿರುಗೇಟು ಕೊಟ್ಟ ಬಿಜೆಪಿ
HD Devegowda
TV9 Web
| Edited By: |

Updated on:Nov 11, 2022 | 10:06 PM

Share

ಬೆಂಗಳೂರು: ದೇವನಹಳ್ಳಿ ಏರ್​ಪೋರ್ಟ್​ ಬಳಿ ಕೆಂಪೇಗೌಡರ ಪ್ರಗತಿ ಪ್ರತಿಮೆ (Kempegowda statue) ಉದ್ಘಾಟನೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ (HD Devegowda) ಅವರನ್ನು ಆಹ್ವಾನಿಸಿಲ್ಲ ಎನ್ನುವ ಜೆಡಿಎಸ್​ ಆರೋಪಕ್ಕೆ ಬಿಜೆಪಿ ತಿರುಗೇಟು ಕೊಟ್ಟಿದೆ. ಅಲ್ಲದೇ ದೇವೇಗೌಡರಿಗೆ ಆಹ್ವಾನ ಕೊಟ್ಟಿರುವುದಕ್ಕೆ ಸಾಕ್ಷಿ ಬಿಡುಗಡೆ ಮಾಡಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಲೆಟರ್ ಹೆಡ್​​ ಮೂಲಕ ಕೆಂಪೇಗೌಡರ ಪ್ರಗತಿ ಪ್ರತಿಮೆ (Kempegowda statue) ಉದ್ಘಾಟನೆ ಕಾರ್ಯಕ್ರಮಕ್ಕೆ ಬರುವಂತೆ ದೇವೇಗೌಡ್ರಿಗೆ ಆಹ್ವಾನ ಕೊಟ್ಟಿದ್ದ ಪತ್ರವನ್ನು ಬಿಡುಗಡೆಗೊಳಿಸಿದೆ.

HD Devegowda: ಪ್ರಧಾನಿ ಮೋದಿಯಿಂದ ಕೆಂಪೇಗೌಡ ಪ್ರತಿಮೆ ಅದ್ದೂರಿ ಅನಾವರಣ: ಆದರೆ ಮಾಜಿ ಪಿಎಂ ದೇವೇಗೌಡರ ಕಡೆಗಣನೆ- ಜೆಡಿಎಸ್​ ಕಿಡಿಕಿಡಿ

ಪ್ರಧಾನಿಯಾಗಿದ್ದ ಏಕೈಕ ಕನ್ನಡಿಗ ದೇವೇಗೌಡರಿಗೇ ಮೊದಲ ಆಹ್ವಾನ ಪತ್ರ ಹೋಗಿದ್ದು ಮಾತ್ರವಲ್ಲ, ಖುದ್ದು ಬಸವರಾಜ ಬಿಮ್ಮಾಯಿ ಅವರೇ ದೂರವಾಣಿ‌ ಕರೆ ಮಾಡಿ ಆಹ್ವಾನಿಸಿದ್ದಾರೆ. ಈ ವಿಷಯದಲ್ಲೂ ಸುಳ್ಳಾಡುವ ಜೆಡಿಎಸ್ ತನ್ನ ಸಮಯಸಾಧಕ ಬುದ್ಧಿ ಪ್ರದರ್ಶಿಸಿದೆ ಎಂದು ತಿರುಗೇಟು ಕೊಟ್ಟಿದೆ.

ಇದಷ್ಟೇ ಅಲ್ಲ, ಕನ್ನಡದ ಅಸ್ಮಿತೆಯ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೇ ಈ ಮಣ್ಣಿಗೆ ಸೇವೆ‌ ಸಲ್ಲಿಸಿದ ಸಾಧಕರಾದಿಯಾಗಿ ನಮ್ಮ ರಾಜ್ಯದ ಕಟ್ಟ ಕಡೆಯಲ್ಲಿರುವವರನ್ನೂ ಮರೆಯದೇ, ಹಿಂಬಾಲಿಸಿ ಗುರುತಿಸಿದ್ದು ಬಿಜೆಪಿ. ಕುಟುಂಬವನ್ನೇ ಪಕ್ಷವನ್ನಾಗಿಸಿಕೊಂಡ ಜೆಡಿಎಸ್‌ಗೆ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಎಂಬುದು ಯಾವತ್ತಿಗೂ ಬಿಡಿಸಲಾಗದ ಒಗಟು ಎಂದು ಬಿಜೆಪಿ ಟ್ವೀಟ್ ಮೂಲಕ ತಿವಿದಿದೆ.

ಜೆಡಿಎಸ್ ಸರಣಿ ಟ್ವೀಟ್ ಮಾಡಿತ್ತು

ಕೆಂಪೇಗೌಡರ ಬಳಿಕ ಬೆಂಗಳೂರು ಅಭಿವೃದ್ಧಿಗೆ ಕೊಡುಗೆ ನೀಡಿದ್ದು ದೇವೇಗೌಡರು. ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗ H.D.ದೇವೇಗೌಡರು. ದೇವೇಗೌಡರನ್ನು ಆಹ್ವಾನಿಸದಿರುವುದು ಕನ್ನಡಿಗರಿಗೆ ಮಾಡಿದ ಅಪಮಾನ. ಪ್ರತಿಮೆ ಕಾಮಗಾರಿಗೆ ದೇವೇಗೌಡರನ್ನು ಆಹ್ವಾನಿಸಿದ್ದ ಬಿಜೆಪಿ ಸರ್ಕಾರವು ಪ್ರತಿಮೆ ಅನಾವರಣ ಸಮಾರಂಭಕ್ಕೆ ಯಾಕೆ ಆಹ್ವಾನ ಮಾಡಲಿಲ್ಲ?

ಸ್ಥಳೀಯ ಕಾರ್ಯಕ್ರಮ ಆಗಿದ್ದರೆ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ. ನಾಡಪ್ರಭುಗಳ ಪ್ರತಿಮೆ ಅನಾವರಣಕ್ಕೆ ಪ್ರಧಾನಿಗಳೇ ಬರುತ್ತಾರೆ ಅಂದ್ರೆ ಹೆಮ್ಮೆಯ ಮಾಜಿ ಪ್ರಧಾನಿಯನ್ನೂ ಅಧಿಕೃತವಾಗಿ ಕರೆಯಲೇಬೇಕಿತ್ತು. ಬಿಜೆಪಿಯವರು ರಾಜಕೀಯಕ್ಕಾಗಿ ಮಾಜಿ ಪ್ರಧಾನಿ ಕಡೆಗಣಿಸಿದ್ದಾರೆ. ಇದು ಮಾಜಿ ಪ್ರಧಾನಿಗೆ ಮಾತ್ರವಲ್ಲ, ಕನ್ನಡಿಗರು ಹಾಗೂ ಸ್ವತಃ ನಾಡಪ್ರಭುಗಳಿಗೆ ಮಾಡಿದ ಅಪಮಾನ ಎಂದು ಸರಣಿ ಟ್ವೀಟ್​ ಮೂಲಕ ಜೆಡಿಎಸ್​ ಕಿಡಿಕಾರಿತ್ತು.

Published On - 9:49 pm, Fri, 11 November 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ