ಕ್ಷೇತ್ರ ಹುಡುಕಾಟದಲ್ಲಿರುವ ಸಿದ್ದರಾಮಯ್ಯಗೆ ಸಮಸ್ತ ಕರ್ನಾಟಕದಲ್ಲಿ ಸುಲಭ ಗೆಲುವಿಗೆ ಚಾಮರಾಜಪೇಟೆ ಮಾತ್ರ: ಬಿಜೆಪಿ ಟಾಂಗ್

ಕ್ಷೇತ್ರದ ಹುಡುಕಾಟದಲ್ಲಿರುವ ಸಿದ್ದರಾಮಯ್ಯನವರಿಗೆ ಸಮಸ್ತ ಕರ್ನಾಟಕದಲ್ಲಿ ಸುಲಭ ಗೆಲುವಿಗೆ ಇರುವುದು ಅತಿಹೆಚ್ಚು ಅಲ್ಪಸಂಖ್ಯಾತ ಮತಗಳಿರುವ ಚಾಮರಾಜಪೇಟೆ ಕ್ಷೇತ್ರ ಮಾತ್ರ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಕ್ಷೇತ್ರ ಹುಡುಕಾಟದಲ್ಲಿರುವ ಸಿದ್ದರಾಮಯ್ಯಗೆ ಸಮಸ್ತ ಕರ್ನಾಟಕದಲ್ಲಿ ಸುಲಭ ಗೆಲುವಿಗೆ ಚಾಮರಾಜಪೇಟೆ ಮಾತ್ರ: ಬಿಜೆಪಿ ಟಾಂಗ್
ವಿಪಕ್ಷ ನಾಯಕ ಸಿದ್ದರಾಮಯ್ಯ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Nov 17, 2022 | 7:58 PM

ಬೆಂಗಳೂರು: ವೋಟರ್ ಐಡಿ ಪರಿಷ್ಕರಣೆ ಅಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಭಾಗಿಯಾಗಿದ್ದಾರೆ ಎನ್ನುವ ಸಿದ್ದರಾಮಯ್ಯನವರ(siddaramaiah) ಆರೋಪಕ್ಕೆ ಬಿಜೆಪಿ(BJP) ತಿರುಗೇಟು ನೀಡಿದೆ.

ಮತದಾರರ ಮಾಹಿತಿ ಕಳವು ಪ್ರಕರಣ: ಕಚೇರಿ ಖಾಲಿ ಮಾಡಿದ ಚಿಲುಮೆ ಸಂಸ್ಥೆ ವಿರುದ್ಧ ಬಿಬಿಎಂಪಿ, ಕಾಂಗ್ರೆಸ್ ದೂರು

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಹುರುಳಿಲ್ಲದ ನಿಮ್ಮ ಆರೋಪ ಕೆಸುವಿನ ಎಲೆ ಮೇಲೆ ಬಿದ್ದ ನೀರಿನಂತೆ. ಕೆಸುವಿನ ಎಲೆ ಮೇಲೆ ಬಿದ್ದ ನೀರಿನಂತೆ, ಬೇಗ ಜಾರಿ ಹೋಗುತ್ತದೆ. ಕಾಂಗ್ರೆಸ್ & ಕಂಪನಿಯದ್ದು ದಿನಕ್ಕೊಂದು ನಾಟಕ ಎಂದು ಜನತೆಗೆ ಚೆನ್ನಾಗಿ ಅರಿವಾಗಿದೆ. ನೀವು ಏನೇ ಕಸರತ್ತು ಮಾಡಿದರೂ ಮುಖ್ಯಮಂತ್ರಿಯೂ ಆಗುವುದಿಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬರುವುದೂ ಇಲ್ಲ ಎಂದಿದೆ.

ಕುಂಕುಮಧಾರಿಗಳನ್ನು ಕಂಡರೇ ಭಯಪಡುವ ಸಿದ್ದರಾಮಯ್ಯನವರಿಗೆ ತಾಯಿ ಚಾಮುಂಡೇಶ್ವರಿಯನ್ನು ಕಂಡರೆ ಅದಿನ್ನೆಷ್ಟು ಭಯವಿರಬೇಡ ಪಾಪ. ಹಾಗಾಗಿ ಕ್ಷೇತ್ರದ ಹುಡುಕಾಟದಲ್ಲಿರುವ ಅವರಿಗೆ ಸಮಸ್ತ ಕರ್ನಾಟಕದಲ್ಲಿ ಸುಲಭ ಗೆಲುವಿಗೆ ಇರುವುದು ಅತಿಹೆಚ್ಚು ಅಲ್ಪಸಂಖ್ಯಾತ ಮತಗಳಿರುವ ಚಾಮರಾಜಪೇಟೆ ಕ್ಷೇತ್ರ ಮಾತ್ರ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಚುನಾವಣಾ ಅಕ್ರಮವೆಸಗಿ ಆರು ವರ್ಷ ಅಲಹಾಬಾದ್ ಹೈಕೋರ್ಟ್‌ನಿಂದ ಇಂದಿರಾ ಗಾಂಧಿ ಶಿಕ್ಷೆಗೆ ಒಳಪಟ್ಟಿದ್ದರು. ಚುನಾವಣಾ ಅಕ್ರಮವೆಸಗಿ ದೇಶದ ಮೇಲೆ ಕಾಂಗ್ರೆಸ್ ತುರ್ತು ಪರಿಸ್ಥಿತಿ ಹೇರಿತ್ತು. ಸಿದ್ದರಾಮಯ್ಯನವರೇ, ಈ ಚುನಾವಣಾ ಅಕ್ರಮಗಳನ್ನು ನೀವು ಎಂದಾದರೂ ಪ್ರಶ್ನಿಸಿದ್ದೀರಾ? ಎಂದು ಪ್ರಶ್ನಿಸಿದೆ.

ದೇಶದ ಎರಡನೇ ಲೋಕಸಭಾ ಚುನಾವಣೆಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಸೋಲಿಸುವ ಏಕಮಾತ್ರ ಕಾರಣಕ್ಕಾಗಿ ಬ್ಯಾಲೇಟ್ ಪೇಪರ್ ಬಣ್ಣ ಬದಲಿಸಿ, ಜನರ ಹಾದಿ ತಪ್ಪಿಸಿ ವಾಮಮಾರ್ಗದಲ್ಲಿ ಕಾಂಗ್ರೆಸ್ ಸೋಲಿಸಿತ್ತು. ಮಾನ್ಯ ಸಿದ್ದರಾಮಯ್ಯನವರೇ, ಈ ಚುನಾವಣಾ ಅಕ್ರಮದ ಬಗ್ಗೆ ತಿಳಿದಿದೆಯೇ? ಎಂದು ಬಿಜೆಪಿ ತಿವಿದಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?