Hijab Row‌: ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇನೆಂದ ಸಿದ್ದರಾಮಯ್ಯ, ಸಿಡಿದೆದ್ದ ಬಿಜೆಪಿ

Hijab Row In Karnataka: ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಹಿಜಾಬ್‌ ನಿಷೇಧ ವಾಪಸ್‌ ಪಡೆಯುವುದಾಗಿ ಹೇಳಿದ ಬೆನ್ನಲ್ಲೇ ವಿಪಕ್ಷ ಬಿಜೆಪಿ ಸಿಡಿದೆದ್ದಿದೆ. ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ತಿಳಿಸಿದ್ದೇನೆ ಎಂದು ಸಿದ್ದರಾಮಯ್ಯನವರ ಎಕ್ಸ್​ ಖಾತೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ಎಚ್ಚರಿಕೆ ನೀಡಿದೆ.

Hijab Row‌: ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇನೆಂದ ಸಿದ್ದರಾಮಯ್ಯ, ಸಿಡಿದೆದ್ದ ಬಿಜೆಪಿ
ಸಿಎಂ ಸಿದ್ದರಾಮಯ್ಯ
Follow us
|

Updated on: Dec 22, 2023 | 10:07 PM

ಬೆಂಗಳೂರು, (ಡಿಸೆಂಬರ್ 22): ಕರ್ನಾಟಕದಲ್ಲಿ ಹಿಜಾಬ್‌ (Hijab) ನಿಷೇಧ ವಾಪಸ್‌ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿಕೆ ನೀಡಿದ ಬೆನ್ನಲ್ಲೇ ರಾಜ್ಯ ಬಿಜೆಪಿ (Karnataka BJP) ಆಕ್ರೋಶ ಹೊರಹಾಕಿದೆ. ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಅವರ ಗ್ಯಾರಂಟಿ ಎಂದು ಬಿಜೆಪಿ ಕಿಡಿಕಾರಿದೆ.

ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ತಿಳಿಸಿದ್ದೇನೆ ಎಂದು ಸಿದ್ದರಾಮಯ್ಯನವರ ಎಕ್ಸ್​ ಖಾತೆಗೆ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ, ಶಾಲೆ – ಕಾಲೇಜುಗಳಲ್ಲಿ ಮಕ್ಕಳು ಸಮಾನತೆಯಿಂದ ಕೂಡಿರಬೇಕು ಎಂದೇ ಸಮವಸ್ತ್ರ ನೀತಿಯನ್ನು ಜಾರಿಗೊಳಿಸಲಾಗಿದೆ. ಇದನ್ನು ಸುಪ್ರೀಂ ಕೋರ್ಟ್ ಸಹ ಎತ್ತಿ ಹಿಡಿದಿದೆ. ಆದರೆ, ಶಾಲಾ ವಿದ್ಯಾರ್ಥಿಗಳ ಮನಸ್ಸಲ್ಲಿ ಸಮವಸ್ತ್ರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರು ಭೇದವನ್ನು ಹುಟ್ಟು ಹಾಕುತ್ತಿದ್ದಾರೆ ಆರೋಪಿಸಿದೆ.

ಇದನ್ನೂ ಓದಿ: Hijab Row: ಕರ್ನಾಟಕದಲ್ಲಿ ಹಿಜಾಬ್ ನಿಷೇಧ ವಾಪಸ್, ಸಿದ್ದರಾಮಯ್ಯ ಸ್ಪಷ್ಟನೆ

ಪಿಎಫ್ಐ ಗೂಂಡಾಗಳು, ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ವೋಟ್ ಬ್ಯಾಂಕ್‌ಗಾಗಿ ಸಿದ್ದರಾಮಯ್ಯ ಅವರು ಸಂವಿಧಾನವನ್ನೇ ತಿದ್ದುಪಡಿ ಮಾಡಲು ಹೊರಟಿದ್ದಾರೆ. ಮುಂದಿನ ದಿನಗಳಲ್ಲಿ ಇದಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದೆ.

ಸಿದ್ದರಾಮಯ್ಯ ಹೇಳಿದ್ದೇನು?

ಪ್ರಧಾನಿ ನರೇಂದ್ರ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ಒಡೆಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ತಿಳಿಸಿದ್ದೇನೆ ಎಂದು ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೇ ಈ ಬಗ್ಗೆ ಮೈಸೂರಿನಲ್ಲಿ ಖುದ್ದು ಸಿಎಂ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು