AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಯಕರ್ತರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಲು ಸಂಚು; ಸಹಾಯವಾಣಿ ಆರಂಭಿಸಿ ತೇಜಸ್ವಿ ಸೂರ್ಯ ಆರೋಪ

ಬಿಜೆಪಿ ಹೊಸದಾಗಿ ಆರಂಭಿಸಿರುವ ಸಹಾಯವಾಣಿ ಸಂಖ್ಯೆ 18003091907 ಆಗಿದ್ದು, ಕಾರ್ಯಕರ್ತರು ಇದರ ನೆರವು ಪಡೆದುಕೊಳ್ಳಬೇಕು ಎಂದು ತೇಜಸ್ವಿ ಸೂರ್ಯ ಮನವಿ ಮಾಡಿದರು.

ಕಾರ್ಯಕರ್ತರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಲು ಸಂಚು; ಸಹಾಯವಾಣಿ ಆರಂಭಿಸಿ ತೇಜಸ್ವಿ ಸೂರ್ಯ ಆರೋಪ
ಕರ್ನಾಟಕ ಬಿಜೆಪಿ ಕಾರ್ಯಕರ್ತರಿಗಾಗಿ ಆರಂಭಿಸಿರುವ ಸಹಾಯವಾಣಿಗೆ ಶನಿವಾರ ಚಾಲನೆ ನೀಡಲಾಯಿತು
Ganapathi Sharma
|

Updated on: Jun 10, 2023 | 5:21 PM

Share

ಬೆಂಗಳೂರು: ಬಿಜೆಪಿ, ಆರ್​ಎಸ್​ಎಸ್ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಲು ಕಾಂಗ್ರೆಸ್ ಸರ್ಕಾರ ಯತ್ನಿಸುತ್ತಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ, ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ (Tejasvi Surya) ಆರೋಪಿಸಿದ್ದಾರೆ. ಕಾರ್ಯಕರ್ತರಿಗೆ ಕಾನೂನು ನೆರವು ನೀಡಲು ಪಕ್ಷದ ರಾಜ್ಯ ಘಟಕದ ವತಿಯಿಂದ ಆರಂಭಿಸಲಾಗಿರುವ ಸಹಾಯವಾಣಿಗೆ (BJP Helpline) ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಈ ಹಿಂದೆಯೂ ಕಾಂಗ್ರೆಸ್ ಪಕ್ಷವು ಅನೇಕ ಸುಳ್ಳು ಪ್ರಕರಣಗಳನ್ನು ಹಾಕಿ ಹಿಂದೂ ಸಂಘಟನೆಗಳ ಬಾಯಿ ಮುಚ್ಚಿಸಿದ ಇತಿಹಾಸವನ್ನು ಹೊಂದಿದೆ. ಸುಳ್ಳು ಪ್ರಕರಣಗಳ ವಿರುದ್ಧ ಹೋರಾಡಲು, ನಾವು ಸಹಾಯವಾಣಿ ಸಂಖ್ಯೆಯನ್ನು ಪ್ರಾರಂಭಿಸಿದ್ದೇವೆ ಮತ್ತು ನಮ್ಮ ಪಕ್ಷದ ಸದಸ್ಯರಿಗೆ ಅಗತ್ಯವಾದ ಕಾನೂನು ಬೆಂಬಲದೊಂದಿಗೆ ನಾವು ಸಂಪೂರ್ಣವಾಗಿ ಸಜ್ಜಾಗಿದ್ದೇವೆ ಎಂದು ಹೇಳಿದರು.

ಬಿಜೆಪಿ ಹೊಸದಾಗಿ ಆರಂಭಿಸಿರುವ ಸಹಾಯವಾಣಿ ಸಂಖ್ಯೆ 18003091907 ಆಗಿದ್ದು, ಕಾರ್ಯಕರ್ತರು ಇದರ ನೆರವು ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದರು. ಪಕ್ಷವು ರಾಜ್ಯಾದ್ಯಂತ ಸುಮಾರು 100 ವಕೀಲರನ್ನು ಹೊಂದಿದ್ದು, ಇವರು ಕಾರ್ಯಕರ್ತರಿಗೆ ನೆರವಾಗಲಿದ್ದಾರೆ ಎನ್ನಲಾಗಿದೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ, ದೌರ್ಜನ್ಯ, ಭಯಭೀತಿ ಉಂಟು ಮಾಡುವ ಪ್ರಯತ್ನಗಳು ನಡೆಯುತ್ತಿವೆ. ಇದಕ್ಕೆ ಬಿಜೆಪಿ ಕಾರ್ಯಕರ್ತರು ಹೆದರುವ ಅಗತ್ಯವಿಲ್ಲ. ನಕಲಿ ಕೇಸ್‌ ದಾಖಲು, ದೌರ್ಜನ್ಯ, ದಬ್ಬಾಳಿಕೆ ನಡೆದಲ್ಲಿ ಕಾನೂನು ಸಹಾಯವಾಣಿಗೆ ಕರೆ ಮಾಡಿ, ನೆರವು ಪಡೆಯಬಹುದು ಮತ್ತು ಕಾರ್ಯಕರ್ತರ ಬೆಂಬಲಕ್ಕೆ ಧಾವಿಸಲು ಕಾನೂನು ತಜ್ಞರ ತಂಡ ಸದಾ ಸಿದ್ಧವಾಗಿರುತ್ತದೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್​​ನ ಹಿಟ್ಲರ್ ಸರ್ಕಾರ ನಮ್ಮ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ಹಾಕಿ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: Odisha Train Accident: ಪ್ರಧಾನಿ ಮೋದಿಗೆ ಖರ್ಗೆ ಬರೆದ ಪತ್ರಕ್ಕೆ ತೇಜಸ್ವಿ ಸೂರ್ಯ ಸೇರಿ ಬಿಜೆಪಿಯ ನಾಲ್ವರು ಸಂಸದರಿಂದ ತಿರುಗೇಟು

ಬಿಜೆಪಿ ಕಾರ್ಯಕರ್ತರ ಪಕ್ಷ, ಬಿಜೆಪಿಯ ಕಾರ್ಯಕರ್ತ ಎದೆಗುಂದುವವನಲ್ಲ. ರಾಷ್ಟ್ರಪರ ಕಾರ್ಯಗಳಲ್ಲಿ ಸಕ್ರಿಯರಾಗಿರುವ ನಮ್ಮ ಸಮಸ್ತ ಕಾರ್ಯಕರ್ತರ ಪರವಾಗಿ ಪಕ್ಷವೂ ಸದಾ ನಿಲ್ಲುತ್ತದೆ ಮತ್ತು ಅವಶ್ಯಕವಾದಲ್ಲಿ ಕಾನೂನಾತ್ಮಕವಾಗಿಯೂ ಹೋರಾಟ ನಡೆಸಲಿದೆ. ದೇಶವಿರೋಧಿಗಳ ವಿರುದ್ಧ, ನಾಡಿಗೆ ಕೇಡು ಬಗೆಯುವವರ ವಿರುದ್ಧ, ರಾಜ್ಯ ಸರಕಾರದ ಜನವಿರೋಧಿ ನಡೆಗಳ ವಿರುದ್ಧ, ಎದೆಗುಂದದೆ ಹೋರಾಡಿ, ನಿಮ್ಮೊಂದಿಗೆ ಪಕ್ಷವಿದೆ, ಪಕ್ಷದಿಂದ ನಿಯೋಜನೆಗೊಂಡಿರುವ ಕಾನೂನು ತಜ್ಞರ ಸಮಿತಿ ಸದಾ ಸಿದ್ದವಿದೆ ಎಂದು ಅವರು ಭರವಸೆ ನೀಡಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
New Year 2026 Live: 2025ಕ್ಕೆ ಬೈಬೈ.. ಹೊಸ ವರ್ಷ 2026ಕ್ಕೆ ಹಾಯ್ ಹಾಯ್
New Year 2026 Live: 2025ಕ್ಕೆ ಬೈಬೈ.. ಹೊಸ ವರ್ಷ 2026ಕ್ಕೆ ಹಾಯ್ ಹಾಯ್
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ