ನವೆಂಬರ್ವರೆಗೂ ಸಕ್ರಿಯ ರಾಜಕಾರಣದಿಂದ ದೂರ: ಅಚ್ಚರಿ ಮೂಡಿಸಿದ ಶಂಕರ್ ಪಾಟೀಲ್ ಮುನೇನಕೊಪ್ಪ ಮಾತು
ಲೋಕಸಭಾ ಚುನಾವಣೆಗೂ ಮುನ್ನ ಕರ್ನಾಟಕದಲ್ಲಿ ಆಪರೇಷನ್ ಹಸ್ತ ಜೋರಾಗಿದ್ದು, ಜೆಡಿಎಸ್ ಹಾಗು ಬಿಜೆಪಿಯ ಹಾಲಿ, ಮಾಜಿ ಶಾಸಕರು ಕಾಂಗ್ರೆಸ್ ಸೇರುತ್ತಾರೆ ಎನ್ನುವ ಸುದ್ದಿ ಭಾರೀ ಸದ್ದು ಮಾಡುತ್ತಿದೆ, ಅದರಲ್ಲೂ ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಕಾಂಗ್ರೆಸ್ ಸೇರುತ್ತಾರೆ ಎಂಬ ಸುದ್ದಿ ಹರಿದಾಡಿತ್ತು. ಆದ್ರೆ, ಇದಕ್ಕೆ ಇದೀಗ ಅವರೇ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೇ ಕೆಲ ತಿಂಗಳ ಕಾಲ ಸಕ್ರಿಯ ರಾಜಕೀಯದಿಂದ ದೂರು ಉಳಿಯುತ್ತೇನೆ ಎಂದಿರುವುದು ಅಚ್ಚರಿ ಮೂಡಿಸಿದೆ.
ಹುಬ್ಬಳ್ಳಿ, (ಆಗಸ್ಟ್ 28): ಲೋಕಸಭಾ ಚುನಾವಣೆ (Loksabha Elections 2024) ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಆಗಲೇ ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಗುಳೆ ಹೋಗುವ ಪ್ರತಿಕ್ರಿಯೆಗಳು ಶುರುವಾಗಿವೆ. ಅದರಲ್ಲೂ ಕೆಲ ಬಿಜೆಪಿ ನಾಯಕರು ಕಾಂಗ್ರೆಸ್(Congress) ಸೇರ್ಪಡೆಗೆ ತುದಿಗಾಲಲ್ಲಿ ನಿಂತಿದ್ದಾರೆ ಎಂದು ಕೇಳಿಂದಿದದೆ. ಆ ಪಟ್ಟಿಯಲ್ಲಿ ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ(shankar patil munenakoppa) ಹೆಸರು ಇದೆ. ಹೌದು…ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮೂಲಕ ಶಂಕರ್ ಪಾಟೀಲ್ ಮುನೇನಕೊಪ್ಪ ಅವರನ್ನು ಕಾಂಗ್ರೆಸ್ಗೆ ಸೆಳೆಯುವ ಕಸರತ್ತು ನಡೆದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದರ ಮಧ್ಯೆ ಮುನೇನಕೊಪ್ಪ ಅವರು ನವೆಂಬರ್ವರೆಗೂ ಸಕ್ರಿಯ ರಾಜಕಾರಣದಿಂದ ದೂರ ಇರುತ್ತೇನೆ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು (ಆಗಸ್ಟ್ 28) ಟಿವಿ9 ಜೊತೆ ಮಾತನಾಡಿದ ಶಂಕರ್ ಪಾಟೀಲ್ ಮುನೇನಕೊಪ್ಪ, ನವೆಂಬರ್ವರೆಗೂ ಸಕ್ರಿಯ ರಾಜಕಾರಣದಿಂದ ದೂರು ಇರುತ್ತೇನೆ. ಜನವರಿ ಬಳಿಕ ಕ್ಷೇತ್ರದ ಜನರ ಜತೆ ಚರ್ಚಿ ತೀರ್ಮಾನ ಮಾಡುತ್ತೇನೆ. ನನಗೇನು ಬಿಜೆಪಿ ಬಗ್ಗೆ ಅಸಮಾಧಾನವಿಲ್ಲ, ನಾನೇಕೆ ಬಿಜೆಪಿ ಬಿಡಲಿ ಎಂದು ಪ್ರಶ್ನಿಸಿದರು.
ಇದನ್ನೂ ಓದಿ: ಯಾರೇ ಬಂದರೂ, ಕಾಂಗ್ರೆಸ್ ಪಕ್ಷದ ಸಿದ್ಧಾಂತ, ತತ್ವ ಒಪ್ಪಿ ಬರುವವರಿಗೆ ಸ್ವಾಗತ: ಸಿಎಂ ಸಿದ್ದರಾಮಯ್ಯ
ಸಂತೋಷ್ ಲಾಡ್ ನಮ್ಮ ಸ್ನೇಹಿತರು, ಅದ್ರೆ ಅವರು ನನ್ನನ್ನು ಆಹ್ವಾನಿಸಿಲ್ಲ. ವಿನಯ್ ಕುಲಕರ್ಣಿ ಕೂಡ ಕಾಂಗ್ರೆಸ್ ಪಕ್ಷಕ್ಕೆ ನನ್ನನ್ನು ಕರೆದಿಲ್ಲ. ಜಗದೀಶ್ ಶೆಟ್ಟರ್ ಸೇರಿದಂತೆ ಯಾರೂ ನನ್ನ ಸಂಪರ್ಕ ಮಾಡಿಲ್ಲ. ಲೋಕಸಭೆ ಚುನಾವಣೆಗೆ ಕಾಂಗ್ರೆಸ್ನಿಂದ ನಾನು ಸ್ಪರ್ಧೆ ಮಾಡಲ್ಲ. ಸ್ವಾಭಿಮಾನಕ್ಕೆ ಧಕ್ಕೆಯಾಗಿದ್ದಕ್ಕೆ ಜಗದೀಶ್ ಶೆಟ್ಟರ್ ಬಿಜೆಪಿ ಬಿಟ್ಟು ಹೋಗಿದ್ದಾರೆ. ಮುಂದಿನ ದಿನದಲ್ಲಿ ಯಾರ ಸ್ವಾಭಿಮಾನಕ್ಕೂ ಧಕ್ಕೆ ಆಗಬಾರದು. ಯಾರೂ ಪಕ್ಷ ಬಿಟ್ಟು ಹೋಗದಂತೆ ಪ್ರಲ್ಹಾದ್ ಜೋಶಿ ಜವಾಬ್ದಾರಿ ತೆಗೆದುಕೊಳ್ಳಲಿ ಎಂದರು.
ಧಾರವಾಡ ಜಿಲ್ಲೆಯ ಇಬ್ಬರು ಬಿಜೆಪಿ ನಾಯಕರು ಕಾಂಗ್ರೆಸ್ ಸೇರಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಭಾನುವಾರ ಹೇಳಿಕೆ ನೀಡಿದ್ದರು. ಧಾರವಾಡ ಜಿಲ್ಲೆಯ ಬಿಜೆಪಿ ನಾಯಕಾರದ ಶಂಕರ್ ಪಾಟೀಲ್ ಮುನೇನಕೊಪ್ಪ ಮತ್ತು ಎಸ್‍ಐ ಚಿಕ್ಕನಗೌಡ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ವರದಿಗಳ ನಡುವೆ, ಈ ಇಬ್ಬರು ನಾಯಕರು ನಮ್ಮ ಪಕ್ಷಕ್ಕೆ ಬಂದರೆ ಜಿಲ್ಲೆಯಲ್ಲಿ ಮತ್ತಷ್ಟು ಬಲ ಬರಲಿದೆ ಎಂದು ಸಂತೋಷ್ ಲಾಡ್ ಹೇಳಿದ್ದರು. ಅಲ್ಲದೇ ಜಗದೀಶ್ ಶೆಟ್ಟರ್ ಅವರಿಗೆ ಹುಬ್ಬಳ್ಳಿ-ಧಾರವಾಡ ಸೇರಿದಂತೆ ಇತರೆ ಜಿಲ್ಲೆಗಳ ಬಿಜೆಪಿ ಲಿಂಗಾಯತ ನಾಯಕರನ್ನು ಕಾಂಗ್ರೆಸ್ ಕರೆತರುವ ಜವಾಬ್ದಾರಿ ನೀಡಲಾಗಿದೆ ಎನ್ನಲಾಗಿದೆ. ಇದರಲ್ಲಿ ಶಂಕರ್ ಪಾಟೀಲ್ ಮುನೇನಕೊಪ್ಪ ಕೊಪ್ಪ ಕೇಸರು ಬಲವಾಗಿ ಕೇಳಿಬಂದಿತ್ತು. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿತ್ತು.
ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 7:14 pm, Mon, 28 August 23