ಬೆಂಗಳೂರು, (ನವೆಂಬರ್ 17): ಅಮಿತ್ ಶಾ ನನ್ನ ಮನೆಗೆ ಬಂದು ಎರಡ್ಮೂರು ಗಂಟೆ ಜೀವ ತೆಗೆದ್ರೆ, ನಾನೇನ್ ಮಾಡ್ಬೇಕು ಎಂದು ಬಿಜೆಪಿಯ ಹಿರಿಯ ನಾಯಕ ವಿ.ಸೋಮಣ್ಣ (V Somanna) ಸಿದ್ಧಗಂಗಾದ ಸಿದ್ದಲಿಂಗ ಶ್ರೀಗಳ ಎದುರಿನಲ್ಲೇ ತಮ್ಮ ಬೇಸರ ವ್ಯಕ್ತಪಡಿಸಿದ್ದಾರೆ. ಹೇಳಿದ ಮಾತು. ಹೈಕಮಾಂಡ್ ನಾಯಕರ ವಿರುದ್ಧ ಅಸಮಾಧಾನ ಗೊಂಡಿರುವ ವಿ.ಸೋಮಣ್ಣ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರ ಬಗ್ಗೆ ಶ್ರೀಗಳ ಮುಂದೆ ತಮ್ಮ ನೋವು ತೋಡಿಕೊಂಡಿದ್ದಾರೆ. ಅಲ್ಲದೇ ಬಿಜೆಪಿ ತೊರೆಯುವ ಚಿಂತನೆಯಲ್ಲಿದ್ದಾರೆ. ಆದ್ರೆಮ ಇತ್ತ ಬಿಜೆಪಿ ನಾಯಕರು ಸೋಮಣ್ಣ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಪ್ರತಿಷ್ಠಿತ ಮಠಮಾನ್ಯಗಳ ಮೂಲಕ ಸೋಮಣ್ಣ ಮನವೊಲಿಕೆಗೆ ಯತ್ನಿಸಿದ್ದಾರೆ.
ಸೋಮಣ್ಣ ಅವರನ್ನು ಸಮಾಧಾನಪಡಿಸಲು ರಾಜ್ಯ ಬಿಜೆಪಿ ನಾಯಕರು ಲಿಂಗಾಯಿತ ಮಠಾಧಿಪತಿಗಳನ್ನ ಸಂಪರ್ಕಿಸಿ ಮಾತುಕತೆ ನಡೆಸಿದ್ದಾರೆ. ಅಲ್ಲದೇ ಹೈಕಮಾಂಡ್ ನಾಯಕರು ಸಹ ಸ್ವಾಮಿಜಿಗಳ ಜತೆ ಮಾತುಕತೆ ನಡೆಸಿದ್ದು, ಸೋಮಣ್ಣಗೆ ರಾಜಕೀಯವಾಗಿ ದುಡುಕಿನ ನಿರ್ಧಾರ ಮಾಡದಿರಲು ಹೇಳುವಂತೆ ಮನವಿ ಮಾಡಿದ್ದಾರೆ. ಆದರೆ ಬಿಜೆಪಿ ಹೈಕಮಾಂಡ್ ನಾಯಕರಿಗೆ ಹೆಚ್ಚಿನ ಪ್ರತಿಕ್ರಿಯೆ ನೀಡದ ಸ್ವಾಮೀಜಿಯೊಬ್ಬರು, ಸೋಮಣ್ಣಗೆ ಈಗ ನಾವು ಮಾತು ಹೇಳುವ ಸ್ಥಿತಿಯಲ್ಲಿ ಇಲ್ಲ ಎಂದಿದ್ದಾರೆ ಎಂದು ತಿಳಿದುಬಂದಿದೆ.
ಇನ್ನೊಂದೆಡೆ ಚಿಕ್ಕಮಗಳೂರಿನ ಪೀಠದ ಮೂಲಕವು ಸೋಮಣ್ಣ ಮನವೊಲಿಕೆಗೆ ಯತ್ನ ನಡೆದಿದ್ದು, ಸೋಮಣ್ಣ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಡುವಿನ ಸಂಧಾನ ಸೂತ್ರ ಸಿದ್ಧವಾಗಿದೆ. ಮತ್ತೊಂದೆಡೆ ಕಾಂಗ್ರೆಸ್ ನಾಯಕರು ಸೋಮಣ್ಣರನ್ನು ಸಂಪರ್ಕಸಿದ್ದಾರೆ. ಡಿಕೆ ಶಿವಕುಮಾರ್ ಆಪ್ತರು ಸೋಮಣ್ಣ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಆದ್ರೆ, ಸೋಮಣ್ಣ ಅವರನ್ನು ಕಾಂಗ್ರೆಸ್ಗೆ ಸೇರಿಸಿಕೊಳ್ಳಲು ಪಕ್ಷದಲ್ಲೇ ಅಪಸ್ವರಗಳು ಕೇಳುಬಂದಿವೆ.
ಈ ಸಂಬಂಧ ಕೃಷ್ಣಪ್ಪ ಈಗಾಗಲೇ ಡಿಕೆ ಶಿವಕುಮಾರ್ ಹೊರತಾಗಿ ಇನ್ನಿತರ ಹಿರಿಯ ನಾಯಕರ ಜತೆ ಚರ್ಚೆ ಮಾಡಿದ್ದು, ಯಾವುದೇ ಕಾರಣಕ್ಕೂ ಸೋಮಣ್ಣ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬಾರದು ಎಂದಿದ್ದಾರೆ. ಇನ್ನು ಡಿಸೆಂಬರ್ 6ರ ಬಳಿಕ ನಿರ್ಧಾರ ಕೈಗೊಳ್ಳುವುದಾಗಿ ಸೋಮಣ್ಣ ಸೋಮಣ್ಣ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಬಿಜೆಪಿ ನಾಯಕರ ಮನವೊಲಿಕೆಗೆ ಬಗ್ಗುತ್ತಾರಾ? ಅಥವಾ ಕಾಂಗ್ರೆಸ್ ಸೇರುತ್ತಾರಾ? ಎನ್ನುವುದು ಭಾರೀ ಕುತೂಹಲ ಮೂಡಿಸಿದೆ.
ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ