ಅಮಿತ್ ಶಾ ನಿವಾಸದಲ್ಲಿ 2 ಗಂಟೆಗಳ ಕಾಲ ನಡೆದ ಸಭೆ ಅಂತ್ಯ: ಮಹತ್ವದ ಚರ್ಚೆ, ಬೊಮ್ಮಾಯಿಗೆ ಮತ್ತೆ ನಿರಾಸೆ ಮೂಡಿಸಿದ ಹೈಕಮಾಂಡ್!

| Updated By: ರಮೇಶ್ ಬಿ. ಜವಳಗೇರಾ

Updated on: Dec 26, 2022 | 11:36 PM

ಇಂದು(ಡಿಸೆಂಬರ್ 26) ದೆಹಲಿಯ ಕೃಷ್ಣ ಮೆನನ್ ಮಾರ್ಗದಲ್ಲಿರುವ ಅಮಿತ್ ಶಾ ನಿವಾಸದಲ್ಲಿ ನಡೆದ ಸಭೆ ಅಂತ್ಯವಾಗಿದ್ದು, ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಬಸವರಾಜ ಬೊಮ್ಮಾಯಿ ಅವರಿಗೆ ಮತ್ತೆ ನಿರಾಸೆಯಾಗಿದೆ.

ಅಮಿತ್ ಶಾ ನಿವಾಸದಲ್ಲಿ  2 ಗಂಟೆಗಳ ಕಾಲ ನಡೆದ ಸಭೆ ಅಂತ್ಯ: ಮಹತ್ವದ ಚರ್ಚೆ, ಬೊಮ್ಮಾಯಿಗೆ ಮತ್ತೆ ನಿರಾಸೆ ಮೂಡಿಸಿದ ಹೈಕಮಾಂಡ್!
Follow us on

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ (JP Nadda) ನೇತೃತ್ವದಲ್ಲಿ ಅಮಿತ್ ಶಾ ನಿವಾಸದಲ್ಲಿ  ನಡೆದ ಸಭೆ ಅಂತ್ಯವಾಗಿದೆ. ಸತತ ಎರಡು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಕರ್ನಾಟಕ ರಾಜಕೀಯ ವಿದ್ಯಮಾನಗಳ(Karnataka Politics)  ಬಗ್ಗೆ ಚರ್ಚೆಯಾಗಿದೆ. ಮೀಸಲಾತಿ, ಸಚಿವ ಸಂಪುಟ, ಪಕ್ಷ ಸಂಘಟನೆ ಹಾಗೂ ಮುಂಬರುವ ವಿಧಾನಸಭೆ ಚುನಾವಣೆ ಪ್ರಚಾರದ ಕುರಿತಂತೆ ಸುದೀರ್ಘ ಮಾತುಕತೆಗಳು ನಡೆದಿವೆ. ಆದ್ರೆ, ಸಚಿವ ಸಂಪುಟ ವಿಸ್ತರಣೆ (Cabinet Cabinet Expansion) ಮಾಡುವ ಬಗ್ಗೆ ಭಾರೀ ನಿರೀಕ್ಷೆ ಇಟ್ಟುಕೊಂಡು ಹೋಗಿದ್ದ ಸಿಎಂ ಬಸವರಾಜ ಬೊಮ್ಮಾಯಿಗೆ (Basavaraj Bommai) ನಿರಾಸೆಯಾಗಿದೆ.

ಇದನ್ನೂ ಓದಿ: ರೆಡ್ಡಿ ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಕಾಂಗ್ರೆಸ್-ಬಿಜೆಪಿ ಮೇಲೆ ಪರಿಣಾಮ ಬೀರುತ್ತಾ? ಇಲ್ಲಿದೆ ಲಾಭ, ನಷ್ಟದ ಲೆಕ್ಕಾಚಾರ

ಇಂದು(ಡಿಸೆಂಬರ್ 26) ದೆಹಲಿಯ ಕೃಷ್ಣ ಮೆನನ್ ಮಾರ್ಗದಲ್ಲಿರುವ ಅಮಿತ್ ಶಾ ನಿವಾಸದಲ್ಲಿ ನಡೆದ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಜಲಸಂಪನ್ಮೂಲ ಖಾತೆ ಸಚಿವ ಗೋವಿಂದ ಕಾರಜೋಳ ಸಭೆಯಲ್ಲಿ ಭಾಗಿಯಾಗಿದ್ದು, ಮೀಸಲಾತಿ, ಸಂಪುಟ ವಿಸ್ತರಣೆ ಸೇರಿದಂತೆ ಕರ್ನಾಟಕ ರಾಜ್ಯ ರಾಜಕಾರಣದ ವಿದ್ಯಮಾನಗಳ ಬಗ್ಗೆ ಚರ್ಚಿಸಿದ್ದು, ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಾವೇ ಅಂತಿಮ ನಿರ್ಧಾರ ಮಾಡಿ ಹೇಳುತ್ತೇವೆ ಹೋಗಿ ಎಂದು ಹೈಕಮಾಂಡ್, ರಾಜ್ಯ ನಾಯಕರಿಗೆ ಹೇಳಿ ಕಳುಹಿಸಿದ್ದಾರೆ.

ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆ

ಈ ಬಾರಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಫೈನಲ್ ಮಾಡಿಕೊಂಡೇ ಬರುತ್ತೇನೆಂದು ಬಸವರಾಜ ಬೊಮ್ಮಾಯಿ ದೆಹಲಿಗೆ ಹೋಗಿದ್ದರು. ಆದ್ರೆ, ಸಭೆಯಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ. ಬದಲಾಗಿ ನಾವೇ ನಿರ್ಧರಿಸಿ ಹೇಳುತ್ತೇವೆ ಎಂದು ಹೇಳಿ ಕಳುಹಿಸಿದ್ದಾರೆ. ಈ ಮೂಲಕ ಸಂಪುಟ ವಿಸ್ತರಣೆ ಇನ್ನಷ್ಟು ದಿನ ವಿಳಂಬವಾಗಲಿದೆ. ಹೀಗಾಗಿ ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆಯಾಗಿದೆ. ಅಮಿತ್ ಶಾ ಡಿಸೆಂಬರ್ 30ಕ್ಕೆ ಕರ್ನಾಟಕಕ್ಕೆ ಬರುತ್ತಿದ್ದು, ಆ ವೇಳೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆಗಳಿವೆ.

ಸಭೆ ಬಳಿಕ ಬೊಮ್ಮಾಯಿ ಹೇಳಿದ್ದಿಷ್ಟು

ಇನ್ನು ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಬಿಜೆಪಿ ಅಧ್ಯಕ್ಷರ ನೇತೃತ್ವದ ಸಭೆಯಲ್ಲಿ ಹಲವು ವಿಚಾರದ ಪ್ರಸ್ತಾಪವಾಗಿದೆ. ಜನವರಿಯಿಂದ ಪ್ರಧಾನಿ ಪ್ರವಾಸದ ಬಗ್ಗೆಯೂ ಚರ್ಚೆ ನಡೆದಿದೆ. ರಾಜ್ಯದಲ್ಲಿ ಮೀಸಲಾತಿ ವಿಚಾರದ ಬಗ್ಗೆ ಸಭೆಯಲ್ಲಿ ಚರ್ಚೆ ಆಗಿದೆ. ಯಾರ್ಯಾರಿಗೆ ನ್ಯಾಯ ನೀಡಬೇಕು ಅವರಿಗೆ ನೀಡುವಂತೆ ಸೂಚನೆ ನೀಡಿದ್ದಾರೆ ಎಂದು ಹೇಳಿದರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಭೆಯಲ್ಲಿ ವಿಸ್ತೃತ ಚರ್ಚೆಯಾಗಿದೆ. ಪ್ರಾಂತ್ಯವಾರು ಮತ್ತು ಜಾತಿವಾರು ಸಚಿವರ ಮಾಹಿತಿ ಪಡೆದಿದ್ದು, ನಾವೇ ಅಂತಿಮ ನಿರ್ಧಾರ ಪ್ರಕಟಿಸುತ್ತೇವೆಂದು ವರಿಷ್ಠರು ಹೇಳಿದ್ದಾರೆ. ಡಿಸೆಂಬರ್ 30ರಂದು ಮಂಡ್ಯ ಕಾರ್ಯಕ್ರಮಕ್ಕೆ ಶಾ ಬರುತ್ತಿದ್ದಾರೆ. ಹಾಗೇ ಜನವರಿ 12 ಮೋದಿ ಬರ್ತಾರೆ. ಇನ್ನು ಸಭೆಯಲ್ಲಿ ರಾಜ್ಯದಲ್ಲಿ ಪಕ್ಷದ ಸಂಘಟನೆಗೆ ಬೇಕಾದ ಕ್ರಮಗಳ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಜನವರಿಯಿಂದ ರಾಜ್ಯದಲ್ಲಿ ನಾಯಕರ ಪ್ರಚಾರ ಆರಂಭವಾಗಲಿದೆ. ವರಿಷ್ಟರು ರಾಜ್ಯಕ್ಕೆ ಬರುವ ಬಗ್ಗೆ ಚರ್ಚೆ ನಡೆದಿದೆ. ಮೀಸಲಾತಿ ಬಗ್ಗೆ ಚರ್ಚೆ ನಡೆದಿದೆ. ಯಾರ್ಯಾರಿಗೆ ನ್ಯಾಯ ಕೊಡಲು ಸಾಧ್ಯ ಕೊಡಿ ಎಂದಿದ್ದಾರೆ. ವಿವರಗಳನ್ನು ನಾನು ಕೊಟ್ಟಿದ್ದೇನೆ. ನಾನು ಮೀಸಲಾತಿ ನೀಡುವ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ಕೆಲವರು ಪಕ್ಷಕ್ಕೆ ಬರುವಂತರು ಇದ್ದಾರೆ ಚರ್ಚೆನಡೆದಿದೆ. ಸಂಘಟನೆ ಬಗ್ಗೆ ಚರ್ಚೆ ಫಲಪ್ರದವಾಗಿದೆ ಎಂದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 11:10 pm, Mon, 26 December 22