ಬೆಂಗಳೂರು, ಫೆಬ್ರವರಿ 07: ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ (Karnataka Congress Government) ಆರೋಪಿಸಿ ಇಂದು (ಫೆ.07) ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ಮಾಡಲು ನಿರ್ಧರಿಸಿದೆ. ಇದಕ್ಕೆ ಪ್ರತಿಯಾಗಿ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ (BJP) ನಾಯಕರು ವಿಧಾನಸೌಧದ (Vidhana Soudha) ಎದುರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿದ್ದಾರೆ. “ರಾಜ್ಯದ ಕಾಂಗ್ರೆಸ್ ಸರ್ಕಾರ ಸ್ವತಃ 222ಕ್ಕೂ ಹೆಚ್ಚು ತಾಲೂಕುಗಳನ್ನು ಬರಗಾಲ ಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಿದ್ದರೂ, ಈವರೆಗು ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಬರ ಪರಿಹಾರದ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರುಗಳ ನೇತೃತ್ವದಲ್ಲಿ ಇಂದು ಫೆಬ್ರವರಿ7 (ಬುಧವಾರ) ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ ನಡೆಸಲಾಗುವುದು” ಎಂದು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.
ಇನ್ನು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ. “ಕರ್ನಾಟಕದ ಜನತೆ ಕಾಂಗ್ರೆಸ್ಗೆ ಮತ ನೀಡಿದ್ದು ಗ್ಯಾರಂಟಿಗಳನ್ನು ನಂಬಿ! ಆದರೆ, ಮಜಾವಾದಿ ಸಿದ್ದರಾಮಯ್ಯ ಅವರ ಸರ್ಕಾರ ಕನ್ನಡಿಗರ ತೆರಿಗೆ ದುಡ್ಡಿನಲ್ಲಿ ಮೋಜು ಮಸ್ತಿ ಮಾಡುತ್ತಿದೆ. ಕನ್ನಡಿಗರ ತೆರಿಗೆ ಹಣದಲ್ಲಿ ಬಿಟ್ಟಿ ಜಾಹೀರಾತು ಕೊಟ್ಟು ಪ್ರಚಾರ ಪಡೆದುಕೊಂಡು ದೆಹಲಿಯಲ್ಲಿ ಶೋಕಿ ಮಾಡಲು ಹೋಗಿದೆ. ಕನ್ನಡಿಗರ ಪ್ರಶ್ನೆಗಳಿಗೆ ಉತ್ತರ ಕೊಡಲು ಯೋಗ್ಯತೆ ಇಲ್ಲದ ಕಾಂಗ್ರೆಸ್ಸಿಗರು, ತಾವೇ ಮಾಡಿದ ಸುಳ್ಳುಗಳಿಗೆ ಸತ್ಯ ಹುಡುಕುತ್ತಿದ್ದಾರೆ. ಜಂತರ್ ಮಂತರ್‌ನಲ್ಲಿ ಬೃಹನ್ನಳೆ ನಾಟಕ ಮಾಡಲು ಮೇಕಪ್ ಹಾಕಿ ಕೂತಿದ್ದಾರೆ ಎಡಬಿಡಂಗಿ ಕಾಂಗ್ರೆಸ್ಸಿಗರು” ಎಂದು ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದೆ.
ಇದನ್ನೂ ಓದಿ: ಕೇಂದ್ರದಿಂದ ಸಮರ್ಪಕ ಅನುದಾನ ಬಂದಿಲ್ಲ, ಕಾಂಗ್ರೆಸ್ ಆರೋಪ: ಸಿದ್ದರಾಮಯ್ಯ, ಡಿಕೆಶಿಯನ್ನ ಚರ್ಚೆಗೆ ಆಹ್ವಾನಿಸಿದ ರೇಣುಕಾಚಾರ್ಯ
ಕರ್ನಾಟಕದ ಮುಖ್ಯಮಂತ್ರಿಗಳ ಆರೋಪಕ್ಕೆ ಯಾವುದೇ ದೃಢವಾದ ಆಧಾರವಿಲ್ಲ. 13 ರಾಜ್ಯಗಳ ಬಜೆಟ್‌ಗಳನ್ನು ಮಂಡಿಸಿರುವ ಸಿದ್ದರಾಮಯ್ಯನವರೇ ಹೀಗೆ ಅಸಂಬದ್ಧವಾಗಿ ಮಾತನಾಡುತ್ತಿದ್ದಾರೆಂದು ಅವರ ಪಕ್ಷದವರೇ ನಗುತ್ತಿರಬೇಕು. ಅದೇನೇ ಇದ್ದರೂ, ಕರ್ನಾಟಕದ ಮುಖ್ಯಮಂತ್ರಿಗಳ ಆರೋಪಕ್ಕೆ ಯಾವುದೇ ದೃಢವಾದ ಆಧಾರವಿಲ್ಲ. 13 ರಾಜ್ಯಗಳ ಬಜೆಟ್‌ಗಳನ್ನು ಮಂಡಿಸಿರುವ ಸಿದ್ದರಾಮಯ್ಯನವರೇ ಹೀಗೆ ಅಸಂಬದ್ಧವಾಗಿ ಮಾತನಾಡುತ್ತಿದ್ದಾರೆಂದು ಅವರ ಪಕ್ಷದವರೇ ನಗುತ್ತಿರಬೇಕು. ಅದೇನೇ ಇದ್ದರೂ, ನೆನಪಿಟ್ಟುಕೊಳ್ಳಲಿ.
-ರಾಜ್ಯಗಳು ತಮ್ಮ SGST ಯ 100% ಅನ್ನು ಪಡೆಯುತ್ತವೆ ಮತ್ತು ರಾಜ್ಯದೊಳಗೆ ಸಂಗ್ರಹಿಸಲಾದ IGST ಯ ಅಂದಾಜು 50% ರಷ್ಟು ಪಡೆಯುತ್ತಾರೆ.
-15ನೇ ಆರ್ಥಿಕ ಸಮಿತಿಯು ಯಾವುದೇ ರಾಜ್ಯಕ್ಕೆ ವಿಶೇಷ ಅನುದಾನವನ್ನು ಶಿಫಾರಸ್ಸು
ಮಾಡಿಲ್ಲ. ಹೀಗಾಗಿ ಶಿಫಾರಸ್ಸು ಸ್ವೀಕರಿಸದ ಪ್ರಶ್ನೆಯೇ ಉದ್ಭವಿಸುವುದಿಲ್ಲ.
-ಆರ್ಥಿಕ ವರ್ಷ 2020-21 ರಿಂದ, ಕರ್ನಾಟಕಕ್ಕೆ ಬಂಡವಾಳ ವೆಚ್ಚ ಯೋಜನೆಗಳಿಗೆ ಸಹಾಯ ಮಾಡಲು 50 ವರ್ಷಗಳ ಬಡ್ಡಿ-ರಹಿತ ಸಾಲವಾಗಿ ರೂ 6279.94 ಕೋಟಿ ಒದಗಿಸಲಾಗಿದೆ.
-ಯುಪಿಎ ಆಡಳಿತದ 10 ವರ್ಷಗಳಿಗೆ ಹೋಲಿಸಿದರೆ ಕರ್ನಾಟಕಕ್ಕೆ ನೀಡಲಾದ ಅನುದಾನ ಗಣನೀಯವಾಗಿ ಹೆಚ್ಚಿದೆ. ಎನ್‌ಡಿಎಯ 9 ವರ್ಷಗಳಲ್ಲಿ ಈಗಾಗಲೇ 2.08 ಲಕ್ಷ ಕೋಟಿ ರೂಪಾಯಿ ಬಿಡುಗಡೆ ಮಾಡಿದೆ, ಇದು ಯುಪಿಎ ಅನುದಾನಕ್ಕಿಂತ 243% ಹೆಚ್ಚಾಗಿದೆ.
-ಈ ಆರ್ಥಿಕ ವರ್ಷದ ಬಜೆಟ್ ನಲ್ಲಿ ರೂ. 18,005 ಕೋಟಿ ಹೆಚ್ಚುವರಿ ಅನುದಾನವನ್ನು ಬಿಡುಗಡೆ ಮಾಡಲು ನಿರ್ಧಾರಿಸಲಾಗಿದೆ.
ಕರ್ನಾಟಕದ ಮುಖ್ಯಮಂತ್ರಿಗಳಿಗೆ ಇದೆಲ್ಲ ಅರ್ಥವಾಗಿದ್ದರೂ ರಾಜ್ಯದಲ್ಲಿ ಕೊಳಕು ರಾಜಕಾರಣ ಮಾಡುತ್ತಿದ್ದಾರೆ ಎಂಬುದು ಸ್ಪಷ್ಟ. ಕಾಂಗ್ರೆಸ್ ಪಕ್ಷವು ರಾಜ್ಯದ ರೈತರು ಮತ್ತು ಜನರ ಅಗತ್ಯಗಳನ್ನು ಪೂರೈಸಬೇಕು, ಆದರೆ ಅವರು ರಾಜ್ಯ ಚುನಾವಣೆಯಲ್ಲಿ ಪೂರೈಸಲಾಗದ ಭರವಸೆಗಳನ್ನು ನೀಡಿ, ಈಗ ಕೇಂದ್ರ ಸರ್ಕಾರದ ಮೇಲೆ ಆರೋಪ ಹೊರಿಸಲು ಪ್ರಯತ್ನಿಸುತ್ತಿದ್ದಾರೆ. 2023ರ ಜುಲೈ 23ರಲ್ಲಿ ಉಪಮುಖ್ಯಮಂತ್ರಿಗಳು ಈ ವರ್ಷ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳ ಸ್ವಂತ ಆರ್ಥಿಕ ಸಲಹೆಗಾರ, “ಐದು ಖಾತರಿಗಳು (ಅವರ) ಸರ್ಕಾರಕ್ಕೆ ದೊಡ್ಡ ಆರ್ಥಿಕ ಹೊರೆಯಾಗಿ ಮಾರ್ಪಟ್ಟಿವೆ” ಎಂದು ಹೇಳಿದರು.
ಆದ್ದರಿಂದ, ಈ ಆರೋಪಗಳು ತಮ್ಮ ಆಡಳಿತದ ವೈಫಲ್ಯಗಳನ್ನು ಸಾರ್ವಜನಿಕರಿಂದ ಮರೆಮಾಚಲು ಕರ್ನಾಟಕ ಸರ್ಕಾರದ ಮತ್ತೊಂದು ವಿಫಲ ಪ್ರಯತ್ನವಾಗಿದೆ. ಆದರೆ ಈ ಚೇಷ್ಟೆಗಳು ಜನರನ್ನು ಮೂರ್ಖರನ್ನಾಗಿಸಲು ಸಾಧ್ಯವಿಲ್ಲ ಎಂಬುದನ್ನು ಮುಖ್ಯಮಂತ್ರಿಗಳು ಅರಿಯಬೇಕು ಎಂದು ವಾಗ್ದಾಳಿ ನಡೆಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ