AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಶಾಸಕಾಂಗ ಸಭೆ ಅಂತ್ಯ: ಸಭೆಯಲ್ಲಿ ಯಾವೆಲ್ಲಾ ನಿರ್ಧಾರ ಕೈಗೊಳ್ಳಲಾಗಿದೆ? ಇಲ್ಲಿದೆ ವಿವರ

ಬಜೆಟ್​ ಅಧಿವೇಶನ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್​ ನೇತೃತ್ವದಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆ ಅಂತ್ಯವಾಗಿದ್ದು, ಸಭೆಯಲ್ಲಿ ಕೆಲ ವಿಷಯಗಳ ಬಗ್ಗೆ ಗಂಭೀರ ಚರ್ಚೆಗಳು ಆಗಿವೆ. ಅಲ್ಲದೇ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಹೋರಾಟದ ಬಗ್ಗೆ ಕೆಲ ನಿರ್ಧಾರಗಳನ್ನು ತೆಗೆದುಕೊಂಡಿದೆ. ಹಾಗಾದ್ರೆ, ಸಭೆಯಲ್ಲಿ ಏನೆಲ್ಲಾ ತೀರ್ಮಾನಗಳಾಗಿವೆ ಎನ್ನುವ ವಿವರ ಇಲ್ಲಿದೆ.

ಬಿಜೆಪಿ ಶಾಸಕಾಂಗ ಸಭೆ ಅಂತ್ಯ:  ಸಭೆಯಲ್ಲಿ ಯಾವೆಲ್ಲಾ ನಿರ್ಧಾರ ಕೈಗೊಳ್ಳಲಾಗಿದೆ? ಇಲ್ಲಿದೆ ವಿವರ
ಕರ್ನಾಟಕ ಬಿಜೆಪಿ ಶಾಸಕಾಂಗ ಸಭೆ
ಕಿರಣ್​ ಹನಿಯಡ್ಕ
| Updated By: ರಮೇಶ್ ಬಿ. ಜವಳಗೇರಾ|

Updated on: Feb 12, 2024 | 9:53 PM

Share

ಬೆಂಗಳೂರು, (ಫೆಬ್ರವರಿ 12): ಇಂದಿನಿಂದ ಕರ್ನಾಟಕ ವಿಧಾನಮಂಡಲ ಅಧಿವೇಶನ (Karnataka Session)  ಆರಂಭವಾಗಿದ್ದು, ಮೊದಲ ದಿನವೇ ವಿಪಕ್ಷ ಬಿಜೆಪಿ(BJP) ಸದಸ್ಯರು ಕೇಸರಿ ಶಾಲು ಹಾಕಿಕೊಂಡು ಜೈ ಶ್ರೀರಾಮ್.. ಜೈ ಶ್ರೀರಾಮ್ ಅನ್ನೋ ಘೋಷಣೆಗಳನ್ನು ಕೂಗಿ ರಾಮನ ಜಪ ಮಾಡಿದೆ. ಇನ್ನು ನಾಳೆಯಿಂದ  (ಫೆಬ್ರವರಿ 13) ಅಧಿವೇಶನದಲ್ಲಿ ಯಾವೆಲ್ಲಾ ವಿಷಯಗಳನ್ನ ಪ್ರಸ್ತಾಪಿಸಿ ಸರ್ಕಾರವನ್ನು ಕಟ್ಟಿಹಾಕಬೇಕೆಂದು ಬಿಜೆಪಿ ಇಂದು ಶಾಸಕಾಂಗ ಸಭೆ (Karnataka BJP legislative party meeting) ನಡೆಸಿದ್ದು, ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ.

ಶಾಸಕಾಂಗ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಲೋಕಸಭೆ ಚುನಾವಣೆಯ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಬೊಮ್ಮಾಯಿ. ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ವಿಧಾನಸಭೆ ವಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ್ ಸೇರಿದಂತೆ ಇನ್ನುಳಿದ ಶಾಸಕರು ಹಾಜರಿದ್ದರು. ಆದ್ರೆ, ಸಭೆಗೆ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಎಸ್.ಟಿ.ಸೋಮಶೇಖರ್, ಅರೆಬೈಲ್ ಶಿವರಾಮ್ ಹೆಬ್ಬಾರ್, ರಮೇಶ್ ಜಾರಕಿಹೊಳಿ ಗೈರಾಗಿದ್ದಾರೆ.

ಮುಂದೆ ಲೋಕಸಭಾ ಚುನಾವಣೆ ಇರುವುದರಿಂದ ಈ ಅಧಿವೇಶನವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಲು ತೀರ್ಮಾನಿಸಿದ್ದು, ಸರ್ಕಾರದ ಲೋಷದೋಷಗಳನ್ನ ಸದನದಲ್ಲಿ ಚರ್ಚಿಸುವ ಮೂಲಕ ಜನರಿಗೆ ತಲುಪಿಸಲು ತೀರ್ಮಾನಿಸಿದೆ. ಇನ್ನು ಪಕ್ಷದಲ್ಲಿನ ಅಸಮಾಧಾನ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಚರ್ಚೆಗಳು ನಡೆದಿವೆ. ಅದರಲ್ಲೂ ಮುಖ್ಯವಾಗಿ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ಆರೋಪಿಸಿರುವ ಕಮಿಷನ್ ದಂಧೆ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ಹೋರಾಟ ಮಾಡುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿನ ನಿರ್ಧಾರಗಳು

  1. ಅಧಿವೇಶನದಲ್ಲಿ ಸಣ್ಣ ಪುಟ್ಟ ವಿಷಯಗಳಿಗೆ ಸದನದ ಬಾವಿಗೆ ಇಳಿಯುವುದು ಬೇಡ. ಸದನದಲ್ಲಿ ನಿರ್ಧಾರ ತೆಗೆದುಕೊಳ್ಳುವ ವೇಳೆ ವಿಪಕ್ಷ ನಾಯಕರು ಮತ್ತು ರಾಜ್ಯಾಧ್ಯಕ್ಷರ ಜೊತೆ ಚರ್ಚಿಸಿಯೇ ತೀರ್ಮಾನಿಸಬೇಕು.
  2. ಸಿಕ್ಕಾಪಟ್ಟೆ ವಿಷಯಗಳನ್ನು ಪ್ರಸ್ತಾಪ ಮಾಡಿ ಫಲಿತಾಂಶ ಇಲ್ಲದಂತೆ ಹೋಗುವ ಬದಲಾಗಿ ಫಲಿತಾಂಶ ಸಿಗುವ ನಿರ್ದಿಷ್ಟ ವಿಷಯಗಳನ್ನು ಮಾತ್ರ ಪ್ರಸ್ತಾಪಿಸಿ ಹೋರಾಟ ನಡೆಸಬೇಕು.
  3. ಲೋಕಸಭಾ ಚುನಾವಣೆ ಸಮೀಪವಿರುವ ಕಾರಣ ಈ ಅಧಿವೇಶನವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು.
  4. ಶಾಸಕರು ಸುಮ್ಮನೆ ಮೊಗಸಾಲೆಯಲ್ಲೇ ಕುಳಿತುಕೊಳ್ಳಬಾರದು. ಸೂಕ್ಷ್ಮ ವಿಷಯಗಳ ಚರ್ಚೆಯ ವೇಳೆ ಮೊಗಸಾಲೆಯಲ್ಲಿ ಕೂರದೇ ಸದನದಲ್ಲಿ ಪಾಲ್ಗೊಳ್ಳಬೇಕು.
  5. ಬೆಂಗಳೂರು ಸೇರಿದಂತೆ ರಾಜ್ಯದ ಬಿಜೆಪಿ ಶಾಸಕರಿಗೆ ಅನುದಾನ ಬಿಡುಗಡೆ ಸಂಬಂಧ ಸಿಎಂ ಬಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ‌. ವಿಜಯೇಂದ್ರ ನೇತೃತ್ವದಲ್ಲಿ ನಿಯೋಗ ತೆರಳಿ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ.
  6. ಲೋಕಸಭಾ ಚುನಾವಣೆ ಇರುವ ಕಾರಣ ಪಕ್ಷದಲ್ಲಿನ ಅಸಮಾಧಾನದ ಬಗ್ಗೆ ಬಹಿರಂಗ ಚರ್ಚೆಗೆ ಬ್ರೇಕ್ ಹಾಕಬೇಕು. ಚುನಾವಣೆ ಮುಗಿಯುವವರೆಗೂ ಅಸಮಾಧಾನಗಳನ್ನು ಪಕ್ಷದ ವೇದಿಕೆಯಲ್ಲೇ ಇಟ್ಟುಕೊಳ್ಳಬೇಕು.
  7. ಗುತ್ತಿಗೆದಾರರ ಸಂಘದ ಕಮಿಷನ್ ಆರೋಪವನ್ನು ಸಮರ್ಥವಾಗಿ ಸದನದಲ್ಲಿ ಪ್ರಸ್ತಾಪ ಮಾಡಿ ಸರ್ಕಾರದ ವಿರುದ್ಧ ಹೋರಾಟ ಮಾಡಲು ತೀರ್ಮಾನ.
  8. ಕೇಂದ್ರ ಸರ್ಕಾರದ ವಿರುದ್ಧದ ರಾಜ್ಯ ಸರ್ಕಾರದ ಅನುದಾನ ಆರೋಪಕ್ಕೆ ಸದನದಲ್ಲಿ ತಿರುಗೇಟು ನೀಡಲು ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆಯಾಗಿದ್ದು, ಕೇಂದ್ರದಿಂದ ಬಿಡುಗಡೆಯಾಗಿರುವ ಅನುದಾನ ಮತ್ತು ರಾಜ್ಯ ಸರ್ಕಾರ ಕೊಟ್ಟಿರುವ ಅನುದಾನದ ಬಗ್ಗೆ ದಾಖಲೆಗಳೊಂದಿಗೆ ಸದನದಲ್ಲಿ ಚರ್ಚೆಗೆ ತೀರ್ಮಾನ.
  9. ಸದನದಲ್ಲಿ ಎಲ್ಲರೂ ಒಬ್ಬರಿಗೊಬ್ಬರು ಸಹಕಾರ ಕೊಟ್ಟು ಮಾತನಾಡಬೇಕು. ಮಾಜಿ ಸಚಿವ ಗಂಡಸಿ ಶಿವರಾಂ ಸರ್ಕಾರದ ವಿರುದ್ಧ ಮಾಡಿರುವ ಕಮಿಷನ್ ಆರೋಪವನ್ನು ಸದನದಲ್ಲಿ ಟಾರ್ಗೆಟ್ ಮಾಡಬೇಕು.
  10. ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಸ್ ಸಿ, ಎಸ್ಟಿ ಸಮುದಾಯಕ್ಕೆ 75 ಯುನಿಟ್ ಕರೆಂಟ್ ಕೊಟ್ಟಿದ್ದನ್ನು ಮುನ್ನೆಲೆಗೆ ತರಬೇಕು.
  11. ಭಾಗ್ಯ ಯೋಜನೆಗಳಿಗೆ ಎಸ್ ಸಿಪಿ ಟಿಎಸ್ ಪಿ ಹಣ ವರ್ಗಾವಣೆ ಮಾಡಿರುವುದನ್ನು ಟಾರ್ಗೆಟ್ ಮಾಡಬೇಕು.
  12. ನಮಗೆ ಕೂಡಾ ಮಾತನಾಡಬೇಕು ಅಂತಾ ಅನ್ನಿಸುತ್ತದೆ. ಆದರೆ ಚುನಾವಣಾ ಸಮಯದಲ್ಲಿ ಮಾತನಾಡುವುದು ಪಕ್ಷಕ್ಕೆ ಸಮಸ್ಯೆಯಾಗುತ್ತದೆ. ಇದನ್ನು ಗಂಭೀರವಾಗಿ ತೆಗೆದುಕೊಂಡು ಬಹಿರಂಗ ಹೇಳಿಕೆಗಳಿಗೆ ಬ್ರೇಕ್ ಹಾಕಲೇಬೇಕು ಎಂದು ಶಾಸಕರು ತಮ್ಮ ನಾಯಕರಿಗೆ ಒತ್ತಾಯಿಸಿದ್ದಾರೆ.

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್