AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯಲ್ಲಿ ವಿಪಕ್ಷ ನಾಯಕನ ಆಯ್ಕೆಗೆ ಇಂದು ತೆರೆ: ಅವರ ಬಿಟ್ಟು, ಇವರ ಬಿಟ್ಟು, ಮತ್ಯಾರು?

ವಿಪಕ್ಷ ನಾಯಕ ಯಾರು ಎನ್ನುವುದೇ ಬಿಜೆಪಿಯಲ್ಲಿ ಕಗ್ಗಂಟಾಗಿದೆ. ಆಢಲಿತರೂಢ ಕಾಂಗ್ರೆಸ್ ಸರ್ಕಾರವನ್ನು ಕಾಂಗ್ರೆಸ್​ನ್ನ ಇಕ್ಕಟ್ಟಿನಲ್ಲಿ ಸಿಲುಕಿಸಬೇಕಾದ ಬಿಜೆಪಿಯೇ ಈಗ ಸಂಕಷ್ಟಕ್ಕೆ ಸಿಲುಕಿದ್ದು, ಯಾರಿಗೆ ವಿಪಕ್ಷ ನಾಯಕನ ಪಟ್ಟ ಎನ್ನುವುದು ಇಂದು ತೆರೆಬೀಳಲಿದೆ.ಆದ್ರೆ, ಯಾರು ಎನ್ನುವುದೇ ನಿಗೂಢವಾಗಿದೆ.

ಬಿಜೆಪಿಯಲ್ಲಿ ವಿಪಕ್ಷ ನಾಯಕನ ಆಯ್ಕೆಗೆ ಇಂದು ತೆರೆ: ಅವರ ಬಿಟ್ಟು, ಇವರ ಬಿಟ್ಟು, ಮತ್ಯಾರು?
ರಮೇಶ್ ಬಿ. ಜವಳಗೇರಾ
|

Updated on: Jul 04, 2023 | 8:20 AM

Share

ಬೆಂಗಳೂರು: ಈಗಾಗಲೇ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಜಂಟಿ ಅಧಿವೇಶನ ಉದ್ದೇಶಿಸಿ ನಿನ್ನೆ(ಜುಲೈ 03) ರಾಜ್ಯ ಪಾಲರು ಭಾಷಣ ಮಾಡಿದ್ದಾರೆ. ಆದ್ರೆ, ಅಧಿವೇಶನ ಆರಂಭವಾದ್ರೂ, ಬಿಜೆಪಿಯಲ್ಲಿ(BJP) ವಿಪಕ್ಷ ನಾಯಕ ( Opposition leader)ಯಾರು ಎನ್ನುವುದೇ ಇನ್ನೂ ನಿಗೂಢವಾಗಿದೆ. ಇದು ಬಿಜೆಪಿಗೆ ತೀವ್ರ ಇರಿಸುಮುರಿಸು ಉಂಟುಮಾಡಿದ್ದು, ಅಧಿವೇಶದನದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್​ನ್ನ ಇಕ್ಕಟ್ಟಿನಲ್ಲಿ ಸಿಲುಕಿಸಬೇಕಾದ ಬಿಜೆಪಿಯೇ ಈಗ ಸಂಕಷ್ಟಕ್ಕೆ ಸಿಲುಕಿದ್ದು, ಇಂದು (ಜುಲೈ 04) ವಿರೋಧ ಪಕ್ಷದ ನಾಯಕನ ಆಯ್ಕೆಯಾಗುವ ಸಾಧ್ಯತೆಗಳಿವೆ. ಆದ್ರೆ, ಯಾರಿಗೆ ವಿಪಕ್ಷ ನಾಯಕನ ಪಟ್ಟ ಎನ್ನುವುದು ಇನ್ನೂ ನಿಗೂಢವಾಗಿದೆ.

ಇದನ್ನೂ ಓದಿ: Karnataka Breaking News Live: ಸದನದಲ್ಲಿಂದು ಗ್ಯಾರಂಟಿ ಘೋಷಣೆ ಬಗ್ಗೆ ಚರ್ಚೆ, ಪ್ರತಿಭಟನೆಗೆ ಬಿಜೆಪಿ ಸಿದ್ಧತೆ

ಇಂದು ವಿಪಕ್ಷ ನಾಯಕನ ಆಯ್ಕೆ ಸಾಧ್ಯತೆ

ಇನ್ನು ಹೈಕಮಾಂಡ್​ ವಿರೋಧ ಪಕ್ಷ ನಾಯಕನ ಆಯ್ಕೆ ಮಾಡಲು ವೀಕ್ಷಕರನ್ನು ನೇಮಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ನಾಯಕನ ಆಯ್ಕೆ ಮಾಡಲು ಕೇಂದ್ರೀಯ ವೀಕ್ಷಕರಾಗಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರನ್ನು ನೇಮಿಸಿದ್ದಾರೆ. ಅವರು ಈಗಾಗಲೇ ಬೆಂಗಳೂರಿಗೆ ಬಂದಿದ್ದು, ಇಂದು(ಜುಲೈ 04) ಶಾಸಕರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಇಂದು ಬೆಳಗ್ಗೆ 9 ಗಂಟೆಗೆ ಶಾಸಕಾಂಗ ಸಭೆ ನಡೆಯಲಿದ್ದು, ಸಭೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಹೈಕಮಾಂಡ್​ಗೆ ಮಾಹಿತಿ ನೀಡಲಿದ್ದಾರೆ. ಬಳಿಕ ಅಧಿಕೃತವಾಗಿ ವಿರೋಧ ಪಕ್ಷ ನಾಯಕನ ಘೋಷಣೆಯಾಗಲಿದೆ ಎಂದು ತಿಳಿದುಬಂದಿದೆ.

ವಿಪಕ್ಷ ನಾಯಕನ ರೇಸ್​ನಲ್ಲಿ ಮೂವರು ಕೇಸರಿ ಕಲಿಗಳು

ಮೂಲಗಳ ಪ್ರಕಾರ ಬಿಜೆಪಿ ಹೈಕಮಾಂಡ್, ವಿಪಕ್ಷ ನಾಯಕನ ಸ್ಥಾನಕ್ಕೆ ಲಿಂಗಾಯತ, ಲಿಂಗಾಯತೇತರ ನಾಯಕರನ್ನು ನೇಮಿಸಿದ್ರೆ ಹೇಗೆ ಎನ್ನುವ ಲೆಕ್ಕಾಚಾರಗಳನ್ನು ಹಾಕಿದೆ. ಲಿಂಗಾಯತ ಸಮುದಾಯದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಸನಗೌಡ ಪಾಟೀಲ್ ಯತ್ನಾಳ್ ರೇಸ್​ನಲ್ಲಿದ್ದಾರೆ. ಅಲ್ಲದೇ ಶಾಸಕ ಸುನಿಕ್ ಕುಮಾರ್ ಕೂಡ ವಿಪಕ್ಷ ನಾಯಕನ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ. ಆದ್ರೆ ಯಾರಿಗೆ ವಿಪಕ್ಷ ನಾಯಕನ ಪಟ್ಟ ಎನ್ನುವುದು ಇನ್ನೂ ನಿಗೂಢವಾಗಿದೆ.

ಬಿಜೆಪಿ ವಿರುದ್ಧ ಕಾಂಗ್ರೆಸ್​ ಟೀಕಾಪ್ರಹಾರ!

ಅಸಲಿಗೆ ಮೊನ್ನೆ ದೆಹಲಿಯಲ್ಲೇ ವಿಪಕ್ಷ ನಾಯಕನ ಯಾರು ಎಂದು ಫೈನಲ್ ಆಗಬೇಕಿತ್ತು. ಕಲಾಪ ಆರಂಭ ಆಗುವ ಮುನ್ನವೇ ವಿಪಕ್ಷ ನಾಯಕನ ಹೆಸರು ಅಂತಿಮ ಆಗಲಿದೆ ಎಂದು ಬಿಜೆಪಿ ಟ್ವೀಟ್ ಮಾಡಿತ್ತು. ಇತ್ತ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ದೆಹಲಿಗೆ ಪ್ರಯಾಣ ಹೋಗಿಬಂದಿದ್ದರೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗೆ ನಿಗದಿಯಾಗಿದ್ದ ಸಭೆ ನಡೆಯಲೇ ಇಲ್ಲ. ಹೀಗಾಗಿ ವಿಪಕ್ಷ ನಾಯಕ ಯಾರು ಅನ್ನೋದು ಸಸ್ಪೆನ್ಸ್​ ಆಗೇ ಉಳಿದಿದೆ. ಇಷ್ಟೇ ಅಲ್ಲ ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಕಾಂಗ್ರೆಸ್, ಬಿಜೆಪಿ ವಿರುದ್ಧ ಸರಣಿ ಟ್ವೀಟ್ ಅಟ್ಯಾಕ್ ಮಾಡಿದೆ.

ಬಿಜೆಪಿಯ 66 ಶಾಸಕರಲ್ಲಿ ವಿಪಕ್ಷ ನಾಯಕನಾಗುವ ಅರ್ಹತೆ ಇರುವ ಒಬ್ಬೇ ಒಬ್ಬ ಶಾಸಕನಿಲ್ಲದಿರುವುದು ಅತ್ಯಂತ ನಾಚಿಕೆಗೇಡು. ಕರ್ನಾಟಕದ ಇತಿಹಾಸದಲ್ಲಿ ವಿಪಕ್ಷ ನಾಯಕನಿಲ್ಲದೆ ನಡೆಯುತ್ತಿರುವ ಮೊದಲ ಅಧಿವೇಶನವಿದು. ಬಿಜೆಪಿಯವರು ಅಧಿಕಾರದಲ್ಲಿದ್ದಾಗಲೂ ಪ್ರಜಾಪ್ರಭುತ್ವವನ್ನ ಗೌರವಿಸಲಿಲ್ಲ. ಈಗ ವಿಪಕ್ಷ ಸ್ಥಾನದಲ್ಲಿದ್ದಾಗಲೂ ಗೌರವಿಸುತ್ತಿಲ್ಲ. ವಿರೋಧ ಪಕ್ಷದ ನಾಯಕನ ಹುದ್ದೆಯನ್ನೂ ಮಾರಾಟಕ್ಕೆ ಇಡಲಾಗಿದೆಯೇ? ಸಿಎಂ ಹುದ್ದೆಗೆ 2,500 ಕೋಟಿ ರೂ. ಫಿಕ್ಸ್ ಮಾಡಲಾಗಿತ್ತು.. ವಿರೋಧ ಪಕ್ಷದ ನಾಯಕನ ಹುದ್ದೆ ಎಷ್ಟಕ್ಕೆ ಬಿಕರಿಯಾಗುತ್ತಿದೆ? ಆ ಚೌಕಾಶಿ ವ್ಯವಹಾರಕ್ಕಾಗಿಯೇ ಆಯ್ಕೆ ಪ್ರಕ್ರಿಯೆ ವಿಳಂಬವಾಗುತ್ತಿದೆಯೇ? ಬಿಜೆಪಿ ಉತ್ತರಿಸಬೇಕು ಎಂದು ಕಾಂಗ್ರೆಸ್ ಟ್ವೀಟ್ ಬಾಣ ಬಿಟ್ಟಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ