AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಬಿಜೆಪಿ ಪ್ರಮುಖರ ಸಭೆ ಅಂತ್ಯ: 5 ಹಂತದಲ್ಲಿ ಸಂಘಟನಾತ್ಮಕ ಸಭೆಗೆ ನಿರ್ಧಾರ: 5 ಹಂತಗಳಾವುವು? ಇಲ್ಲಿದೆ

ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ನೇತೃತ್ವದಲ್ಲಿ ಬೆಂಗಳೂರಿನ ಮಲ್ಲೇಶ್ವರಂ ಕಚೇರಿಯಲ್ಲಿ ನಡೆದ ಬಿಜೆಪಿ ಪ್ರಮುಖರ ಸಭೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆಗಾಗಿ ಪಕ್ಷ ಸಂಘಟನೆ ಬಗ್ಗೆ ಸುದೀರ್ಘ ಚರ್ಚೆ ನಡೆದಿದ್ದು, ಈ ವೇಳೆ ಕೆಲ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಹಾಗಾದ್ರೆ, ಪ್ರಮುಖರ ಸಭೆಯಲ್ಲಿ ಏನೆಲ್ಲಾ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ ಎನ್ನುವ ವಿವರ ಇಲ್ಲಿದೆ.

ರಾಜ್ಯ ಬಿಜೆಪಿ ಪ್ರಮುಖರ ಸಭೆ ಅಂತ್ಯ: 5 ಹಂತದಲ್ಲಿ ಸಂಘಟನಾತ್ಮಕ ಸಭೆಗೆ ನಿರ್ಧಾರ:  5 ಹಂತಗಳಾವುವು? ಇಲ್ಲಿದೆ
ಕರ್ನಾಟಕ ಬಿಜೆಪಿ ಪ್ರಮುಖರ ಸಭೆ
TV9 Web
| Edited By: |

Updated on: Feb 23, 2024 | 10:04 PM

Share

ಬೆಂಗಳೂರು, (ಫೆಬ್ರವರಿ 23): ಲೋಕಸಭೆ ಚುನಾವಣೆ (Loksabha Elections 2024 ) ತಯಾರಿ ಸಂಬಂಧ ಬಿಜೆಪಿ(BJP) ಇಂದು(ಫೆಬ್ರವರಿ 23) ಮಹತ್ವದ ಸಭೆ ನಡೆಸಿದೆ. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra)  ಅವರು ನೇತೃತ್ವದಲ್ಲಿ ಬೆಂಗಳೂರಿನ (bengaluru) ಮಲ್ಲೇಶ್ವರಂ ಕಚೇರಿಯಲ್ಲಿ ನಡೆದ ಬಿಜೆಪಿ ಪ್ರಮುಖರ ಸಭೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆಗಾಗಿ ಪಕ್ಷ ಸಂಘಟನೆ ಬಗ್ಗೆ ಸುದೀರ್ಘ ಚರ್ಚೆ ನಡೆದಿದ್ದು, ಈ ವೇಳೆ ಕೆಲ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಹಾಗಾದ್ರೆ, ಪ್ರಮುಖರ ಸಭೆಯಲ್ಲಿ ಏನೆಲ್ಲಾ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ ಎನ್ನುವ ವಿವರ ಇಲ್ಲಿದೆ. ಮುಂದಿನ ವಾರದಿಂದ ಕೇಂದ್ರದ ಬಿಜೆಪಿ ನಾಯಕರನ್ನೊಳಗೊಂಡ 4 ತಂಡಗಳಲ್ಲಿ ರಾಜ್ಯಾದ್ಯಂತ ಪ್ರವಾಸ ಮತ್ತು ಪ್ರವಾಸ ಸಂದರ್ಭದಲ್ಲಿ 5 ಹಂತದಲ್ಲಿ ಸಂಘಟನಾತ್ಮಕ ಸಭೆ ಮಾಡುವ ಬಗ್ಗೆ ತೀರ್ಮಾನಿಸಲಾಗಿದೆ.

5 ಹಂತದಲ್ಲಿ ಸಂಘಟನಾತ್ಮಕ ಸಭೆ

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ 28ಕ್ಕೆ 28 ಕ್ಷೇತ್ರಗಳಲ್ಲಿ ಗೆಲ್ಲಬೇಕೆಂದು ಪಣತೊಟ್ಟಿರುವ ಬಿಜೆಪಿ, ಮೊದಲಿಗೆ ಪಕ್ಷ ಸಂಘಟನೆಗೆ ಮೊದಲ ಆದ್ಯತೆ ನೀಡಿದೆ. ಮತದಾರರನ್ನು ತಲುಪಲು ರಾಜ್ಯ ಪ್ರವಾಸ ಸಂದರ್ಭದಲ್ಲಿ 5 ಹಂತದಲ್ಲಿ ಸಂಘಟನಾತ್ಮಕ ಸಭೆ ಮಾಡಲು ಬಿಜೆಪಿ ಪ್ರಮುಖರ ಸಭೆಯಲ್ಲಿ ನಿರ್ಧಾರವಾಗಿದೆ. ಬಿಜೆಪಿ ಕಾರ್ಯಕರ್ತರು- ಬೂತ್ ಅಧ್ಯಕ್ಷರ ಜೊತೆ ಸಭೆ, ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳ ಜೊತೆ ಸಭೆ, ಚುನಾವಣಾ ನಿರ್ವಹಣಾ ಸಮಿತಿ ಸಭೆ, ಸಾರ್ವಜನಿಕ ಸಭೆ ಮತ್ತು ಕ್ಷೇತ್ರ ವ್ಯಾಪ್ತಿಯಲ್ಲಿ ಸಾಮಾಜಿಕ ಕೊಡುಗೆ ನೀಡಿದವರ ಮನೆಗೆ ಭೇಟಿ ನೀಡಬೇಕೆನ್ನುವುದು ಸಭೆಯಲ್ಲಿ ನಿರ್ಧರಿಸಲಾಗಿದೆ.

ಇದನ್ನೂ ಓದಿ: ರಾಜ್ಯಸಭೆಗೆ ಮತಹಾಕಲು ಬಿಜೆಪಿಯಿಂದ ಮೂರು ಶಾಸಕರ ಬ್ಯಾಚ್: ಹಿರಿಯ ಶಾಸಕನ ನಾಯಕನಾಗಿ ನೇಮಕ ಮಾಡಲು ನಿರ್ಧಾರ

ಕೋರ್ ಕಮಿಟಿ ಸದಸ್ಯರನ್ನೊಳಗೊಂಡ ಪ್ರಮುಖರ ಸಭೆಯಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷ ನಾಯಕ ಆರ್.ಅಶೋಕ್, ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ, ಬಸವರಾಜ್​​ ಬೊಮ್ಮಾಯಿ, ವಿಪಕ್ಷ ಉಪನಾಯಕ ಬೆಲ್ಲದ್ ಸೇರಿ ಹಲವರು ಭಾಗಿಯಾಗಿದ್ದರು.

ಒಬಿಸಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆ

ಇನ್ನು ಈ ಬಿಜೆಪಿ ಪ್ರಮುಖರ ಸಭೆಗೂ ಮೊದಲು ಹವ್ಯಕ ಭವನದಲ್ಲಿ ಒಬಿಸಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿರುವ ಬಿ.ವೈ. ವಿಜಯೇಂದ್ರ, ದೇಶದ ಹಿತದೃಷ್ಟಿ, ದೇಶದ ರಕ್ಷಣೆಗಾಗಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬೇಕೆಂದು ಜನರು ಬಯಸಿದ್ದಾರೆ. ರಾಜ್ಯದಲ್ಲೂ 28ಕ್ಕೆ 28 ಸೀಟುಗಳನ್ನು ಬಿಜೆಪಿ- ಜೆಡಿಎಸ್ ಪಕ್ಷಗಳು ಗೆಲ್ಲಲಿವೆ. ಬಿಜೆಪಿ ಕಾರ್ಯಕರ್ತರು, ಪ್ರಮುಖರು ಮೋದಿಯವರ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಬೇಕಿದೆ ಎಂದು ಕಿವಿ ಮಾತು ಹೇಳಿದರು.

ಒಬಿಸಿ ಮೋರ್ಚಾದ ಪದಾಧಿಕಾರಿಗಳು ತಾವು ಬಿಜೆಪಿ ಕಾರ್ಯಕರ್ತರು ಎಂಬುದನ್ನು ಮರೆಯಬಾರದು. ನಮ್ಮ ಪದಾಧಿಕಾರಿಗಳು ತಮ್ಮ ಬೂತ್ ಕಡೆ ಗಮನ ಹರಿಸಬೇಕು. ಮತದಾರರ ಪಟ್ಟಿ, ಬೂತ್ ಕಡೆ ಗಮನ ಕೊಡಬೇಕು. ಎಷ್ಟು ಹೆಸರು ಸೇರ್ಪಡೆ ಆಗಿದೆ? ಎಷ್ಟು ಹೆಸರು ರದ್ದಾಗಿದೆ ಎಂಬ ಕಡೆ ಗಮನಿಸಬೇಕು. ಹಾಗೇ 100 ಮತ ಬಂದಿದ್ದರೆ ಅದನ್ನು 200 ಮಾಡುವುದು ಹೇಗೆ? 500 ಮತ ಬಂದಿದ್ದರೆ ಅದನ್ನು ಮತ್ತಷ್ಟು ಹೆಚ್ಚಿಸುವುದು ಹೇಗೆ ಎಂಬ ಕಡೆ ಗಮನ ಹರಿಸಬೇಕಿದೆ. ಕ್ಷೇತ್ರಕ್ಕೆ ತೆರಳಿ ಬೂತ್ ಬಲಪಡಿಸುವ ಕಡೆ ಯೋಜನೆ ಮತ್ತು ಕಾರ್ಯಕ್ರಮ ರೂಪಿಸಬೇಕು ಎಂದು ಕರೆ ನಿಡಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ