ಬಿಜೆಪಿ ಕೇಸರಿ ಅಥವಾ ಕಪ್ಪಾ ಶಾಲಾದರೂ ಹಾಕಿಕೊಳ್ಳಲಿ, ಕೇಸರಿ ಇವರೊಬ್ಬರ ಆಸ್ತಿಯಾ?: ಡಿಕೆ ಶಿವಕುಮಾರ್
ರಾಜ್ಯದಲ್ಲಿ ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ನಂತರ ಕೆಲವೆಡೆ ಸಾರ್ವಜನಿಕ ಪ್ರದೇಶದಲ್ಲಿ ಹಾಕಿದ್ದ ಕೇಸರಿ ಧ್ವಜನಗಳನ್ನು ತೆರವುಗೊಳಿಸಲಾಗಿದೆ. ಇದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿತ್ತು. ಇದರ ಬೆನ್ನಲ್ಲೇ, ಕರ್ನಾಟಕ ಬಜೆಟ್ ಅಧಿವೇಶನದ ಮೊದಲ ದಿನವಾದ ಇಂದು (ಫೆ.12) ವಿಪಕ್ಷ ಬಿಜೆಪಿ ಶಾಸಕರು ಕೇಸರಿ ಶಾಲು ಧರಿಸಿಕೊಂಡು ಹಾಜರಾದರಲ್ಲದೆ, ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿದರು. ಈ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರು, ಫೆ.12: ಕರ್ನಾಟಕ ಬಜೆಟ್ ಅಧಿವೇಶನದ (Karnataka Budget Session 2024) ಮೊದಲ ದಿನವಾದ ಇಂದು (ಫೆ.12) ವಿಪಕ್ಷ ಬಿಜೆಪಿ (BJP) ಶಾಸಕರು ಕೇಸರಿ ಶಾಲು ಧರಿಸಿಕೊಂಡು ಹಾಜರಾದರಲ್ಲದೆ, ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar), ಬಿಜೆಪಿಯವರು ಕೇಸರಿ ಶಾಲಾದರೂ ಹಾಕಿಕೊಳ್ಳಲಿ ಕಪ್ಪಾದರೂ ಹಾಕಿಕೊಳ್ಳಲಿ. ಕೇಸರಿ ಇವರೊಬ್ಬರ ಆಸ್ತಿಯಾ ಎಂದು ಪ್ರಶ್ನಿಸಿದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಜಂಟಿ ಅಧಿವೇಶನವನ್ನು ಉದ್ದೇಶಿ ಮಾತನಾಡುತ್ತಾ, ಇಡೀ ದೇಶಕ್ಕೆ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳು ಮಾದರಿಯಾಗಿವೆ. ಸರ್ಕಾರವು ನಡೆ ನುಡಿಗಳಗಳನ್ನು ಒಂದಾಗಿಸಿಕೊಂಡು ಕೆಲಸ ಮಾಡುತ್ತಿದೆ ಎಂದೆಲ್ಲಾ ಹಾಡಿ ಹೊಗಳಿದರು. ಆದರೆ, ರಾಜ್ಯಪಾಲರಿಂದ ಸರ್ಕಾರವು ಸುಳ್ಳು ಭಾಷಣ ಮಾಡಿಸಿದೆ ಎಂದು ವಿಪಕ್ಷ ಬಿಜೆಪಿ ಟೀಕಿಸುತ್ತಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್, ನಾವು ರಾಜ್ಯದ ಹಿತಕ್ಕೆ ಏನು ಬೇಕೋ ಅದನ್ನು ಮಾಡುತ್ತೇವೆ ಎಂದರು. ಅಲ್ಲದೆ, ನಮ್ಮ ಗ್ಯಾರಂಟಿಗಳನ್ನೇ ಇವರು ಕಾಪಿ ಮಾಡಿದ್ದಾರೆ. ನಮ್ಮ ಗ್ಯಾರಂಟಿ ಕಾಪಿ ಮಾಡಿಯೇ ಮೋದಿ ಗ್ಯಾರಂಟಿ ಅಂತ ಮಾಡುತ್ತಿಲ್ಲವೇ? ಕರ್ನಾಟಕ ಮಾಡೆಲ್ ಅನ್ನೇ ನಾವು ಜಾರಿ ಮಾಡುತ್ತೇವೆ ಎಂದರು.
ಇದನ್ನೂ ಓದಿ: Karnataka Budget 2024: ಬಜೆಟ್ ಅಧಿವೇಶನಕ್ಕೆ ಕೇಸರಿ ಶಾಲು ಧರಿಸಿಕೊಂಡು ಬಂದ ಬಿಜೆಪಿ ನಾಯಕರು
ಕರ್ನಾಟಕ ಬಜೆಟ್ ಅಧಿವೇಶನ 2024 ಇಂದಿನಿಂದ ಆರಂಭವಾಗಿದೆ. ಹತ್ತು ದಿನಗಳ ಕಾಲ ನಡೆಯುವ ವಿಧಾನಮಂಡಲ ಅಧಿವೇಶನದಲ್ಲಿ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 16 ರಂದು ಬಜೆಟ್ ಮಂಡನೆ ಮಾಡಲಿದ್ದಾರೆ. ಇಂದು ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಿದರು.
ಬಜೆಟ್ ಅಧಿವೇಶನದ ಮೊದಲ ದಿನ ಬಿಜೆಪಿ ನಾಯಕರು ಕೇಸರಿ ಶಾಲೆ ಧರಿಸಿಕೊಂಡು ಬಂದಿದ್ದು ವಿಶೇಷವಾಗಿದೆ. ಸದ್ಯ ರಾಜ್ಯದಲ್ಲಿ ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ವಿಚಾರ ರಾಜ್ಯವ್ಯಾಪಿ ಹಬ್ಬಿದೆ. ಕೆರಗೋಡಿನಲ್ಲಿ ಹನುಮ ಧ್ವಜವನ್ನು ಮತ್ತೆ ಹಾರಿಸಲು ಬಿಜೆಪಿ ನಾಯಕರು ಪಣತೊಟ್ಟಿದ್ದಾರೆ. ಇದರ ಪ್ರತೀಕವೆಂಬಂತೆ ಬಿಜೆಪಿ ಶಾಸಕರು ಅಧಿವೇಶನಕ್ಕೆ ಕೇಸರಿ ಶಾಲು ಧರಿಸಿಕೊಂಡು ಬಂದಿದ್ದಾರೆ. ಈ ಮೂಲಕ ಹಿಂದೂ ವಿರೋಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸರ್ಕಾರವೆಂದು ಸಾಂಕೇತಿಕವಾಗಿ ಟೀಕಿಸಿದ್ದಾರೆ.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ