BJP: ನಾಗರಿಕರ ಸಮಸ್ಯೆಗಳಿಗೆ ಪರಿಹಾರ ಕೊಡಿಸುವ ಯೋಜನೆ ಮೂಲಕ ಪಕ್ಷ ಸಂಘಟನೆಗೆ ಹೊರಟ ಬಿಜೆಪಿ
ಮುಂದಿನ ಬಿಬಿಎಂಪಿ, ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳನ್ನು ದೃಷ್ಟಿಯಲ್ಲಿರಿಸಿಕೊಂಡು ಬಿಜೆಪಿ ಕಾರ್ಯತಂತ್ರ ರೂಪಿಸಿದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು: ಪಕ್ಷ ಸಂಘಟನೆ ಮಾಡುವುದಕ್ಕೆ ಬಿಜೆಪಿ ಹೊಸ ಪ್ಲ್ಯಾನ್ ಮಾಡಿಕೊಂಡಿದೆ. ರಾಜ್ಯ ಸರ್ಕಾರದ ಮೂಲಕ ಜನರ ಸಮಸ್ಯೆ ಬಗೆಹರಿಸಿ, ಪಕ್ಷ ಸಂಘಟನೆ ಮಾಡುವುದಕ್ಕೆ ಬಿಜೆಪಿಯಿಂದ ಯೋಜನೆ ಸಿದ್ಧವಾಗಿದೆ. ಸಮಸ್ಯೆಗಳಿಗೆ ಪರಿಹಾರ ನೀಡಲು ಮುಖ್ಯಮಂತ್ರಿ ಹಾಗೂ ಸಚಿವರ ಭೇಟಿ ನಡೆಯಲಿದೆ. ಬಿಜೆಪಿ ನಿಯೋಗದಿಂದ ಸಿಎಂ, ಹಾಗೂ ಸಂಬಂಧಿಸಿದ ಸಚಿವರ ಭೇಟಿ ಮಾಡಲಾಗುವುದು. ನಗರ, ಜಿಲ್ಲಾವಾರು ಸಮಸ್ಯೆಗಳ ಬಗ್ಗೆ ಗಮನ ಸೆಳೆದು, ಜನರ ಸಮಸ್ಯೆಗಳಿಗೆ ಪರಿಹಾರ ಕೊಡಿಸುವುದಕ್ಕೆ ಯೋಜನೆ ಹಾಕಲಾಗಿದೆ.
ಇದರ ಮೊದಲ ಭಾಗವಾಗಿ ನಿನ್ನೆ ಇಂಧನ ಸಚಿವರ ಭೇಟಿ ನಡೆಸಲಾಗಿದೆ. ಬೆಸ್ಕಾಂ ಮೀಟರ್ ಸಂಬಂಧ ಇಂಧನ ಸಚಿವರ ಭೇಟಿ ಮಾಡಲಾಗಿದೆ. ಶೀಘ್ರದಲ್ಲಿಯೇ ಅಕ್ರಮ ಸಕ್ರಮ ಸಮಸ್ಯೆಗಳ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯನ್ನು ಬಿಜೆಪಿ ನಿಯೋಗ ಭೇಟಿಯಾಗಲಿದೆ. ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಕೊಡಿಸಲು ಪ್ಲ್ಯಾನ್ ರೂಪಿಸಲಾಗಿದೆ. ಮುಂದಿನ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಹೊಸ ಕಾರ್ಯತಂತ್ರವನ್ನು ಬಿಜೆಪಿ ರೂಪಿಸಿದೆ ಎಂದು ತಿಳಿದುಬಂದಿದೆ.
ರಾಜ್ಯ ಸರ್ಕಾರದ ಮೂಲಕ ಜನರ ಸಮಸ್ಯೆಗಳನ್ನು ಪರಿಹರಿಸಿ ಸಂಘಟನೆಗೆ ಪ್ಲಾನ್ ಹಾಕಲಾಗಿದೆ. ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ನೀಡಲು ಪಕ್ಷದ ನಿಯೋಗ ಸಚಿವರು ಮತ್ತು ಸಿಎಂ ಭೇಟಿ ಮಾಡಲಿದೆ. ನಗರವಾರು, ಜಿಲ್ಲಾವಾರು ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಸಚಿವರ ಗಮನ ಸೆಳೆದು ಪರಿಹಾರ ಕೊಡಿಸುವ ಯೋಜನೆ ಇದಾಗಿದೆ. ಮೊದಲ ಭಾಗವಾಗಿ ಬೆಂಗಳೂರು ನಗರದಲ್ಲಿ ಬೆಸ್ಕಾಂ ಮೀಟರ್ ಸಮಸ್ಯೆ ಸಂಬಂಧ ರಾಜ್ಯ ಬಿಜೆಪಿ ನಿಯೋಗ ನಿನ್ನೆ ಇಂಧನ ಸಚಿವ ಸುನೀಲ್ ಕುಮಾರ್ ಭೇಟಿ ಮಾಡಿದೆ. ಮುಂದಿನ ಬಿಬಿಎಂಪಿ, ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳನ್ನು ದೃಷ್ಟಿಯಲ್ಲಿರಿಸಿಕೊಂಡು ಬಿಜೆಪಿ ಕಾರ್ಯತಂತ್ರ ರೂಪಿಸಿದೆ ಎಂದು ಹೇಳಲಾಗುತ್ತಿದೆ.
ಮೊದಲ ಬಾರಿಗೆ ಬಿಜೆಪಿಗೆ ಮೈಸೂರು ಮೇಯರ್ ಸ್ಥಾನ ಮೊದಲ ಬಾರಿಗೆ ಬಿಜೆಪಿಗೆ ಮೈಸೂರು ಮೇಯರ್ ಸ್ಥಾನ ಲಭಿಸಿದೆ. ಹಾಸನ, ಮಂಡ್ಯ, ಮೈಸೂರು ಭಾಗದಲ್ಲಿ ಪಕ್ಷಕ್ಕೆ ವೇಗ ಸಿಗಲಿದೆ. ಪಕ್ಷ ಸಂಘಟನೆಗೆ ವೇಗ ಸಿಗಬೇಕು ಎಂಬುದು ಇತ್ತು. ಮೊದಲ ಪ್ರಯತ್ನದಲ್ಲೇ ಮೇಯರ್ ಸ್ಥಾನ ಗೆದ್ದಿದ್ದೇವೆ ಎಂದು ಮಂಡ್ಯದಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಸಿದ್ದರಾಮಯ್ಯ, ಡಿಕೆಶಿ ನಡುವೆ ಜಗಳ ಆರಂಭ ಆಗಿದೆ. ಯಾರು ಸಿಎಂ ಎಂಬ ವಿಚಾರವಾಗಿ ಜಗಳ ಆರಂಭವಾಗಿದೆ. ಹೀಗಾಗಿ ಕಾಂಗ್ರೆಸ್ ಪದಾಧಿಕಾರಿಗಳನ್ನೇ ನೇಮಕ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.
ಸರ್ಕಾರದ ವಿರುದ್ಧ ಶಾಸಕ ಯತ್ನಾಳ್ ವಾಗ್ದಾಳಿ ವಿಚಾರವಾಗಿ ಪ್ರತಿಕ್ರಿಯಿಸಿದ ನಳಿನ್ ಕುಮಾರ್, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ. ರಾಷ್ಟ್ರೀಯ ಶಿಸ್ತು ಸಮಿತಿ ಎಲ್ಲವನ್ನ ಗಮನಿಸುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: Mysuru Mayor election; ಮೊದಲ ಬಾರಿಗೆ ಮೈಸೂರು ಮೇಯರ್ ಪಟ್ಟಕ್ಕೇರಿದ ಬಿಜೆಪಿ: ಮೇಯರ್ ಆಗಿ ಸುನಂದಾ ಪಾಲನೇತ್ರ ಆಯ್ಕೆ
ರೂಲ್ಸ್ ಮಾಡಿದವರಿಂದಲೇ ರೂಲ್ಸ್ ಬ್ರೇಕ್! ಮಂಡ್ಯದಲ್ಲಿ ಬಿಜೆಪಿ ನಾಯಕರಿಂದ ಬೃಹತ್ ಸಭೆ
Published On - 4:22 pm, Wed, 25 August 21