ಕರ್ನಾಟಕ ಬಿಜೆಪಿಯ ನೂತನ ಅಧ್ಯಕ್ಷ ವಿಜಯೇಂದ್ರ ಪರಿಚಯ, ನಡೆದು ಬಂದ ರಾಜಕೀಯ ಹಾದಿ ಹೀಗಿದೆ

BY Vijayendra profile: ಬಿ.ಎಸ್‌. ಯಡಿಯೂರಪ್ಪ (BS Yediyurappa) ಅವರು ಕರ್ನಾಟಕದಲ್ಲಿ ಕಮಲದ ಬೀಜವನ್ನು ಬಿತ್ತಿ ಅದು ಸಂಪೂರ್ಣವಾಗಿ ಅರಳುವಂತೆ ಮಾಡಿದ್ದಾರೆ. ಅಲ್ಲದೇ ರಾಜ್ಯಾದ್ಯಂತ ಕಮಲದ ಪರಿಮಳ ಹರುಡುವಲ್ಲಿ ಯಡಿಯೂರಪ್ಪನವರ ಪಾತ್ರ ದೊಡ್ಡದಿದೆ. ಸೈಕಲ್​​​ ತುಳಿಯುವುದರೊಂದಿಗೆ ಐಷರಾಮಿ ಕಾರಿನಲ್ಲಿ ಸುತ್ತಾಡಿ ಪಕ್ಷ ಸಂಘಟನೆ ಮಾಡಿದ್ದಾರೆ. ಇದೀಗ ತಂದೆ ಹಾದಿಯಲ್ಲೇ ಪುತ್ರ ವಿಜಯೇಂದ್ರ ನಡೆದುಕೊಂಡು ಬಂದಿದ್ದಾರೆ. ಹೀಗಾಗಿ ಬಿಜೆಪಿ ಹೈಕಮಾಂಡ್​ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ ನೀಡಿದೆ. ಹಾಗಾದ್ರೆ, ವಿಜಯೇಂದ್ರ ನಡೆದು ಬಂದ ಹಾದಿ ಹೇಗಿತ್ತು? ಎನ್ನುವ ಅವರ ಕಿರು ಪರಿಚಯ ಇಲ್ಲಿದೆ.

ಕರ್ನಾಟಕ ಬಿಜೆಪಿಯ ನೂತನ ಅಧ್ಯಕ್ಷ ವಿಜಯೇಂದ್ರ ಪರಿಚಯ, ನಡೆದು ಬಂದ ರಾಜಕೀಯ ಹಾದಿ ಹೀಗಿದೆ
ಬಿವೈ ವಿಜಯೇಂದ್ರ
Follow us
ರಮೇಶ್ ಬಿ. ಜವಳಗೇರಾ
|

Updated on: Nov 15, 2023 | 12:30 PM

ಬೆಂಗಳೂರು, (ನವೆಂಬರ್ 15): ಕಳೆ ಗುಂದಿದ ರಾಜ್ಯ ಬಿಜೆಪಿ ಪಾಳೆಯದಲ್ಲೀಗ ಮಿಂಚಿನ ಸಂಚಾರವಾದಂಥ ಅನುಭವ. ಅದಕ್ಕೆ ಕಾರಣ ಯಡಿಯೂರಪ್ಪನವರ (BS Yediyurappa) ಪುತ್ರ ಬಿವೈ ವಿಜಯೇಂದ್ರ (BY Vijayendra) ಅವರು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅದರಲ್ಲೂ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ದಿನವೇ ತಮ್ಮ ಮೊದಲ ಭಾಷಣದಲ್ಲಿ ಜಾತಿ ಮನೋಭಾವನೆ ಬಿಟ್ಟು ಒಟ್ಟಾಗಿ ಕೆಲಸ ಮಾಡೋಣ ಎಂದು ಕಾರ್ಯಕರ್ತರಿಗೆ, ಮುಖಂಡರಿಗೆ ಕರೆ ಕೊಟ್ಟಿದ್ದಾರೆ. ಹಾಗಾದ್ರೆ, ಬಿವೈ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷ ಮಟ್ಟಕ್ಕೆ ಬೆಳೆದಿದ್ದು ಹೇಗೆ? ಅವರು ನಡೆದು ಬಂದ ಹಾದಿ ಹೇಗಿತ್ತು ಎನ್ನುವುದನ್ನು ತಿಳಿದುಕೊಳ್ಳಿ.

ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಕರ್ನಾಟಕದಲ್ಲಿ ಕಮಲದ ಬೀಜವನ್ನು ಬಿತ್ತಿ ಅದು ಸಂಪೂರ್ಣವಾಗಿ ಅರಳುವಂತೆ ಮಾಡಿದ್ದಾರೆ. ಅಲ್ಲದೇ ರಾಜ್ಯಾದ್ಯಂತ ಕಮಲದ ಪರಿಮಳ ಹರುಡುವಲ್ಲಿ ಯಡಿಯೂರಪ್ಪನವರ ಪಾತ್ರ ದೊಡ್ಡದಿದೆ. ಸೈಕಲ್​​​ ತುಳಿಯುವುದರೊಂದಿಗೆ ಐಷರಾಮಿ ಕಾರಿನಲ್ಲಿ ಸುತ್ತಾಡಿ ಪಕ್ಷ ಸಂಘಟನೆ ಮಾಡಿದ್ದಾರೆ. ಇದೀಗ ತಂದೆ ಹಾದಿಯಲ್ಲೇ ಪುತ್ರ ವಿಜಯೇಂದ್ರ ನಡೆದುಕೊಂಡು ಬಂದಿದ್ದಾರೆ. ಹೀಗಾಗಿ ಬಿಜೆಪಿ ಹೈಕಮಾಂಡ್​ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ ನೀಡಿದೆ.

ಇದನ್ನೂ ಓದಿ: ಎಕೆ ಸುಬ್ಬಯ್ಯದಿಂದ ಬಿವೈ ವಿಜಯೇಂದ್ರ ವರೆಗೆ: ಕರ್ನಾಟಕ ಬಿಜೆಪಿ ಅಧ್ಯಕ್ಷರ ಪಟ್ಟಿ ಇಲ್ಲಿದೆ

ಮೊದಲಿಗೆ ಎಬಿವಿಪಿಯಲ್ಲಿ ಗುರುತಿಸಿಕೊಂಡು ಬಳಿಕ ಬಿಜೆಪಿ ಯುವ ಮೋರ್ಚಾ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ ಹಲವು ಉಪ ಚುನಾವಣೆ ಹಾಗೂ ಪಕ್ಷ ಸಂಘಟನೆ ಸಂಬಂಧ ಹೈಕಮಾಂಡ್​ ನೀಡಿದ್ದ ಟಾಸ್ಕ್ ಗಳನ್ನು ಸಮರ್ಥವಾಗಿ ನಿಭಾಯಿಸಿ ಸೈ ಎನಿಸಿಕೊಂಡಿದ್ದಾರೆ. ಜೊತೆ ಪ್ರಬಲ ಸಮುದಾಯದ ನಾಯಕನ ಪುತ್ರ ಎನ್ನು ಒಂದು ಅಂಶವೂ ಸಹ ವಿಜಯೇಂದ್ರಗೆ ಅಧ್ಯಕ್ಷ ಪಟ್ಟ ಒಲಿಯುವುದರಲ್ಲಿ ಸಹಾಯಕವಾಗಿದೆ.

ಇದೀಗ ವಿಜಯೇಂದ್ರ ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದು, ಅವರ ಮುಂದೆ ದೊಡ್ಡ ಸವಾಲಗಳ ರಾಶಿಯೇ ಇದೆ. ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಪಕ್ಷವನ್ನು ಮೇಲೆತ್ತಬೇಕಿದೆ. ಮತ್ತೊಂದೆಡೆ ಸೋಲಿನಿಂದ ಹತಾಶೆಗೊಂಡು ಮನೆ ಸೇರಿರುವ ಕಾರ್ಯಕರ್ತರು, ಮುಖಂಡರಲ್ಲಿ ಉತ್ಸಹ ಮೂಡಿಸಿ ಮುನ್ನಲೆಗೆ ಕರೆದುಕೊಂಡು ಬರಬೇಕಿದೆ. ಅದರಲ್ಲೂ ಪ್ರಮುಖವಾಗಿ ಅಸಮಾಧಾನಗೊಂಡಿರುವ ಹಿರಿಯ ನಾಯಕರನ್ನು ಸಮಾಧಾನ ಮಾಡಬೇಕಿದೆ. ಹೀಗೆ ಹತ್ತು ಹಲವು ಸವಾಲುಗಳು ವಿಜಯೇಂದ್ರ ಮುಂದೆ ಇವೆ. ಇವೆಲ್ಲವುಗಳನ್ನು ಅದು ಹೇಗೆ ನಿಭಾಯಿಸುತ್ತಾರೆ ಎನ್ನುವುದೇ ಕುತೂಹಲ

ವಿಜಯೇಂದ್ರ ನಡೆದು ಬಂದ ಹಾದಿ

  • 1973 ಆಗಸ್ಟ್ 6ರಂದು ವಿಜಯೇಂದ್ರ ಜನನ
  • ರಾಜ್ಯದ ಪ್ರಮುಖ ಲಿಂಗಾಯತ ಸಮುದಾಯಕ್ಕೆ ಸೇರಿರುವ ವಿಜಯೇಂದ್ರ
  • ತಂದೆ ಬಿ ಎಸ್ ಯಡಿಯೂರಪ್ಪ. ಮಾಜಿ ಮುಖ್ಯಮಂತ್ರಿ
  • ಸಹೋದರ ಬಿ ವೈ ರಾಘವೇಂದ್ರ ಶಿವಮೊಗ್ಗ ಕ್ಷೇತ್ರದ ಸಂಸದ
  • ವಿಜೇಯಂದ್ರ ಅವರು ಕಾನೂನು ಪದವಿ ಪೂರ್ಣಗೊಳಿಸಿ ಒಂದಿಷ್ಟು ದಿನಗಳ ಕಾಲ ವಕೀಲಿಕಿ ಕೂಡ ಮಾಡಿದ್ದಾರೆ.
  • ವಿದ್ಯಾಬ್ಯಾಸ ಮಾಡುತ್ತಿರುವಾಗಲೇ ಎಬಿವಿಪಿ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು.
  • ತಂದೆ 1983ರಿಂದಲೂ ಪ್ರತಿನಿಧಿಸುತ್ತಿದ್ದ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಕ್ಷೇತ್ರದಿಂದ 2023ರ ಚುನಾವಣೆಯಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆ.
  •  ಶಾಸಕರಾಗುವ ಮುಂಚೆ ವಿಜಯೇಂದ್ರ ಅವರು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ.
  •  ಪಕ್ಷದ ಉಪಾಧ್ಯಕ್ಷರಾಗುವ ಮುಂಚೆ ವಿಜಯೇಂದ್ರ ಅವರು ಬಿಜೆಪಿ ಯುವ ಮೋರ್ಚಾ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯೂ ಆಗಿದ್ದರು.
  • ಕಳೆದ ವಿಧಾನಸಭೆ ಚುನಾವಣೆ ವೇಳೆ ವಿಜಯೇಂದ್ರ ಅವರು 25 ಸದಸ್ಯರ ಚುನಾವಣಾ ಪ್ರಚಾರ ಸಮಿತಿಯ ಸದಸ್ಯರಾಗಿಯೂ ಕೆಲಸ ಮಾಡಿದ್ದಾರೆ.
  • 2020ರಲ್ಲಿ ಕೆ ಆರ್ ಪೇಟೆ ಮತ್ತು ಶಿರಾ ವಿಧಾನಸಭಾ ಉಪ ಚುನಾವಣೆಯ ಉಸ್ತುವಾರಿಯನ್ನು ಹೊತ್ತಿದ್ದರು. ಅಲ್ಲದೇ, ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವಲ್ಲಿ ಯಶಸ್ವಿಯಾಗಿದ್ದರು.
  •  ಈ ಹಿಂದಿನ ಅವಧಿಯಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗುವಲ್ಲಿ ವಿಜಯೇಂದ್ರ ಅವರು ಪ್ರಮುಖ ಪಾತ್ರ ನಿರ್ವಹಿಸಿದ್ದರು.
  • ಉತ್ತಮ ಸಂಘಟಕ, ತಂತ್ರಗಾರ ಎಂದು ಹೈಕಮಾಂಡ್​ ಗೆ ಮುಂದೆ ಸಾಬೀತು ಮಾಡಿದ್ದಾರೆ.

156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್