ಬೆಂಗಳೂರು/ಬಳ್ಳಾರಿ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ SC ST ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವ ತೀರ್ಮಾನವನ್ನು ಬೊಮ್ಮಾಯಿ ಸರ್ಕಾರ ಕೈಗೊಂಡಿದೆ. ಈ ಮೀಸಲಾತಿ ಹೆಚ್ಚಳ ವಿಚಾರ ವಿಪಕ್ಷ ಮತ್ತು ಆಡಳಿತ ಪಕ್ಷದ ಮದ್ಯೆ ಸಮರಕ್ಕೂ ಸಾಕ್ಷಿಯಾಗಿದೆ. ಈ ಮಧ್ಯೆ ಮೀಸಲಾತಿ ಹೆಚ್ಚಳದ ಕ್ರೆಡಿಟ್ ಪಡೆಯಲು ಬಿಜೆಪಿ ಮಾಸ್ಟರ್ ಪ್ಲ್ಯಾನ್ ಮಾಡಿದೆ. ಎಸ್ ಸಿ/ಎಸ್ ಟಿ ಸಮುದಾಯದ ಜನರನ್ನ ಸೇರಿಸಿ ರಾಜ್ಯದಲ್ಲಿ ಬೃಹತ್ ಸಮಾವೇಶ ಕೈಗೊಳ್ಳಲು ಕೇಸರಿ ಪಡೆ ಮುಂದಾಗಿದೆ.
ಮೀಸಲಾತಿ ಹೆಚ್ಚಳ ವಿಚಾರವಾಗಿ ಚರ್ಚೆ ಮಾಡ್ತಿರೋ ನಾಯಕರು. ಹಿಂದುಳಿದ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವ ಸರ್ಕಾರ. ಸಮುದಾಯದ ಬೆಂಬಲ ಪಡೆಯಲು ಬಿಜೆಪಿ ಪ್ಲ್ಯಾನ್. ಯೆಸ್. SC ST ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಿರೋ ರಾಜ್ಯ ಬಿಜೆಪಿ ಸರ್ಕಾರ ಹಿಂದುಳಿದ ಸಮುದಾಯದ ಬೆಂಬಲ ಪಡೆಯಲು ಬೃಹತ್ ಸಮಾವೇಶ ಆಯೋಜನೆ ಮಾಡಿದೆ.
ಬಳ್ಳಾರಿಯಲ್ಲಿ ನ.6ರಂದು ರಾಜ್ಯಮಟ್ಟದ ಬೃಹತ್ ಎಸ್ಟಿ ಸಮಾವೇಶ ಆಯೋಜಿಸಿದ ಬಿಜೆಪಿ
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಳ ಮಾಡಬೇಕು ಅನ್ನೋ ಕೂಗು ದಶಕಗಳಿಂದ ಕೇಳಿ ಬರತಾ ಇತ್ತು. SC ST ಸಮುದಾಯಕ್ಕೆ ಮೀಸಲಾತಿ ಕೊಡಬೇಕು ಅಂತಾ ವಾಲ್ಮೀಕಿ ಸ್ವಾಮೀಜಿಗಳು ನಿರಂತರವಾಗಿ ಧರಣಿ ಸತ್ಯಾಗ್ರಹ ಸಹ ನಡೆಸಿದ್ರು. SC ST ಸಮುದಾಯಕ್ಕೆ ಮೀಸಲಾತಿ ಕೊಡಿಸಿಯೇ ತಿರುವೇ ಎಂದು ಶಪಥ ಮಾಡಿದ್ದ ಶ್ರೀರಾಮುಲು ಕೊನೆಗೂ ಮೀಸಲಾತಿ ಹೆಚ್ಚಳ ಮಾಡಿಸಿ ಮೀಸೆ ತಿರುತ್ತಿದ್ದಾರೆ. ಇದೇ ವೇಳೆ ಹಿಂದುಳಿದ ಸಮುದಾಯದ ಬೆಂಬಲ ಪಡೆಯಲು ಬಿಜೆಪಿ ಮಾಸ್ಟರ್ ಪ್ಲಾನ್ ಮಾಡಿದೆ.
ಬಿಜೆಪಿ ಜನ ಸಂಕಲ್ಪ ಯಾತ್ರೆ ಮೂಲಕ ಈಗಾಗಲೇ ಚುನಾವಣೆ ಪ್ರಚಾರ ಆರಂಭಿಸಿರೋ ಬಿಜೆಪಿ ನಾಯಕರು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಬೆಂಬಲ ಪಡೆಯಲು ಬೃಹತ್ ಸಮಾವೇಶ ಆಯೋಜಿಸಿದೆ. 5 ಲಕ್ಷ ಜನರನ್ನ ಸಂಘಟಿಸಿ ನವಂಬರ್ 20 ರಂದು ಬಳ್ಳಾರಿಯಲ್ಲಿ ಎಸ್ ಟಿ ಸಮಾವೇಶ ಆಯೋಜನೆ ಮಾಡಲು ಬಿಜೆಪಿ ಮುಂದಾಗಿದೆ. ಈ ಮೂಲಕ ಹಿಂದುಳಿದ ವರ್ಗಗಳ ಮತಗಳನ್ನ ಪಕ್ಷದತ್ತ ಸೆಳೆಯಲು ಬಿಜೆಪಿ ಬೃಹತ್ ಸಮಾವೇಶ ಆಯೋಜಿಸಿದೆ.
ಹಿಂದುಳಿದ ವರ್ಗಗಳ ನಾಯಕರೆಂದು ಕರೆಯಿಸಿಕೊಳ್ಳುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದಾಗ ಮೀಸಲಾತಿ ಕೊಡಿಸಲಿಲ್ಲ. ಅಹಿಂದ ವರ್ಗಗಳ ಹೆಸರಿನಲ್ಲಿ ರಾಜಕಾರಣ ಮಾಡ್ತಿರೋ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷ ಮೀಸಲಾತಿ ವಿಚಾರದಲ್ಲಿ ನಿರ್ಧಾರ ಕೈಗೊಳ್ಳಲಿಲ್ಲ.ಆದ್ರೆ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ. ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಕೊಡಿಸಿದೆ ಅಂತಾ ಬಿಜೆಪಿ ನಾಯಕರು ಸಮಾವೇಶದ ಮೂಲಕ ಸಮರ ಸಾರಲು ಮುಂದಾಗಿದ್ದಾರೆ.
ಅಲ್ಲದೇ ಮೀಸಲಾತಿ ಹೆಚ್ಚಳ ಮಾಡಿದ ನಂತರವೂ ಕಾಂಗ್ರೆಸ್ ಜೆಡಿಎಸ್ ತಮ್ಮ ಪ್ರಯತ್ನ ಎನ್ನುತ್ತಿರುವುದಕ್ಕೆ ಟಾಂಗ್ ಕೊಡಲು ಬಿಜೆಪಿ ತಂತ್ರ ಹೆಣೆದಿದೆ. ರಾಜ್ಯದ ಎಲ್ಲ ಜಿಲ್ಲೆಗಳ ಎಸ್ ಟಿ ಸಮುದಾಯದ 5 ಲಕ್ಷ ಜನರನ್ನ ಸೇರಿಸಿ ಬೃಹತ್ ಸಮಾವೇಶದ ಮೂಲಕ ಮೀಸಲಾತಿ ಹೆಚ್ಚಳದ ಕ್ರೆಡಿಟ್ ಪಡೆಯಲು ಬಿಜೆಪಿ ಮುಂದಾಗಿದೆ. ಮೀಸಲಾತಿ ವಿಚಾರವಾಗಿ ಸಿದ್ದರಾಮಯ್ಯ ಸರ್ಕಾರ ಎನೂ ಮಾಡ್ತು ತಮ್ಮ ಸರ್ಕಾರ ಎನೂ ಮಾಡಿದೆ ಅಂತಾ ಸಮಾವೇಶದ ಮೂಲಕ ಹಿಂದುಳಿದ ವರ್ಗಗಳ ಮತ ಸೆಳೆಯಲು ಬಿಜೆಪಿ ನಾಯಕರು ಮುಂದಾಗಿದ್ದಾರೆ.
ನವಂಬರ್ 20 ರಂದು ಬಳ್ಳಾರಿಯಲ್ಲಿ ನಡೆಯಲಿರುವ ಸಮಾವೇಶಕ್ಕೆ ರಾಜ್ಯದ ಎಲ್ಲ ಜಿಲ್ಲೆಗಳಿಂದ 5 ಲಕ್ಷ ಜನರನ್ನ ಕರೆತರಲು ಈಗಾಗಲೇ ಸಿದ್ದತೆ ಶುರುವಾಗಿದೆ. ಇದೂವರೆಗೂ ಮೇಲ್ವರ್ಗದ ಮತಗಳ ಮೇಲೆ ಕಣ್ಣಿಟ್ಟು ರಾಜಕೀಯ ಮಾಡ್ತಿದ್ದ ಬಿಜೆಪಿ ಇದೀಗ ಮೀಸಲಾತಿ ಹೆಚ್ಚಳದ ಕ್ರೆಡಿಟ್ ಮೂಲಕ ಹಿಂದುಳಿದ ವರ್ಗಗಳ ಮತಗಳನ್ನ ಸೆಳೆಯಲು ಮುಂದಾಗಿರುವುದು ವಿಶೇಷವಾಗಿದೆ. ಆ ನಿಟ್ಟಿನಲ್ಲಿ ಶ್ರೀರಾಮುಲು ತಮ್ಮ ಶಕ್ತಿ ಪ್ರದರ್ಶನ ತೋರಿಸಲು ಸಜ್ಜಾಗಿದ್ದಾರೆ.
ಇನ್ನು SC ST ಮೀಸಲಾತಿ ಹೆಚ್ಚಳದ ಕ್ರೆಡಿಟ್ ತಗೆದುಕೊಳ್ಳಲು ಮುಂದಾಗಿರುವ ಬಿಜೆಪಿಯ ಪ್ಲಾನ್ ವರ್ಕೌಟ್ ಆಗುತ್ತಾ ಎನ್ನುವುದನ್ನು ಕಾದುನೋಡಬೇಕಿದೆ.