ರೈತರ ಹಣ ಬಿಡುಗಡೆ ಮಾಡದಿದ್ರೆ ಸರ್ಕಾರದ ವಿರುದ್ಧ ಜನ, ಜಾನುವಾರುಗಳ ಜೊತೆ ಹೋರಾಟ ಮಾಡಬೇಕಾಗುತ್ತದೆ: ಬಿವೈ ವಿಜಯೇಂದ್ರ

ಹಾಲು ಉತ್ಪಾದಕರ ಪ್ರೋತ್ಸಾಹ ಧನ ಕೊಡುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ ವೈ ವಿಜಯೇಂದ್ರ ವಾಗ್ದಾಳಿ ಮಾಡಿದ್ದಾರೆ. ಅಲ್ಲದೆ ರೈತರ ಹಣ ಬಿಡುಗಡೆ ಮಾಡದಿದ್ರೆ ಸರ್ಕಾರದ ವಿರುದ್ಧ ಜನ, ಜಾನುವಾರುಗಳ ಜೊತೆ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ.

ರೈತರ ಹಣ ಬಿಡುಗಡೆ ಮಾಡದಿದ್ರೆ ಸರ್ಕಾರದ ವಿರುದ್ಧ ಜನ, ಜಾನುವಾರುಗಳ ಜೊತೆ ಹೋರಾಟ ಮಾಡಬೇಕಾಗುತ್ತದೆ: ಬಿವೈ ವಿಜಯೇಂದ್ರ
ಶಾಸಕ ಬಿವೈ ವಿಜಯೇಂದ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on: Feb 05, 2024 | 10:47 AM

ಬೆಂಗಳೂರು, ಫೆಬ್ರವರಿ 05: ಸರ್ಕಾರ ಹಾಲು ಉತ್ಪಾದಕರ ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿದೆ. ಹಣ ಬಾಕಿ ಉಳಿಸಿಕೊಂಡಿದ್ದರಿಂದ ಹಾಲು ಉತ್ಪಾದನೆ ಕುಂಠಿತಗೊಂಡಿದೆ. ಬಿಎಸ್​ ಯಡಿಯೂರಪ್ಪ (BS Yediyurappa) ಅವರು ಮುಖ್ಯಮಂತ್ರಿಯಾಗಿದ್ದಾಗ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡುತ್ತಿದ್ದರು. ಹೀಗಾಗಿ ಆಗ ಪ್ರತಿ ನಿತ್ಯ 26 ಲಕ್ಷ ರೈತರಿಂದ 85 ಲಕ್ಷ ಲೀಟರ್ ಹಾಲು (Milk) ಸಂಗ್ರಹವಾಗುತ್ತಿತ್ತು. ಈಗ ಕಾಂಗ್ರೆಸ್​ ಸರ್ಕಾರ (Congress Government) 716 ಕೋಟಿ ರೂ. ಬಾಕಿ ಉಳಿಸಿಕೊಂಡಿದ್ದರಿಂದ ರಾಜ್ಯದಲ್ಲಿ 10 ಲಕ್ಷ ಲೀಟರ್ ಹಾಲು ಸಂಗ್ರಹ ಕಡಿಮೆ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಅವರು ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಜನ ಅಷ್ಟೇ ಅಲ್ಲ ಜಾನುವಾರುಗಳೂ ಕೂಡ ಸರ್ಕಾರದ ಮೇಲೆ ಶಾಪ ಹಾಕುತ್ತಿವೆ. ರಾಜ್ಯ ಸರ್ಕಾರ ಜಾನುವಾರುಗಳ ಕೋಪಕ್ಕೂ ಬಲಿಯಾಗಿದೆ. ರಾಜ್ಯ ಸರ್ಕಾರ ತನ್ನ ಹೊಣೆ ಮರೆತು ಕೇಂದ್ರದ ಕಡೆ ಬೊಟ್ಟು ಮಾಡುತ್ತಿದೆ. ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹ ಧನ ತಕ್ಷಣ ಬಿಡುಗಡೆ ಮಾಡಲಿ. ಇಲ್ಲದಿದ್ದರೆ ರೈತರ ಹಣ ಬಾಕಿ ಉಳಿಸಿಕೊಂಡ ಪಾಪ ಸರ್ಕಾರಕ್ಕೆ ತಗಲುತ್ತದೆ. ಹಣ ಬಿಡುಗಡೆ ಮಾಡದಿದ್ದರೆ ಜನ ಮತ್ತು ಜಾನುವಾರುಗಳೊಂದಿಗೆ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಪ್ರತ್ಯೇಕ ರಾಷ್ಟ್ರ ಹೇಳಿಕೆ: ಡಿಕೆ ಸುರೇಶ್​ ಮನೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿಗರ ಮೇಲೆ ಲಾಠಿ ಪ್ರಹಾರ, ಗುಡುಗಿದ ವಿಜಯೇಂದ್ರ

ಬಿಎಸ್​ ಯಡಿಯೂರಪ್ಪ ಅವರ ಕೃಪಾಕಟಾಕ್ಷದಿಂದ ವಿಜಯೇಂದ್ರ ರಾಜ್ಯಾಧ್ಯಕ್ಷ ಆಗಿದ್ದಾರೆ ಎಂಬ ಉಪಮುಖ್ಯಮಂತ್ರಿ ಡಿ.ಕೆ.‌ ಶಿವಕುಮಾರ್ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಇದಕ್ಕೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ಕೊಡುತ್ತೇವೆ. ಲೋಕಸಭಾ ಚುನಾವಣೆಯಲ್ಲಿ ಇದಕ್ಕೆ ಜನರೇ ಉತ್ತರಿಸುತ್ತಾರೆ ಅಮಿತ್ ಶಾ ರಾಜ್ಯಕ್ಕೆ ಬರುವ ವಿಚಾರವಾಗಿ ಮಾತನಾಡಿದ ಅವರು ಅಮಿತ್ ಶಾ ಅವರು ಇದೇ ತಿಂಗಳು 10ಕ್ಕೆ ಬೆಂಗಳೂರಿಗೆ ಬರುತ್ತಿದ್ದಾರೆ. ಲೋಕಸಭಾ ಕ್ಲಸ್ಟರ್ ಮೀಟಿಂಗ್ ಮಾಡಲಿದ್ದೇವೆ. ಚರ್ಚೆ ಮಾಡಿ, ತದನಂತರ ಲೋಕಸಭಾ ಅಭ್ಯರ್ಥಿಗಳ ಜೊತೆ ಚರ್ಚೆ ಮಾಡಲಿದ್ದಾರೆ ಎಂದರು.

ಮಂಡ್ಯ, ಹಾಸನ ಕ್ಷೇತ್ರ ಕುರಿತು ಪ್ರೀತಂಗೌಡ ಹೇಳಿಕೆ, ಚಿಕ್ಕಬಳ್ಳಾಪುರದಲ್ಲಿ ಕೆ. ಸುಧಾಕರ್ ಸ್ಫರ್ಧೆ ವಿಚಾರವಾಗಿ ಮಾತನಾಡಿದ ಅವರು, ಎಲ್ಲಾ ಕೂತು ಚರ್ಚೆ ಮಾಡುತ್ತೇವೆ. ಗೊಂದಲ ಇಲ್ಲ, ಎಲ್ಲರ ಜತೆ ಚರ್ಚಿಸಿ ಕ್ಷೇತ್ರ ಹಂಚಿಕೆ ಆಗಲಿದೆ. ಯಾರು ಯಾವ ಕ್ಷೇತ್ರಕ್ಕೆ ಅಭ್ಯರ್ಥಿ ಆಗಬೇಕು ಅಂತ ಹೈಕಮಾಂಡ್ ನಿರ್ಧಾರ ಮಾಡಲಿದೆ. ಕಾರ್ಯಕರ್ತರ ಅಭಿಪ್ರಾಯ ಪಡೆದು ಹೈಕಮಾಂಡ್ ನಾಯಕರು ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ