AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ವಿರೋಧಿಸಿದರೆ ಮೋದಿಯನ್ನು ವಿರೋಧಿಸಿದಂತೆ: ಈ ಹೇಳಿಕೆಗೆ ಸ್ಪಷ್ಟನೆ ನೀಡಿದ ವಿಜಯೇಂದ್ರ

ಬಿವೈ ವಿಜಯೇಂದ್ರ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದ್ದು, ಇದಕ್ಕೆ ಬಿಜೆಪಿಯಲ್ಲೇ ಹಲವರ ಅಸಮಾಧಾನಕ್ಕೆ ಕಾರಣವಾಗಿದೆ. ಈಗಾಗಲೇ ಬಸನಗೌಡ ಪಾಟೀಳ್ ಯತ್ನಾಲ್ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರೆ, ಇನ್ನೂ ಹಲವು ನಾಯಕರು ಬಹಿರಂಗವಾಗಿ ಹೇಳಿಕೆ ನೀಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ವಿಜಯೇಂದ್ರ ಅವರು ತಮ್ಮನ್ನು ವಿರೋಧಿಸಿದರೆ ನರೇಂದ್ರ ಮೋದಿ ಅವರನ್ನು ವಿರೋಧಿಸಿದಂತೆ ಎಂದು ವಿರೋಧಿಗಳಿಗೆ ಬಾಣ ಬಿಟ್ಟಿದ್ದರು. ಈ ಹೇಳಿಕೆ ಬಿಜೆಪಿಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಇದಕ್ಕೆ ಸಮಜಾಯಿಷಿ ಕೊಟ್ಟಿದ್ದಾರೆ.

ನನ್ನ ವಿರೋಧಿಸಿದರೆ ಮೋದಿಯನ್ನು ವಿರೋಧಿಸಿದಂತೆ: ಈ ಹೇಳಿಕೆಗೆ ಸ್ಪಷ್ಟನೆ ನೀಡಿದ ವಿಜಯೇಂದ್ರ
ಬಿವೈ ವಿಜಯೇಂದ್ರ
TV9 Web
| Edited By: |

Updated on: Nov 23, 2023 | 12:40 PM

Share

ಬೆಂಗಳೂರು, (ನವೆಂಬರ್ 23): ನನ್ನನ್ನು ವಿರೋಧಿಸಿದರೆ ಮೋದಿಯವರನ್ನು (Narendra Modi) ವಿರೋಧಿಸಿದಂತೆ ಎಂಬ ತಮ್ಮ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY vijayendra) ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ರಾಜ್ಯಾಧ್ಯಕ್ಷರಾಗಿ ನನ್ನನ್ನು ಆಯ್ಕೆ ಮಾಡಿದ್ದು ಯಡಿಯೂರಪ್ಪನವರಲ್ಲ. ನಮ್ಮ ಪಕ್ಷದ ವರಿಷ್ಠರು ಹಾಗೂ ಎಲ್ಲಾ ಹಿರಿಯರು ಆಯ್ಕೆ ಮಾಡಿದ್ದಾರೆ. ಈ ಹಿನ್ನೆಲೆ ಪಕ್ಷ ಹಾಗೂ ದೇಶದ ಹಿತದಿಂದ ಒಂದಾಗಿ ಹೋಗಬೇಕು. ಈ ಉದ್ದೇಶದಿಂದ ಹಾಗೇ ಹೇಳಿದ್ದೇನೆ ಅಷ್ಟೇ ಎಂದು ಸ್ಪಷ್ಟನೆ ನೀಡಿದರು.

ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಪಕ್ಷದಲ್ಲಿ ಎಲ್ಲರನ್ನೂ ಜೊತೆಗೆ ಕರೆದೊಯ್ಯುವುದು ನನ್ನ ಜವಾಬ್ದಾರಿ. ಜಾರಕಿಹೊಳಿ ನಡೆ ಬಗ್ಗೆ ಹಲವು ರೀತಿಯಲ್ಲಿ ಚರ್ಚೆ ನಡೆಯುತ್ತಿತ್ತು. ಕೆಲವು ಬಾರಿ ಶಾಸಕ ರಮೇಶ್ ಅಸಮಾಧಾನ ತೋಡಿಕೊಂಡಿದ್ದರು. ಹೀಗಾಗಿ ರಮೇಶ್ ಭೇಟಿ ಮಾಡಿ ಅರ್ಧಗಂಟೆ ಚರ್ಚೆ ಮಾಡಿದ್ದೇನೆ. ಕೆಲವು ಸಣ್ಣಪುಟ್ಟ ಅಸಮಾಧಾನಗಳಿದ್ದವು, ಅದರ ಬಗ್ಗೆ ಚರ್ಚಿಸಿದ್ದೇವೆ. ನರೇಂದ್ರ ಮೋದಿಯವರು ಮತ್ತೆ ಪ್ರಧಾನಿ ಆಗಬೇಕು. ಪಕ್ಷದಲ್ಲಿ ಸಹಕಾರ ಕೊಡುವುದಾಗಿ ರಮೇಶ್ ಜಾರಕಿಹೊಳಿ ಹೇಳಿದ್ದಾರೆ ಎಂದರು.

ಇದನ್ನೂ ಓದಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಮತ್ತೆ ನಳಿನ್ ಕುಮಾರ್ ಕಟೀಲ್ ಅಭ್ಯರ್ಥಿ: ಬಂಡಾಯದ ಬೆಂಕಿಗೆ ತುಪ್ಪ ಸುರಿದರಾ ವಿಜಯೇಂದ್ರ?

ಇನ್ನು ಇದೇ ವೇಳೆ ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ಸೋಮಣ್ಣ ಅಸಮಾಧಾನದ ಬಗ್ಗೆ ಮಾತನಾಡಿ, ಪಕ್ಷದ ಹಿರಿಯರು ಏನೇ ಮಾತಾಡಿದರೂ ಆಶೀರ್ವಾದ ಅಂದುಕೊಳ್ಳುತ್ತೇನೆ. ಎಲ್ಲರನ್ನೂ ಜೊತೆಗೆ ಕರೆದುಕೊಂಡು ಹೋಗುತ್ತೇನೆ ಎಂದು ಹೇಳಿದರು.

ನನ್ನನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದವರು ಯಾರು? ಯಡಿಯೂರಪ್ಪನಾ? ಅದು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ. ಕರ್ನಾಟಕದ ಎಲ್ಲಾ 28 ಸೀಟುಗಳನ್ನು ಗೆದ್ದು ಮೋದಿ ಅವರಿಗೆ ತಲುಪಿಸುವುದು ನನ್ನ ಕೆಲಸ. ಯಾರಾದರೂ ನನ್ನನ್ನು ವಿರೋಧಿಸಿದರೆ ಅವರು ಮೋದಿಯನ್ನು ವಿರೋಧಿಸಿದಂತೆ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ