ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಕುಮಾರಸ್ವಾಮಿಯನ್ನ ಭೇಟಿಯಾದ ವಿಜಯೇಂದ್ರ

ಮಿತ್ರ ಪಕ್ಷ ಜೆಡಿಎಸ್​ನ ವರಿಷ್ಠೆರಾದ ಹೆಚ್​ಡಿ ದೇವೇಗೌಡ ಅವರನ್ನು ಭೇಟಿ ಮಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಇಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು. ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಬಿಡದಿಯ ತೋಟದ ಮನೆಯಲ್ಲಿ ಕುಮಾರಸ್ವಾಮಿಯವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಕುಮಾರಸ್ವಾಮಿಯನ್ನ ಭೇಟಿಯಾದ ವಿಜಯೇಂದ್ರ
ವಿಜಯೇಂದ್ರ-ಕುಮಾರಸ್ವಾಮಿ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ Edited By:

Updated on: Nov 26, 2023 | 4:14 PM

ರಾಮನಗರ, (ನವೆಂಬರ್ 26): ಬಿವೈ ವಿಜಯೇಂದ್ರ (BY VIjayendra) ಅವರು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗುತ್ತಿದ್ದಂತೆಯೇ ಪಕ್ಷದ ಹಿರಿಯ ನಾಯಕರು ಹಾಗೂ ವಿವಿಧ ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದುಕೊಳ್ಳುತ್ತಿದ್ದಾರೆ. ಅದರಂತೆ ಇದೀಗ ಮೈತ್ರಿ ಪಕ್ಷದ ನಾಯಕ ಮಾಜಿ ಮಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರನ್ನು ಭೇಟಿ ಮಾಡಿದರು. ಬಿಡದಿಯ ಕೇತಗಾನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು. ಮುಂಬರುವ ಲೋಕಸಭಾ ಚುನಾವಣೆಗೆ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಉಭಯ ನಾಯಕರ ಭೇಟಿ ರಾಜ್ಯ ರಾಜಕಾರಣದಲ್ಲಿ ಮಹತ್ವ ಪಡೆದುಕೊಂಡಿದೆ.

ಇನ್ನು ಕುಮಾರಸ್ವಾಮಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಪ್ರಧಾನಿ ಮೋದಿ, ಜೆಪಿ ನಡ್ಡಾ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿಯವರು ದೆಹಲಿಯಲ್ಲಿ ಸಭೆ ಮಾಡಿದ ಬಳಿಕ ನಾನು ಇಂದು ಭೇಟಿಯಾಗಿದ್ದೇನೆ. ಒಗ್ಗಟ್ಟಾಗಿ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಮೈತ್ರಿ ಬಗ್ಗೆ ಮಾತನಾಡಿದ್ದೇವೆ. ಏನ್ ಸ್ಟಾಟರ್ಜಿ ಇದೆ ಅಂತ ನಾಲ್ಕು ಗೋಡೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ 28 ಕ್ಷೇತ್ರದಲ್ಲಿ ಬಿಜೆಪಿಯ ವಿಜಯ ಪತಾಕೆ ಹಾರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರ ಕಿರುಕುಳ: ಕಾನೂನು ನೆರವಿಗಾಗಿ ಕಂಟ್ರೋಲ್ ರೂಂ ತೆರೆಯಲು ಚಿಂತನೆ: ವಿಜಯೇಂದ್ರ

ನಾನು ಜವಾಬ್ದಾರಿ ತೆಗದುಕೊಂಡ‌ ನಂತರ ಮಾಜಿ ದೇವೇಗೌಡ ಭೇಟಿ‌ ಮಾಡಿ ಚರ್ಚೆ ಮಾಡಿದ್ದೇನೆ. ಇಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ್ದು, ಮುಂಬರುವ ಲೋಕಸಭೆ ಚುನಾವಣೆ ಕುರಿತು ಚರ್ಚಿಸಿದ್ದೇನೆ. ದೇಶದ ಭವಿಷ್ಯ ರೂಪಿಸುವ ಲೋಕಸಭೆ ಚುನಾವಣೆ. ಹೀಗಾಗಿ 28 ಕ್ಷೇತ್ರಕ್ಕೆ 28 ಕ್ಷೇತ್ರಗಳಲ್ಲಿ ಬಿಜೆಪಿ , ಜೆಡಿಎಸ್ ಗೆಲ್ಲುವುದಕ್ಕೆ ಹೊರಟಿದೆ ಎಂದರು.

ಈ ಮೈತ್ರಿಯನ್ನು ಲೋಕಸಭೆ ಮಾತ್ರವಲ್ಲದೇ ಈ ರಾಜ್ಯ ಸರ್ಕಾರದ ವಿರುದ್ಧವೂ ಮುಂದವರಿಸಲಿದ್ದೇವೆ. ರೈತ ವಿರೋಧಿ, ಬಡವರ ವಿರೋಧ, ದಲಿತರ ವಿರೋಧಿ ಸರ್ಕಾರವನ್ನು ಪ್ರಶ್ನೆ ಮಾಡಲಿದ್ದೇವೆ. ಕೆಟ್ಟ ಸರಕಾರಕ್ಕೆ ಅದಕ್ಕೆ ತಕ್ಕ ಪಾಠ ಕಲಿಸಲು, ಒಟ್ಟಾಗಿ ಸಾಗಬೇಕು. ಮುಂದಿನ ಅಧಿವೇಶನದಲ್ಲಿ ಒಟ್ಟಾಗಿ ಹೋರಾಟ ಮಾಡಬೇಕು. ಆ‌ ನಿಟ್ಟಿನಲ್ಲಿ ಮಾತುಕತೆ ಮಾಡಿದ್ದೇವೆ ಎಂದು ತಿಳಿಸಿದರು.

ಬಿಜೆಪಿ- ಜೆಡಿಎಸ್ ಲೋಕಸಭಾ ಸೀಟು ಹಂಚಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಸದ್ಯಕ್ಕೆ ಸೀಟು ಹಂಚಿಕೆ ಇನ್ನೂ ಆಗಿಲ್ಲ. ಈ ಬಗ್ಗೆ ವರಿಷ್ಠರು ಚರ್ಚೆ ಮಾಡುತ್ತಾರೆ ಎಂದು ಹೇಳಿರುವ ಅವರು, ಪಕ್ಷದಲ್ಲಿ ಸಣ್ಣ-ಪುಟ್ಟ ಗೊಂದಲಗಳಿವೆ. ಎಲ್ಲವನ್ನೂ ಸರಿಪಡಿಸುವ ಕೆಲಸ ನಾನು ಮಾಡುತ್ತೇನೆ ಎಂದು ಹೇಳಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Loading...
Unable to load recommendations.
Follow Us