ಯತ್ನಾಳ್ ಅಸಮಾಧಾನದ ಬಗ್ಗೆ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಖಡಕ್ ಮಾತು

ರಾಜಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಆಯ್ಕೆ ಬೆನ್ನಲ್ಲೇ ಕರ್ನಾಟಕ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಅದರಲ್ಲೂ ಮುಖ್ಯವಾಗಿ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ಇನ್ನು ಈ ಭಿನ್ನಮತದ ಬಗ್ಗೆ ನೂತನ ಅಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯಿಸಿ ಸ್ಪಷ್ಟನೆ ನೀಡಿದ್ದಾರೆ.

ಯತ್ನಾಳ್ ಅಸಮಾಧಾನದ ಬಗ್ಗೆ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಖಡಕ್ ಮಾತು
ಯತ್ನಾಳ್, ವಿಜಯೇಂದ್ರ
Follow us
| Edited By: ರಮೇಶ್ ಬಿ. ಜವಳಗೇರಾ

Updated on: Nov 19, 2023 | 1:07 PM

ಮಂಡ್ಯ, (ನವೆಂಬರ್ 19): ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ (Basangouda Patil Yatnal )ಸ್ವಪಕ್ಷದ ವಿರುದ್ಧವೇ ಅಸಮಾಧಾನಗೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಹಾಗೂ ವಿರೋಧ ಪಕ್ಷದ ನಾಯಕನನ್ನು ಬಿಎಸ್​ ಯಡಿಯೂರಪ್ಪ ಬಣದ ನಾಯಕರಿಗೆ ನೀಡಿದ್ದು, ಯತ್ನಾಳ್ ಆಕ್ರೋಶಕ್ಕೆ ಕಾರಣವಾಗಿದೆ. ಅದರಲ್ಲೂ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಕ್ಕೆ ಕೆಂಡಾಮಂಡಲರಾಗಿದ್ದಾರೆ. ಇನ್ನು ಯತ್ನಾಳ್ ಅಸಮಾಧಾನದ ಬಗ್ಗೆ ಖುದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ(Karnataka BJP President BY Vijayendra )ಪ್ರತಿಕ್ರಿಯಿಸಿದ್ದು, ಯತ್ನಾಳ್ ಹೇಳಿಕೆಯನ್ನ ತಪ್ಪಾಗಿ ಅರ್ಥೈಸಲಾಗುತ್ತಿದೆ. ಅವರ ಅಭಿಪ್ರಾಯವನ್ನ ಹೇಳಲು ಸ್ವತಂತ್ರರಿದ್ದಾರೆ. ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು, ಅವರವರ ಅಭಿಪ್ರಾಯಗಳು ಇರುತ್ತೆ. ಎಲ್ಲರ ಅಭಿಪ್ರಾಯದ ಮೇರೆಗೆ ಕೇಂದ್ರದ ವರಿಷ್ಠರು ತೀರ್ಮಾನ ಮಾಡಿದ್ದಾರೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಪರೋಕ್ಷವಾಗಿ ಯತ್ನಾಳ್​ಗೆ ಟಾಂಗ್ ಕೊಟ್ಟರು.

ಮಂಡ್ಯದ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಯತ್ನಾಳ್ ಜೀ ಕೆಲವು ನೋವಿನಿಂದ ಹೇಳಿದ್ದಾರೆ. ಕೆಲವು ಸಮಸ್ಯೆಗಳನ್ನ ಹೇಳಿಕೊಂಡಿರಬಹುದು. ಎಲ್ಲವನ್ನು ಹಿರಿಯರು ಕುಳಿತು ಸಮಾಲೋಚನೆ ಮಾಡಿ ಉತ್ತರ ಕಂಡುಕೊಳ್ಳುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: ‘ನ ದೈನ್ಯಂ, ನ ಪಲಾಯನಂ’: ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಗೈರು ಬೆನ್ನಲ್ಲೇ ಶಾಸಕ ಯತ್ನಾಳ್​ ಟ್ವೀಟ್​

ಇನ್ನು ಇದೇ ವೇಳೆ ವಿಪಕ್ಷ ನಾಯಕ ಆರ್ ಅಶೋಕ್ ಅಸಮರ್ಥರೆಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ್ದು, ಯಾರ ಸಾಮರ್ಥ್ಯ ಏನು ಎಂದು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜನರು ತೀರ್ಮಾನ ಮಾಡುತ್ತಾರೆ. ಅದನ್ನ ಆಡಳಿತ ಪಕ್ಷದವರು, ಬೇರೆ ಯಾರು ತೀರ್ಮಾನ ಮಾಡಲ್ಲ ಎಂದು ಹೇಳಿದ ವಿಜಯೇಂದ್ರ, ಎಲ್ಲರೈ ಸರಿಹೋಗಿದ್ದಾರೆ, ಸರಿಹೋಗುತ್ತಾರೆ ಎಂದರು.

ಕೆಆರ್‌ಪೇಟೆ ನಮ್ಮ ತಂದೆ ಹುಟ್ಟೂರು. ಈ ಕ್ಷೇತ್ರದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದೇವೆ. ಕಳೆದ ಬಾರಿ ಒಂದಷ್ಟು ವ್ಯತ್ಯಾಸ ಆಯ್ತು. ಕೇವಲ ಕೆಆರ್‌ಪೇಟೆ ಮಾತ್ರ ಅಲ್ಲ, ರಾಜ್ಯದಲ್ಲಿ ವ್ಯತ್ಯಾಸ ಆಯ್ತು. ನಮ್ಮ ಮುಂದಿನ ಗುರಿ ಎಂಪಿ ಚುನಾವಣೆ. ಕಳೆದ ಎಂಪಿ ಚುನಾವಣೆ ರೀತಿಯಲ್ಲಿ ಗೆಲುವು ಪಡೆಯುತ್ತೇವೆ. ಅಧಿಕ ಸೀಟ್‌ಗಳು ಮತ್ತೆ ರಾಜ್ಯದಲ್ಲಿ ಬಿಜೆಪಿ ಗೆಲ್ಲುತ್ತೆ. ಮುಂದಿನ ವಿಧಾನಸಭಾ ಚುನಾವಣೆ ಹೊತ್ತಿಗೆ ರಾಜ್ಯದಲ್ಲಿ ಮತ್ತಷ್ಟು ಸಂಘಟನೆ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮತ್ತೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತೆ. ಸೋಲೆ ಗೆಲುವಿನ ಸೋಪಾನ ಎಂದು ಹೇಳಲಾಗುತ್ತದೆ. ಆ ಚಾಲೆಂಜ್‌ನ್ನು ನಾವು ಸ್ವೀಕರಿಸಿ ಪಕ್ಷ ಕಟ್ಟುತ್ತೇವೆ. ತಂದೆಯವರ ಕಷ್ಟದ ದಿನಗಳನ್ನು ನಾನು ನೋಡಿದ್ದೇನೆ. ಅವರು ಎದುರಿಸಿದ ರೀತಿ ನಾನು ಕಂಡಿದ್ದೇನೆ. ಪಕ್ಷವನ್ನು ತಂದೆ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಮಾಡುತ್ತೇವೆ ಎಂದು ತಿಳಿಸಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಸಂಸಾರದಲ್ಲಿನ ಬಿರುಕಿಗೆ ಕಾರಣ ತಿಳಿಸಿದ ವರ್ತೂರು ಸಂತೋಷ್
ಸಂಸಾರದಲ್ಲಿನ ಬಿರುಕಿಗೆ ಕಾರಣ ತಿಳಿಸಿದ ವರ್ತೂರು ಸಂತೋಷ್
ನಾಲ್ಕನೇ ಟಿ20 ಪಂದ್ಯಕ್ಕಾಗಿ ರಾಯ್​ಪುರ ತಲುಪಿದ ಟೀಮ್ ಇಂಡಿಯಾ ಆಟಗಾರರು
ನಾಲ್ಕನೇ ಟಿ20 ಪಂದ್ಯಕ್ಕಾಗಿ ರಾಯ್​ಪುರ ತಲುಪಿದ ಟೀಮ್ ಇಂಡಿಯಾ ಆಟಗಾರರು
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜಗಳ ನೆನಪಿಸಿಕೊಂಡ ಗೆಳತಿ ಸಂಜನಾ ಗಲ್ರಾನಿ
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜಗಳ ನೆನಪಿಸಿಕೊಂಡ ಗೆಳತಿ ಸಂಜನಾ ಗಲ್ರಾನಿ
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜೋಕ್ ನೆನಪಿಸಿಕೊಂಡ ಯೋಗರಾಜ್ ಭಟ್
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜೋಕ್ ನೆನಪಿಸಿಕೊಂಡ ಯೋಗರಾಜ್ ಭಟ್
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​