ಕೇಶವಕೃಪಾಗೆ ಭೇಟಿ ನೀಡಿದ ಶಿಕಾರಿ ಪುತ್ರ, ಬೂತ್ ಕಾರ್ಯಕರ್ತಗೆ ಮಣೆ ಹಾಕಿದ ನೂತನ ಅಧ್ಯಕ್ಷ ವಿಜಯೇಂದ್ರ, ಸೋಮಣ್ಣ ಸೈಲೆಂಟ್​​ ಮೋಡ್​​ಗೆ – ಬಿಜೆಪಿ ಬೆಳವಣಿಗೆಗಳು ಏನು?

ಅತ್ತ ಯಡಿಯೂರಪ್ಪ ಫ್ಯಾಮಿಲಿ ಹೆಡ್​ ಆಫೀಸ್​​ ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲುಮುಟ್ಟಿದೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶಿಕಾರಿಪುತ್ರ, ಶಿಕಾರಿಪುರ ಎಂಎಲ್ಎ ಬಿ.ವೈ. ವಿಜಯೇಂದ್ರ ಆಯ್ಕೆ ಹಿನ್ನೆಲೆ ಕಾರ್ಯಕರ್ತರು ಫುಲ್​ ಖುಷಿಯಾಗಿದ್ದಾರೆ. ಶಿವಮೊಗ್ಗದ ವಿನೋಬನಗರದಲ್ಲಿರುವ ಯಡಿಯೂರಪ್ಪ ನಿವಾಸದ ಎದುರು ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲುಮುಟ್ಟಿದೆ. ವಿಜಯೇಂದ್ರ ಅವರ ತಮ್ಮ, ಸಂಸದ ರಾಘವೇಂದ್ರ ಅವರನ್ನು ಹೆಗಲ‌‌ ಮೇಲೆ ಹೊತ್ತು‌ ಕುಣಿದಾಡುತ್ತಾ, ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರುಗಳಿಗೆ ಜೈಕಾರ‌ ಹಾಕಿದ್ದಾರೆ.

ಕೇಶವಕೃಪಾಗೆ ಭೇಟಿ ನೀಡಿದ ಶಿಕಾರಿ ಪುತ್ರ, ಬೂತ್ ಕಾರ್ಯಕರ್ತಗೆ ಮಣೆ ಹಾಕಿದ ನೂತನ ಅಧ್ಯಕ್ಷ ವಿಜಯೇಂದ್ರ, ಸೋಮಣ್ಣ ಸೈಲೆಂಟ್​​ ಮೋಡ್​​ಗೆ - ಬಿಜೆಪಿ ಬೆಳವಣಿಗೆಗಳು ಏನು?
ಕೇಶವಕೃಪಾಗೆ ಭೇಟಿ ನೀಡಿದ ಶಿಕಾರಿ ಪುತ್ರ, ಬೂತ್ ಕಾರ್ಯಕರ್ತಗೆ ಮಣೆ ಹಾಕಿದ ನೂತನ ಅಧ್ಯಕ್ಷ ವಿಜಯೇಂದ್ರ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Nov 11, 2023 | 11:06 AM

ಬೆಂಗಳೂರು, ನವೆಂಬರ್​ 11: ಶಿಕಾರಿ ಪುತ್ರ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರು ನಿನ್ನೆಯಷ್ಟೇ ​ ಕರ್ನಾಟಕ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ರಾಜ್ಯ ಆರ್​ಎಸ್​​ಎಸ್ ಹೆಡ್​ ಆಫೀಸ್ ಕೇಶವಕೃಪಾಗೆ ಇಂದು ಬೆಳಗ್ಗೆ ಭೇಟಿ ನೀಡಿದರು. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಆರ್​ಎಸ್​​ಎಸ್​ ಕಚೇರಿಗೆ ತೆರಳಿದ ನಿಯೋಜಿತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹಿರಿಯ ಮುಖಂಡರ ಆಶೀರ್ವಾದ ಪಡೆದರು.

ಈ ಮಧ್ಯೆ, ಅಸೆಂಬ್ಲಿ ಚುನಾವಣೆ ಬಳಿಕ ಅನಿರೀಕ್ಷಿತ ಅಪಜಯದ ಹಿನ್ನೆಲೆಯಲ್ಲಿ ಪಕ್ಷದ ವಿರುದ್ಧ ಮುನಿಸಿಕೊಂಡಿರುವ ಪಕ್ಷದ ಹಿರಿಯ ನಾಯಕ ಮಾಜಿ ಸಚಿವ ವಿ. ಸೋಮಣ್ಣ ಅವರು ವಿಜಯೇಂದ್ರ ಆಯ್ಕೆ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡದೇ ಸದ್ಯಕ್ಕೆ ಸುಮ್ಮನಾಗಿದ್ದಾರೆ. ನಾನೇ ಸುದ್ದಿಗೋಷ್ಠಿ ಮಾಡ್ತೇನೆ ಎಂದೂ ಹೇಳಿ ತಮ್ಮ ಮುಂದಿನ ನಡೆಯೇನು ಎಂಬುದರ ಬಗ್ಗೆ ಸೋಮಣ್ಣ ಮುನ್ಸೂಚನೆ ನೀಡದಂತಿದೆ.

ಶಿಕಾರಿಪುರ ಕ್ಷೇತ್ರ ಪ್ರತಿನಿಧಿಸುವವರಿಗೆ 2ನೇ ಬಾರಿಗೆ BJP ರಾಜ್ಯಾಧ್ಯಕ್ಷ ಪಟ್ಟ -ಎಲ್ಲೆಡೆ ಸಂಭ್ರಮ:

ಇನ್ನು ಅತ್ತ ಯಡಿಯೂರಪ್ಪ ಫ್ಯಾಮಿಲಿ ಹೆಡ್​ ಆಫೀಸ್​​ ಆದ ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲುಮುಟ್ಟಿದೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶಿಕಾರಿಪುತ್ರ, ಶಿಕಾರಿಪುರ ಎಂಎಲ್ಎ ಬಿ.ವೈ. ವಿಜಯೇಂದ್ರ ಆಯ್ಕೆ ಹಿನ್ನೆಲೆ ಕಾರ್ಯಕರ್ತರು ಫುಲ್​ ಖುಷಿಯಾಗಿದ್ದಾರೆ. ಶಿವಮೊಗ್ಗದ ವಿನೋಬನಗರದಲ್ಲಿರುವ ಯಡಿಯೂರಪ್ಪ ನಿವಾಸದ ಎದುರು ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲುಮುಟ್ಟಿದೆ. ಪಟಾಕಿ‌ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ವಿಜಯೇಂದ್ರ ಅವರ ತಮ್ಮ, ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಹೆಗಲ‌‌ ಮೇಲೆ ಹೊತ್ತು‌ ಕುಣಿದಾಡುತ್ತಾ, ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರುಗಳಿಗೆ ಜೈಕಾರ‌ ಹಾಕಿದ್ದಾರೆ.

ಕಳೆಗಟ್ಟಿದ ಡಾಲರ್ಸ್ ಕಾಲನಿಯ ಧವಳಗಿರಿ ನಿವಾಸ: ಮುಖಂಡರ ದೌಡು:

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ಹಿನ್ನೆಲೆ ಬೆಂಗಳೂರಿನ ಡಾಲರ್ಸ್ ಕಾಲನಿಯಲ್ಲಿರುವ ಬಿ.ಎಸ್​. ಯಡಿಯೂರಪ್ಪ ಅವರ ನಿವಾಸ ಧವಳಗಿರಿಗೆ ದಾವಣಗೆರೆ ಸಂಸದ ಜಿಎಂ ಸಿದ್ದೇಶ್ವರ್, ನಿರಾಣಿ ಮುಂತಾದ ಹಿರಿಯ ನಾಯಕರು ಆಗಮಿಸಿ, ಅಭಿನಂದನೆಗಳನ್ನು ಸಲ್ಲಿಸುತ್ತಿದ್ದಾರೆ. ಕಾರ್ಯಕರ್ತರೂ ಕೂಡ ಜಮಾಯಿಸಿದ್ದಾರೆ.

ಇನ್ನು ಯಡಿಯೂರಪ್ಪ ಹುಟ್ಟೂರಾದ ಬೂಕನಕೆರೆಯ ಮಂಡ್ಯ ಜಿಲ್ಲೆಯಲ್ಲೂ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಶಾಸಕ ಬಿ ವೈ ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಕಟ್ಟಿರುವ ಹಿನ್ನೆಲೆಯಲ್ಲಿ ಅವರ ಭಾವಚಿತ್ರಕ್ಕೆ ಈಡುಗಾಯಿ ಹೊಡೆದು, ಹಾಲಿನ ಅಭಿಷೇಕ ಮಾಡಿ, ಸಿಹಿ ಹಂಚಿ ಸಂತಸಗೊಂಡಿದ್ದಾರೆ. ಮಂಡ್ಯದ ಸಂಜಯ್ ಸರ್ಕಲ್ ನಲ್ಲಿ ವಿಜಯೇಂದ್ರ ಪರ ಘೋಷಣೆ ಕೂಗಿ ಸಂಭ್ರಮಿಸುತ್ತಿದ್ದಾರೆ.

ಬೂತ್ ಕಾರ್ಯಕರ್ತಗೆ ಮಣೆ ಹಾಕಿದ ನೂತನ ಅಧ್ಯಕ್ಷ ವಿಜಯೇಂದ್ರ:

ಇನ್ನು ಮಹತ್ವದ ಬೆಳವಣಿಗೆಯೊಂದರಲ್ಲಿ ಬೂತ್ ಕಾರ್ಯಕರ್ತರನ್ನು ಹುರಿದುಂಬಿಸಲು ಬೆಂಗಳೂರು ಗಾಂಧಿನಗರ ಕ್ಷೇತ್ರದ ಬೂತ್ ನಂ. 23ರ ಅಧ್ಯಕ್ಷ ಶಶಿಧರ್ ಮನೆಗೆ ತೆರಳಿದ ವಿಜಯೇಂದ್ರ ಅವರು ಶಶಿಧರ್​ಗೆ ಸಿಹಿ ತಿನ್ನಿಸಿ ಸಂತಸಪಟ್ಟರು.

ರಾಜ್ಯಾಧ್ಯಕ್ಷ ನೇಮಕಕ್ಕೆ ಅಸಮಾಧಾನ ಹೊಗೆ: ಸಂಸದ ಮೋಹನ್ ಷರಾ ಹೀಗಿದೆ:

ಈ ಮಧ್ಯೆ, ಹಿರಿಯ ನಾಯಕ ಯಡಿಯೂರಪ್ಪ ಜೊತೆ ಅಖಂಡವಾಗಿ ಗುರುತಿಸಿಕೊಂಡಿರುವ ಸಂಸದ ಪಿ.ಸಿ. ಮೋಹನ್ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕ ಹಿನ್ನೆಲೆ ಪಕ್ಷದ ಹಿರಿಯ ನಾಯಕರಲ್ಲಿ ಅಸಮಾಧಾನ ಹೊಗೆ ಎದ್ದೇಳುವ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ್ದಾರೆ. ವಿಜಯೇಂದ್ರ‌ ಪಕ್ಷದಲ್ಲಿ ಸುಮಾರು ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆ ಅವರ ನೇತೃತ್ವದಲ್ಲಿ ನಡೆಯಲಿದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆಲವರು ಆಸೆಪಟ್ಟಿದ್ದು ಸಹಜ. ಹಾಗಂತ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ. ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಶಕ್ತಿ ವಿಜಯೇಂದ್ರ‌ಗಿದೆ ಎಂದು ಷರಾ ಬರೆದಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ