ಕರ್ನಾಟಕದಲ್ಲಿ ಕಾವೇರಿ ನೀರಿನ ಕಿಚ್ಚು, ಮಂಡ್ಯದಲ್ಲಿ ಇಂದು ಬಿಜೆಪಿಯಿಂದ ಬೃಹತ್ ಪ್ರತಿಭಟನೆ

ಕಾವೇರಿ ನದಿ ನೀರು ಬಿಡುಗಡೆ ಆಗ್ರಹಿಸಿ ತಮಿಳುನಾಡು ಸುಪ್ರೀಂ ಮೆಟ್ಟಿಲೇರಿದೆ. ರಾಜ್ಯದ ವಸ್ತುಸ್ಥಿತಿ ವಿವರಿಸಲು ರಾಜ್ಯ ಸರ್ಕಾರವೂ ಇಂದು ಮೇಲ್ಮನವಿ ಸಲ್ಲಿಸಲಿದೆ. ಇತ್ತ ಕೆ ಆರ್ ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಡುಗಡೆ ವಿಚಾರ ರಾಜಕೀಯ ತಿರುವು ಪಡೆದುಕೊಂಡಿದ್ದು, ರಾಜ್ಯ ಸರ್ಕಾರದ ವಿರುದ್ಧ ಮುಗಿಬೀಳಲು ಬಿಜೆಪಿ ರಣಕಹಳೆ‌ ಮೊಳಗಿಸಿದೆ. ನೀರು ಬಿಡುಗಡೆಗೆ ವಿರೋಧಿಸಿ ಬಿಜೆಪಿ ಪ್ರತಿಭಟನೆಗೆ ಪ್ಲ್ಯಾನ್ ಮಾಡಿಕೊಂಡಿದೆ. ಹಾಗಿದ್ರೆ, ಇಂದು ಕಾವೇರಿ ಕಿಚ್ಚು ಹೇಗಿರಲಿದೆ ಎನ್ನುವ ವಿವರ ಇಲ್ಲಿದೆ.

ಕರ್ನಾಟಕದಲ್ಲಿ ಕಾವೇರಿ ನೀರಿನ ಕಿಚ್ಚು, ಮಂಡ್ಯದಲ್ಲಿ ಇಂದು ಬಿಜೆಪಿಯಿಂದ ಬೃಹತ್ ಪ್ರತಿಭಟನೆ
ಬಿಜೆಪಿ
Follow us
ಪ್ರಶಾಂತ್​ ಬಿ.
| Updated By: ರಮೇಶ್ ಬಿ. ಜವಳಗೇರಾ

Updated on: Aug 21, 2023 | 7:36 AM

ಬೆಂಗಳೂರು, (ಆಗಸ್ಟ್ 21): ಕರ್ನಾಟಕದಲ್ಲಿ ಕಾವೇರಿ ನೀರಿನ (Cauvery Water )ಕಿಚ್ಚು ಧಗಧಗಿಸುತ್ತಿದೆ. ಇದಕ್ಕೆಲ್ಲ ಕಾರಣ ತಮಿಳುನಾಡು(Tamil Nadu )ಸರ್ಕಾರ ನಿಲುವು. ಹೌದು ಕಳೆದ ಆಗಸ್ಟ್​​​​​ 14 ರಂದು ಸುಪ್ರೀಂಕೋರ್ಟ್​​ ಮೆಟ್ಟಿಲೇರಿದ್ದ ತಮಿಳುನಾಡು, ಹಾಲಿ ಇರೋ ಬೆಳೆಗಳ ರಕ್ಷಣೆಗಾಗಿ ನಿತ್ಯ 24 ಸಾವಿರ ಕ್ಯುಸೆಕ್​​​​​​​​ ಕಾವೇರಿ ನದಿ ನೀರು ಹರಿಸುವಂತೆ ಕರ್ನಾಟಕ ಸರ್ಕಾರ ನಿರ್ದೇಶನ ನೀಡಬೇಕು ಎಂದು ಮನವಿ ಸಲ್ಲಿಸಿತ್ತು. ಸುಪ್ರೀಂ ಸೂಚನೆಯಂತೆ ಕೆಆರ್​​ಎಸ್​​​​ ಡ್ಯಾಂನಿಂದ ನೀರನ್ನ ಹರಿಬಿಡಲಾಗಿತ್ತು. ಇದು ಇದೀಗ ರಾಜ್ಯದಲ್ಲಿ ಕಿಚ್ಚು ಹಚ್ಚಿದೆ. ಮೊನ್ನೆ ಮಂಡ್ಯದಲ್ಲಿ ಸಭೆ ಸೇರಿದ್ದ ಬಿಜೆಪಿ ನಾಯಕರು ಪ್ರತಿಭಟನೆಗೆ ಕರೆ ನೀಡಿದ್ದರು. ಅದರಂತೆ ಇಂದು(ಆಗಸ್ಟ್ 21) ಬೆಳಗ್ಗೆ 11 ಗಂಟೆಗೆ ಮಂಡ್ಯದ ಇಂಡುವಾಳು ಬಳಿ ರಾಷ್ಟ್ರೀಯ ಹೆದ್ದಾರಿ ತಡೆಗೆ ನಿರ್ಧರಿಸಿದ್ದಾರೆ. ಆದ್ರೆ, ಹೆದ್ದಾರಿ ತಡೆಗೆ ಪೊಲೀಸರು ಅನುಮತಿ ಕೊಟ್ಟಿಲ್ಲ. ಹೀಗಾಗಿ ಇಂಡುವಾಳು ಬದಲು ಸಂಜಯ್ ವೃತ್ತಕ್ಕೆ ಬಿಜೆಪಿ ಪ್ರತಿಭಟನೆ ಶಿಫ್ಟ್ ಆಗಿದೆ. ಈ ನಡುವೆ ಬಿಜೆಪಿ ಸಂಸದ ಪ್ರತಾಪ್ ಸಿಂಹ, ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಮಾಡಲ್ಲ. ಹೆದ್ದಾರಿ ಬಂದ್ ಮಾಡುವುದು ತಪ್ಪಾಗುತ್ತೆ ಎಂದು ಟ್ವೀಟ್ ಮಾಡಿದ್ದಾರೆ.

ನಿನ್ನೆಯೂ ಕನ್ನಡ ಪರ ಸಂಘಟನೆಗಳು ಪ್ರತಿಭಟನೆಯನ್ನ ಮಾಡಿವೆ. ಮೈಸೂರಿನ ಜಯಚಾಮರಾಜೇಂದ್ರ ವೃತ್ತದಲ್ಲಿ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದ್ರು. ಇತ್ತ ರಾಮನಗರದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಪ್ರತಿಭಟನೆ ನಡೆಸಿತ್ತು. ಐಜೂರು ಸರ್ಕಲ್​ನಲ್ಲಿ ಸರ್ಕಾರ ಹಾಗೂ ಮಂಡ್ಯ ಜನಪ್ರತಿನಿಧಿಗಳ ವಿರುದ್ಧ ಧಿಕ್ಕಾರ ಕೂಗಿದ್ರು. ಇಷ್ಟೆಲ್ಲ ಬೆಳವಣಿಗೆ ಇಂದು ಮಂಡ್ಯದಲ್ಲಿ ಕಾವೇರಿ ಕಹಳೆ ಮೊಳಗೋದು ಪಕ್ಕಾ ಆಗಿದೆ.

ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರವಾಗಿ ಬಿಜೆಪಿ ಪ್ರತಿಭಟನೆ: ಸಚಿವ ಚಲುವರಾಯಸ್ವಾಮಿ ಹೇಳಿದ್ದಿಷ್ಟು

ಪ್ರತಿಭಟನೆಯಲ್ಲಿ ಮಾಜಿ ಸಿಎಂ ಡಿವಿ ಸದಾನಂದಗೌಡ, ಸಂಸದ ತೇಜಸ್ವಿ ಸೂರ್ಯ, ಪಿಸಿ ಮೋಹನ್, ಅಶ್ವಥ್ ನಾರಾಯಣ್ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ. ಇನ್ನು ಬಿಜೆಪಿ ಪ್ರತಿಭಟನೆಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕೂಡ ಪ್ರತಿಭಟನೆಗೆ ಸಾಥ್ ನೀಡಲಿದ್ದಾರೆ.

ತಮಿಳುನಾಡಿನ ಜೊತೆಗೆ ರಾಜಕೀಯ ಹೊಂದಾಣಿಕೆ ಮಾಡಿಕೊಂಡು ಕಾವೇರಿ ನೀರು ಬಿಡುಗಡೆ ಮಾಡಲಾಗುತ್ತಿದೆ. ರಾಜ್ಯದ ರೈತರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಪ್ರತಿಭಟನೆಗೆ ಮುಂದಾಗಿದೆ. ಮಂಡ್ಯ ಸೇರಿದಂತೆ ಹಳೇ ಮೈಸೂರು ಭಾಗದಲ್ಲಿ ಸೋತು ಸುಣ್ಣವಾಗಿರುವ ಬಿಜೆಪಿ ಇದೀಗ ಕಾವೇರಿ ನದಿ ನೀರನ್ನು ಲೋಕಸಭಾ ಚುನಾವಣೆಗೆ ರಾಜಕೀಯ ಅಸ್ತ್ರವನ್ನಾಗಿ ಮಾಡಿಕೊಳ್ಳು ಪ್ಲ್ಯಾನ್ ಮಾಡಿದೆ.

ಇನ್ನಷ್ಟು ಮಂಡ್ಯ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್