Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯನ್ನು ಬಿಎಸ್​ವೈ ಕುಟುಂಬಕ್ಕೆ ರಿಜಿಸ್ಟರ್ ಮಾಡಿದ್ದಾರೆ: ಪರೋಕ್ಷವಾಗಿ ಹೈಕಮಾಂಡ್ ವಿರುದ್ಧ ಗುಡುಗಿದ ಯತ್ನಾಳ್​

ಇಲ್ಲಿಯವರೆಗೆ ಯಡಿಯೂರಪ್ಪ, ಅವರ ಕುಟುಂಬ ಹಾಗೂ ಬಣದ ವಿರುದ್ಧ ಮಾತನಾಡುತ್ತಲೇ ಬಂದಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಇದೇ ಮೊದಲ ಬಾರಿಗೆ ಪರೋಕ್ಷವಾಗಿ ಹೈಕಮಾಂಡ್​ ವಿರುದ್ಧ ಬಹಿರಂಗವಾಗಿಯೇ ಗುಡುಗಿದ್ದಾರೆ. ಯಡಿಯೂರಪ್ಪ ಹಾಗೂ ಅವರ ಕುಟುಂಬಕ್ಕೆ ಬೆಂಗಳೂರಿನ ಸಬ್ ರೆಜಿಸ್ಟಾರ್ ಕಚೇರಿಯಲ್ಲಿ ನೋಂದಣಿ ಮಾಡಿದ್ದಾರೆ ಎಂದು ಹೇಳುವ ಮೂಲಕ ಹೈಕಮಾಂಡ್ ನಡೆಯನ್ನು ಪ್ರಶ್ನಿಸಿದ್ದಾರೆ.​

ಬಿಜೆಪಿಯನ್ನು ಬಿಎಸ್​ವೈ ಕುಟುಂಬಕ್ಕೆ ರಿಜಿಸ್ಟರ್ ಮಾಡಿದ್ದಾರೆ: ಪರೋಕ್ಷವಾಗಿ ಹೈಕಮಾಂಡ್ ವಿರುದ್ಧ ಗುಡುಗಿದ ಯತ್ನಾಳ್​
ಬಸನಗೌಡ ಪಾಟೀಲ್ ಯತ್ನಾಳ್
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: ರಮೇಶ್ ಬಿ. ಜವಳಗೇರಾ

Updated on: Dec 26, 2023 | 5:25 PM

ವಿಜಯಪುರ, (ಡಿಸೆಂಬರ್ 26): ಕೊರೊನಾ ವೇಳೆ ಯಡಿಯೂರಪ್ಪ (BS Yediyurappa) ಸರ್ಕಾರದಲ್ಲಿ 40 ಸಾವಿರ ಕೋಟಿ ರೂ. ಅವ್ಯವಹಾರವಾಗಿದೆ ಎಂದು ಗಂಭೀರ ಆರೋಪ ಮಾಡಿರುವ ಬಸನಗೌಡ ಪಾಟೀಲ್ ಯತ್ನಾಳ್(Basangouda Patil Yatnal), ಯಡಿಯೂರಪ್ಪ ವಿರುದ್ಧ ಮತ್ತೆ ವಾಗ್ದಾಳಿ ಮುಂದುವರೆಸಿದ್ದಾರೆ. ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಕರ್ನಾಟಕ ಬಿಜೆಪಿಯನ್ನು ಯಡಿಯೂರಪ್ಪಗೆ ಕೊಟ್ಟಿದ್ದಾರೆ. ಪಕ್ಷವನ್ನ ಯಡಿಯೂರಪ್ಪ ಕುಟುಂಬಕ್ಕೆ ರಿಜಿಸ್ಟರ್ ಮಾಡಿದ್ದಾರೆ. ಬೆಂಗಳೂರಿನ ಕಚೇರಿಯಲ್ಲಿ ರಿಜಿಸ್ಟ್ರಾರ್ ಮಾಡಿಸಿದ್ದಾರೆ ಎಂದು ಪರೋಕ್ಷವಾಗಿ ಹೈಕಮಾಂಡ್​ ವಿರುದ್ಧ ಕಿಡಿಕಾರಿದ್ದಾರೆ.

ಆಧಿವೇಶನದಲ್ಲಿ ಬಿಜೆಪಿ ಗಮನ ಸೆಳೆಯಲಿಲ್ಲ. ಇದು ಅಡ್ಜಸ್ಟ್​ಮೆಂಟ್ ಪಾಲಿಟಿಕ್ಸ್​​. ಎಲ್ಲವೂ ಹೊಂದಾಣಿಕೆ, ಚುನಾವಣೆಯಲ್ಲೂ ಹೊಂದಾಣಿಕೆ, ಆ ಜೋಡೆತ್ತುಗಳು ಈ ಜೋಡೆತ್ತುಗಳಿಗೆ ಹೇಳಿವೆ. ನೀ ಒಂದು ತೆಗೆದ್ರೆ ನಿಮ್ಮವು ನೂರು ತೆಗೆಯುತ್ತೇವೆಂದಿದ್ದಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಗಂಭೀರ ಆರೋಪ ಮಾಡಿದರು.

ಇದನ್ನೂ ಓದಿ: ಕೊರೊನಾ ವೇಳೆ ಯಡಿಯೂರಪ್ಪ ಸರ್ಕಾರದಲ್ಲಿ 40 ಸಾವಿರ ಕೋಟಿ ರೂ. ಅವ್ಯವಹಾರ: ಯತ್ನಾಳ್​ ಆರೋಪ

ಪದೇ ಪದೇ ಯಡಿಯೂರಪ್ಪ ಕುಟುಂಬ ವಿರುದ್ಧ ವಾಗ್ದಾಳಿ ನಡೆಸಿಕೊಂಡು ಬರುತ್ತಿರುವ ಯತ್ನಾಳ್ ಈ ಬಾರಿ ಹೈಕಮಾಂಡ್​ ವಿರುದ್ಧ ಗುಡುಗಿದ್ದಾರೆ. ಕರ್ನಾಟಕ ಬಿಜೆಪಿಯನ್ನು ಯಡಿಯೂರಪ್ಪಗೆ ಕೊಟ್ಟಿದ್ದಾರೆ. ಯಡಿಯೂರಪ್ಪ ಹಾಗೂ ಅವರ ಕುಟುಂಬಕ್ಕೆ ಬೆಂಗಳೂರಿನ ಸಬ್ ರೆಜಿಸ್ಟಾರ್ ಕಚೇರಿಯಲ್ಲಿ ನೋಂದಣಿ ಮಾಡಿದ್ದಾರೆ ಎಂದು ಹೇಳುವ ಮೂಲಕ ಇದೇ ಮೊದಲ ಹೈಕಮಾಂಡ್​ ನಿರ್ಧಾರಗಳ ಬಗ್ಗೆ ಧ್ವನಿ ಎತ್ತಿದ್ದಾರೆ.

ಈ ಹಿಂದೆ ನಳೀನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷರಾದ ಸಂದರಭದಲ್ಲೂ ಸಹ ಯತ್ನಾಳ್ ಯಡಿಯೂರಪ್ಪ ಹಾಗೂ ಅವರ ಬಣ ವಿರುದ್ಧ ಗುಡುಗಿದ್ದರು. ಇದೀಗ ಬಿಎಸ್​ವೈ ಪುತ್ರ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ ಬೆನ್ನಲ್ಲೇ ಯತ್ನಾಳ್ ಮತ್ತ ಮಾತಿನ ವರಸೆ ಮತ್ತಷ್ಟು ಹೆಚ್ಚು ಮಾಡಿದ್ದಾರೆ. ಯಡಿಯೂರಪ್ಪ ವಿರುದ್ಧ ಪದೇ ಪದೇ ಬಹಿರಂಗ ಹೇಳಿಕೆಗಳನ್ನು ನೀಡುತ್ತಲ್ಲೇ ಇದ್ದಾರೆ. ಆದ್ರೆ, ಇದುವರೆಗೂ ಹೈಕಮಾಂಡ್ ನೋಟಿಸ್ ಜಾರಿ ಮಾಡದಿರುವುದು ಅಚ್ಚರಿಗೆ ಕಾರಣವಾಗಿದೆ.

ಇಲ್ಲಿವರೆಗೆ ಯಡಿಯೂರಪ್ಪ ಹಾಗೂ ಅವರ ಬಣದ ವಿರುದ್ಧ ಬಹಿರಂಗವಾಗಿಯೇ ಹೇಳಿಕೆಯನ್ನು ನೀಡುತ್ತಿದ್ದ ಯತ್ನಾಳ್, ಇದೇ ಮೊದಲ ಬಾರಿಗೆ ಹೈಕಮಾಂಡ್​ ಬಗ್ಗೆ ಧ್ವನಿ ಎತ್ತಿದ್ದು, ಸಂಚಲನ ಮೂಡಿಸಿದೆ. ಮತ್ತೊಂದೆಡೆ ಯತ್ನಾಳ್​​ ಬಾಯಿಗೆ ಬೀಗ ಹಾಕಬೇಕೆಂದು ಯಡಿಯೂರಪ್ಪ ಅಭಿಮಾನಿಗಳು ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆಗಳಿದಿದ್ದಾರೆ. ಹೀಗಾಗಿ ಹೈಕಮಾಂಡ್​ ಈಗಲಾದರೂ ಯತ್ನಾಳ್​ಗೆ ಶೋಕಾಸ್ ನೋಟಿಸ್ ನೀಡುತ್ತಾ ಎನ್ನುವುದನ್ನು ಕಾದುನೋಡಬೇಕಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅತಿಯಾದ ಮಾತೇ ಯತ್ನಾಳ್ ಪಾಲಿಗೆ ಕುತ್ತಾಯಿತು: ವಿಜಯಾನಂದ್ ಕಾಶಪ್ಪನವರ್
ಅತಿಯಾದ ಮಾತೇ ಯತ್ನಾಳ್ ಪಾಲಿಗೆ ಕುತ್ತಾಯಿತು: ವಿಜಯಾನಂದ್ ಕಾಶಪ್ಪನವರ್
ಲಿಂಗಾಯತರು ಬಿಜೆಪಿನ ಪುನಃ ಅಧಿಕಾರಕ್ಕೆ ತರಬೇಕೆಂದುಕೊಂಡಿದ್ದರು: ಸ್ವಾಮೀಜಿ
ಲಿಂಗಾಯತರು ಬಿಜೆಪಿನ ಪುನಃ ಅಧಿಕಾರಕ್ಕೆ ತರಬೇಕೆಂದುಕೊಂಡಿದ್ದರು: ಸ್ವಾಮೀಜಿ
ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು