ಬೆಂಗಳೂರು, ಜನವರಿ 17: ಅಯೋಧ್ಯೆಯ (Ayodhya) ರಾಮಮಂದಿರದಲ್ಲಿ (Ram Mandir) ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಗೆ ದಿನಗಣನೆ ಆರಂಭವಾಗಿದೆ. ಅಯೋಧ್ಯೆಯಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದ ಮೂಲಕ ಬಿಜೆಪಿಯವರು ರಾಜಕೀಯ ಲಾಭ ಪಡೆದುಕೊಳ್ಳುತ್ತಿದ್ದಾರೆ. ಹೀಗಾಗಿ ಬಿಜೆಪಿಯ ಕಾರ್ಯಕ್ರಮವಾಗಿದೆ. ಹೀಗಾಗಿ ನಾವು ಈ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಕಾಂಗ್ರೆಸ್ ನಾಯಕರು ಘೋಷಿಸಿದ್ದಾರೆ. ಇನ್ನು ಈ ಕಾರ್ಯಕ್ರಮವನ್ನು ವಿರೋಧಿಸುವ ಭರದಲ್ಲಿ ಕಾಂಗ್ರೆಸ್ ನಾಯಕರು ವಿವಾದತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ನಿನ್ನೆ (ಜ.16) ರಂದು ಸಚಿವ ಕೆನ್ ರಾಜಣ್ಣ (KN Rajanna) ವಿವಾದಾತ್ಮ ಹೇಳಿಕೆ ನೀಡಿದ್ದರು.
ಅದು “ಬಾಬ್ರಿ ಮಸೀದಿ ಕೆಡವಿದ ನಂತರ ಅಯೋಧ್ಯೆಗೆ ಹೋಗಿದೆ. ಅಲ್ಲಿ ಗುಡಿಯೊಂದರಲ್ಲಿ ಎರಡು ಗೊಂಬೆಗಳನ್ನು ಇಟ್ಟು ರಾಮ ರಾಮ ಎನ್ನುತ್ತಿದ್ದರು” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಘಟನೆ ಸರಣಿ ಟ್ವೀಟ್ ಮಾಡಿ ಸಚಿವರ ವಿರುದ್ಧ ವಾಗ್ದಾಳಿ ಮಾಡಿದೆ.
ಇದನ್ನೂ ಓದಿ: ನಾನೇ ಲಕ್ಷ್ಮಣ, ಅಯೋಧ್ಯೆಗೆ ಈಗ ಹೋಗಲ್ಲ: ಲಕ್ಷ್ಮಣ ಸವದಿ
“ಶ್ರೀರಾಮನ ಶಕ್ತಿ, ಹನುಮನ ಭಕ್ತಿಯ ಕೆಣಕಿದ ರಾವಣನೇ ಉಳಿಯಲಿಲ್ಲ, ರಾಜಣ್ಣ ಯಾವ ಲೆಕ್ಕ?ಹಿಂದೂ ಧರ್ಮವನ್ನು ಅವಹೇಳನ ಮಾಡುವುದು, ಹಿಂದೂ ಭಾವನೆಗಳಿಗೆ ಧಕ್ಕೆ ಉಂಟುಮಾಡುವುದು ಕಾಂಗ್ರೆಸ್ ಪಕ್ಷಕ್ಕೆ ಅಂಟಿದ ಕುಷ್ಠ ರೋಗವಿದ್ದಂತೆ” ಎಂದು ಬಿಜೆಪಿ ಹ್ಯಾಷ್ಟ್ಯಾಗ್ ರಾಮ ವಿರೋಧಿ ಕಾಂಗ್ರೆಸ್ ಅಂತ ಟ್ವೀಟ್ ಮಾಡಿದೆ.
ಶ್ರೀರಾಮನ ಶಕ್ತಿ, ಹನುಮನ ಭಕ್ತಿಯ ಕೆಣಕಿದ ರಾವಣನೇ ಉಳಿಯಲಿಲ್ಲ, ರಾಜಣ್ಣ ಯಾವ ಲೆಕ್ಕ?
ಹಿಂದೂ ಧರ್ಮವನ್ನು ಅವಹೇಳನ ಮಾಡುವುದು, ಹಿಂದೂ ಭಾವನೆಗಳಿಗೆ ಧಕ್ಕೆ ಉಂಟುಮಾಡುವುದು @INCIndia ಪಕ್ಷಕ್ಕೆ ಅಂಟಿದ ಕುಷ್ಠ ರೋಗವಿದ್ದಂತೆ. ಶತ ಶತಮಾನಗಳ ಕೋಟ್ಯಂತರ ರಾಮಭಕ್ತರ ಹೋರಾಟ, ಸಹಸ್ರಾರು ಕರಸೇವಕರ ಬಲಿದಾನಗಳಿಂದ ಭವ್ಯ ರಾಮಮಂದಿರದಲ್ಲಿ ಬಾಲರಾಮ… pic.twitter.com/tlTMcQDD3y
— BJP Karnataka (@BJP4Karnataka) January 17, 2024
ಮುಂದುವರೆದು “ಶತ ಶತಮಾನಗಳ ಕೋಟ್ಯಂತರ ರಾಮಭಕ್ತರ ಹೋರಾಟ, ಸಹಸ್ರಾರು ಕರಸೇವಕರ ಬಲಿದಾನಗಳಿಂದ ಭವ್ಯ ರಾಮಮಂದಿರದಲ್ಲಿ ಬಾಲರಾಮ ನೆಲೆಸುತ್ತಿರುವ ಸಮಯದಲ್ಲಿ, ಶ್ರೀರಾಮ ಸೀತೆಯರನ್ನು ಗೊಂಬೆಗೆ ಹೋಲಿಸುತ್ತಿರುವ ಸಹಕಾರ ಸಚಿವ ರಾಜಣ್ಣರವರೇ, ನಾಡಿನ ಜನರಷ್ಟೇ ಅಲ್ಲ, ನಿಮ್ಮನ್ನು ಕಾಂಗ್ರೆಸ್ ಕಾರ್ಯಕರ್ತರೂ ಕ್ಷಮಿಸಲಾರರು. ಅಧಿಕಾರದ ಮದ, ಕಾಂಗ್ರೆಸ್ ಗುಲಾಮಿತನದಿಂದ ಹೊರಬಂದು, ನಿಮ್ಮ ಕ್ಷೇತ್ರದ ಮತದಾರರನ್ನಾದರೂ ಕೇಳಿ, ನಿಮ್ಮ ಕುಟುಂಬಸ್ಥರನ್ನಾದರೂ ಕೇಳಿ ತಿಳಿಯಿರಿ” ಎಂದು ಕಿವಿ ಹಿಂಡಿದೆ.
ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ