ಬಿಜೆಪಿ-ಜೆಡಿಎಸ್ ಒಂದಾಗಿ ಕಾಂಗ್ರೆಸ್​ ಸೊಕ್ಕು ಮುರಿಯುತ್ತೇವೆ: ವಿಜಯೇಂದ್ರ

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕರ್ನಾಟಕದಲ್ಲಿ 19 ಕ್ಷೇತ್ರಗಳಲ್ಲಿ ಗೆಲುವು ಸಾಧಿವೆ. ಕರ್ನಾಟಕದಿಂದ ನೂತನವಾಗಿ ಆಯ್ಕೆಯಾದ ಮತ್ತು ಕೇಂದ್ರ ಸಚಿವರಾದ ರಾಜ್ಯ ಸಂಸದರಿಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿನಂದನಾ ಕಾರ್ಯಕ್ರಮ ನೆರವೇರಿತು. ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿದರು.

ಬಿಜೆಪಿ-ಜೆಡಿಎಸ್ ಒಂದಾಗಿ ಕಾಂಗ್ರೆಸ್​ ಸೊಕ್ಕು ಮುರಿಯುತ್ತೇವೆ: ವಿಜಯೇಂದ್ರ
ಶಾಸಕ ಬಿವೈ ವಿಜಯೇಂದ್ರ
Follow us
| Updated By: ವಿವೇಕ ಬಿರಾದಾರ

Updated on: Jun 22, 2024 | 2:43 PM

ಬೆಂಗಳೂರು, ಜೂನ್​ 22: ಮುಂದಿನ ದಿನಗಳು ಹೋರಾಟದ ದಿನಗಳು. ಅಧಿವೇಶನದ ಬಳಿಕ ರಾಜ್ಯವ್ಯಾಪಿ ಪ್ರವಾಸ ಮಾಡಿ ಸಂಘಟನೆಗೆ ಶಕ್ತಿ ತುಂಬುತ್ತೇವೆ. ಬಿಜೆಪಿ-ಜೆಡಿಎಸ್ ಒಂದಾಗಿ ಆಡಳಿತ ಪಕ್ಷದ ಸೊಕ್ಕು ಮುರಿಯುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಹೇಳಿದರು. ರಾಜ್ಯದಿಂದ ಆಯ್ಕೆಯಾದ ನೂತನ ಬಿಜೆಪಿ ಹಾಗೂ ಜೆಡಿಎಸ್ ಸಂಸದರಿಗೆ ಮತ್ತು ಕೇಂದ್ರ ಸಚಿವರಿಗೆ ಅರಮನೆ ಮೈದಾನದಲ್ಲಿ ಅಭಿನಂದನಾ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಬಿವೈ ವಿಜಯೇಂದ್ರ ಲೋಕಸಭೆ ಚುನಾವಣೆಯಲ್ಲಿ ಜನರು ಕಾಂಗ್ರೆಸ್​​​ಗೆ (Congress) ತಕ್ಕ ಪಾಠ ಕಲಿಸಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷದ ಆಮಿಷದ ನಡುವೆಯೂ ಜನ ಬಿಜೆಪಿ-ಜೆಡಿಎಸ್​ಗೆ ಆಶೀರ್ವಾದ ಮಾಡಿದ್ದಾರೆ. ಕಾಂಗ್ರೆಸ್ ಗೂಬೆ ಕೂರಿಸುತ್ತಿದ್ದರೂ ಅದನ್ನು ಧಿಕ್ಕರಿಸಿ ಜನ ಆಶೀರ್ವಾದ ಮಾಡಿದ್ದಾರೆ. 9 ಕ್ಷೇತ್ರಗಳಲ್ಲಿ ಗೆದ್ದು ಕಾಂಗ್ರೆಸ್ ತನ್ನ ಬೆನ್ನನ್ನು ತಾನೇ ತಟ್ಟಿಕೊಳ್ಳುತ್ತಿದೆ. ಸಚಿವರು ಇರುವ ಕ್ಷೇತ್ರಗಳಲ್ಲಿ ಕೂಡ ಎನ್​ಡಿಎ ಲೀಡ್ ಪಡೆದುಕೊಂಡಿದೆ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ದುರಾಡಳಿತದ ವಿರುದ್ಧ ನಾವು ಹೋರಾಟ ಮಾಡಬೇಕಾಗಿದೆ. ಕಾಂಗ್ರೆಸ್ ದುರಾಡಳಿತದಿಂದ ಕರ್ನಾಟಕ ಎಲ್ಲ ವಿಧಗಳಲ್ಲೂ ಹಿಂದೆ ಸರಿದಿದೆ. ಬೋರ್ಡ್ ಅಧ್ಯಕ್ಷರು ಅನುದಾನಕ್ಕೆ ಕಾಯುತ್ತಿರುವ ರೀತಿ ಸಿಎಂ ವರ್ತಿಸುತ್ತಿದ್ದಾರೆ. ಮುಂದಿನ ದಿನಗಳು ಹೋರಾಟದ ದಿನಗಳು. ಜಿಲ್ಲಾ ಪಂಚಾಯತ್​, ತಾಲೂಕು ಪಂಚಾಯತ್​ ಚುನಾವಣೆಗಳು ಬರುತ್ತವೆ. ನಮ್ಮ ಕಾರ್ಯಕರ್ತರಿಗೆ ಶಕ್ತಿ ತುಂಬುವ ಚುನಾವಣೆಯಲ್ಲಿ ಸಂಸದರು ಹೆಚ್ಚು ಶ್ರಮ ಹಾಕಬೇಕು ಎಂದು ಸೂಚನೆ ನೀಡಿದರು.

ಇದನ್ನೂ ಓದಿ: ಸಿಎಂ, ಡಿಸಿಎಂ ಗ್ಯಾರಂಟಿ ನೀಡಿ ಜನರ ತಲೆ ಮೇಲೆ ಚಪ್ಪಡಿ ಕಲ್ಲು ಎಳೆದಿದ್ದಾರೆ: ಜೋಶಿ

ಸಮಾರಂಭದಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ಕೇಂದ್ರ ಸಚಿವರಾದ ಪ್ರಲ್ಹಾದ್​ ಜೋಶಿ, ಶೋಭಾ ಕರಂದ್ಲಾಜೆ, ಹೆಚ್​ಡಿ ಕುಮಾರಸ್ವಾಮಿ, ವಿ ಸೋಮಣ್ಣ ಲೋಕಸಭಾ ಚುನಾವಣಾ ರಾಜ್ಯ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಭಾಗಿಯಾಗಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್​ನ ಎಲ್ಲ ಸಂಸದರು, ಬಿಜೆಪಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ