ಮಾಜಿ ಸಚಿವ ಎ ಮಂಜು ವಿರುದ್ಧ ರಾಜ್ಯ ಬಿಜೆಪಿ ಶಿಸ್ತುಕ್ರಮ; ಎಲ್ಲಾ ಜವಾಬ್ದಾರಿಗಳಿಂದ ಬಿಡುಗಡೆ

ಮಗನಿಗೆ ಟಿಕೆಟ್ ಕೊಡಿಸಲು ಕಾಂಗ್ರೆಸ್ ನಾಯಕರನ್ನು ಎ. ಮಂಜು ಭೇಟಿ ಮಾಡಿದ್ದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗಿತ್ತು. ಹಾಗಾಗಿ ಬಿಜೆಪಿ ರಾಜ್ಯ ಶಿಸ್ತು ಸಮಿತಿಯಿಂದ ಮಾಜಿ ಸಚಿವ ಎ. ಮಂಜು ವಿರುದ್ದ ಕ್ರಮ ಕೈಗೊಳ್ಳಲಾಗಿದೆ.

ಮಾಜಿ ಸಚಿವ ಎ ಮಂಜು ವಿರುದ್ಧ ರಾಜ್ಯ ಬಿಜೆಪಿ ಶಿಸ್ತುಕ್ರಮ; ಎಲ್ಲಾ ಜವಾಬ್ದಾರಿಗಳಿಂದ ಬಿಡುಗಡೆ
ಎ. ಮಂಜು
Follow us
TV9 Web
| Updated By: ganapathi bhat

Updated on: Nov 23, 2021 | 9:05 PM

ಬೆಂಗಳೂರು: ಮಾಜಿ ಸಚಿವ ಎ. ಮಂಜು ಪುತ್ರ ಮಂಥರ್​ ​ಗೌಡಗೆ ಕಾಂಗ್ರೆಸ್​ನಿಂದ ಪರಿಷತ್ ಟಿಕೆಟ್ ಹಿನ್ನೆಲೆ ಕರ್ನಾಟಕ ಬಿಜೆಪಿ ಶಸ್ತು ಕ್ರಮ ಕೈಗೊಂಡಿದೆ. ಮಾಜಿ ಸಚಿವ ಎ. ಮಂಜು ವಿರುದ್ಧ ರಾಜ್ಯ ಬಿಜೆಪಿ ಕ್ರಮ ಕೈಗೊಂಡಿದೆ. ಮಂಡ್ಯ ಜಿಲ್ಲೆಯ ಜವಾಬ್ದಾರಿಗಳಿಂದ ಎ. ಮಂಜು ಮುಕ್ತಗೊಳಿಸಲಾಗಿದೆ. ಪ್ರಭಾರಿ, ಪಕ್ಷದ ಜವಾಬ್ದಾರಿಗಳಿಂದ ಬಿಜೆಪಿ ಮುಕ್ತಗೊಳಿಸಿದೆ. ಕೊಡಗು ಕ್ಷೇತ್ರದಿಂದ ಮಂಥರ್ ಗೌಡಗೆ ಕಾಂಗ್ರೆಸ್​ ಟಿಕೆಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಶಿಸ್ತುಕ್ರಮ ಕೈಗೊಂಡಿದೆ.

ಮಂಡ್ಯ ಜಿಲ್ಲೆಯ ಪಕ್ಷದ ಉಸ್ತುವಾರಿಯಿಂದ ಬಿಡುಗಡೆಗೊಳಿಸಿ ಪತ್ರ ನೀಡಲಾಗಿದೆ. ರಾಜ್ಯ ಶಿಸ್ತು ಸಮಿತಿ ಅದ್ಯಕ್ಷ ಲಿಂಗರಾಜ್ ಪಾಟೀಲ್‌ ಶಿಸ್ತು ಕ್ರಮ ಕೈಗೊಂಡಿದ್ದಾರೆ. ಇತ್ತೀಚಿನ ಬೆಳವಣಿಗೆಗಳಿಂದ‌‌ ಕೆಲವು ಸಂಶಯಗಳು ಉಂಟಾಗಿವೆ ಎಂದು ಆರೋಪಿಸಿ‌ ಕ್ರಮ ಕೈಗೊಳ್ಳಲಾಗಿದೆ. ಮಂಡ್ಯ ಜಿಲ್ಲೆ ಉಸ್ತುವಾರಿ ಹಾಗು ಇತರೆ ಎಲ್ಲಾ ಜವಾಬ್ದಾರಿ ಗಳಿಂದ ಬಿಡುಗಡೆ ಮಾಡಲಾಗಿದೆ ಎಂದು ಎ. ಮಂಜುಗೆ ಪತ್ರ ಬರೆಯಲಾಗಿದೆ.

ಕೊಡಗು ಜಿಲ್ಲೆಯ ವಿಧಾನ ಪರಿಷತ್ ಚುನಾವಣೆಯಲ್ಲಿ ಎ. ಮಂಜು ಪುತ್ರ ಮಂಥರ್ ಗೌಡ ಕಾಂಗ್ರೆಸ್​ನಿಂದ ಸ್ಪರ್ದೆ ಮಾಡಲಿದ್ದಾರೆ. ಮಗನಿಗೆ ಟಿಕೆಟ್ ಕೊಡಿಸಲು ಕಾಂಗ್ರೆಸ್ ನಾಯಕರನ್ನು ಎ. ಮಂಜು ಭೇಟಿ ಮಾಡಿದ್ದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗಿತ್ತು. ಹಾಗಾಗಿ ಬಿಜೆಪಿ ರಾಜ್ಯ ಶಿಸ್ತು ಸಮಿತಿಯಿಂದ ಮಾಜಿ ಸಚಿವ ಎ. ಮಂಜು ವಿರುದ್ದ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಕಸಾಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿದ ಆರೋಪ: ಪಕ್ಷದಿಂದ ಎಂ.ಮಹೇಂದ್ರ ಗೌಡ ಅಮಾನತು

ಇದನ್ನೂ ಓದಿ: ಪರಿಷತ್ ಚುನಾವಣೆ: ಬಿಜೆಪಿ, ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿರುವ ಅನುಮಾನವಿದೆ: ಜಿ ಪರಮೇಶ್ವರ್

ಶನಿದೇವ ಕುಂಬ ರಾಶಿಗೆ ಪ್ರವೇಶಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಶನಿದೇವ ಕುಂಬ ರಾಶಿಗೆ ಪ್ರವೇಶಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ