ಬೆಂಗಳೂರು: ಮಾಜಿ ಸಚಿವ ಎ. ಮಂಜು ಪುತ್ರ ಮಂಥರ್ ಗೌಡಗೆ ಕಾಂಗ್ರೆಸ್ನಿಂದ ಪರಿಷತ್ ಟಿಕೆಟ್ ಹಿನ್ನೆಲೆ ಕರ್ನಾಟಕ ಬಿಜೆಪಿ ಶಸ್ತು ಕ್ರಮ ಕೈಗೊಂಡಿದೆ. ಮಾಜಿ ಸಚಿವ ಎ. ಮಂಜು ವಿರುದ್ಧ ರಾಜ್ಯ ಬಿಜೆಪಿ ಕ್ರಮ ಕೈಗೊಂಡಿದೆ. ಮಂಡ್ಯ ಜಿಲ್ಲೆಯ ಜವಾಬ್ದಾರಿಗಳಿಂದ ಎ. ಮಂಜು ಮುಕ್ತಗೊಳಿಸಲಾಗಿದೆ. ಪ್ರಭಾರಿ, ಪಕ್ಷದ ಜವಾಬ್ದಾರಿಗಳಿಂದ ಬಿಜೆಪಿ ಮುಕ್ತಗೊಳಿಸಿದೆ. ಕೊಡಗು ಕ್ಷೇತ್ರದಿಂದ ಮಂಥರ್ ಗೌಡಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಶಿಸ್ತುಕ್ರಮ ಕೈಗೊಂಡಿದೆ.
ಮಂಡ್ಯ ಜಿಲ್ಲೆಯ ಪಕ್ಷದ ಉಸ್ತುವಾರಿಯಿಂದ ಬಿಡುಗಡೆಗೊಳಿಸಿ ಪತ್ರ ನೀಡಲಾಗಿದೆ. ರಾಜ್ಯ ಶಿಸ್ತು ಸಮಿತಿ ಅದ್ಯಕ್ಷ ಲಿಂಗರಾಜ್ ಪಾಟೀಲ್ ಶಿಸ್ತು ಕ್ರಮ ಕೈಗೊಂಡಿದ್ದಾರೆ. ಇತ್ತೀಚಿನ ಬೆಳವಣಿಗೆಗಳಿಂದ ಕೆಲವು ಸಂಶಯಗಳು ಉಂಟಾಗಿವೆ ಎಂದು ಆರೋಪಿಸಿ ಕ್ರಮ ಕೈಗೊಳ್ಳಲಾಗಿದೆ. ಮಂಡ್ಯ ಜಿಲ್ಲೆ ಉಸ್ತುವಾರಿ ಹಾಗು ಇತರೆ ಎಲ್ಲಾ ಜವಾಬ್ದಾರಿ ಗಳಿಂದ ಬಿಡುಗಡೆ ಮಾಡಲಾಗಿದೆ ಎಂದು ಎ. ಮಂಜುಗೆ ಪತ್ರ ಬರೆಯಲಾಗಿದೆ.
ಕೊಡಗು ಜಿಲ್ಲೆಯ ವಿಧಾನ ಪರಿಷತ್ ಚುನಾವಣೆಯಲ್ಲಿ ಎ. ಮಂಜು ಪುತ್ರ ಮಂಥರ್ ಗೌಡ ಕಾಂಗ್ರೆಸ್ನಿಂದ ಸ್ಪರ್ದೆ ಮಾಡಲಿದ್ದಾರೆ. ಮಗನಿಗೆ ಟಿಕೆಟ್ ಕೊಡಿಸಲು ಕಾಂಗ್ರೆಸ್ ನಾಯಕರನ್ನು ಎ. ಮಂಜು ಭೇಟಿ ಮಾಡಿದ್ದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗಿತ್ತು. ಹಾಗಾಗಿ ಬಿಜೆಪಿ ರಾಜ್ಯ ಶಿಸ್ತು ಸಮಿತಿಯಿಂದ ಮಾಜಿ ಸಚಿವ ಎ. ಮಂಜು ವಿರುದ್ದ ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ: ಕಸಾಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿದ ಆರೋಪ: ಪಕ್ಷದಿಂದ ಎಂ.ಮಹೇಂದ್ರ ಗೌಡ ಅಮಾನತು
ಇದನ್ನೂ ಓದಿ: ಪರಿಷತ್ ಚುನಾವಣೆ: ಬಿಜೆಪಿ, ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿರುವ ಅನುಮಾನವಿದೆ: ಜಿ ಪರಮೇಶ್ವರ್