AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪ, ಅಜ್ಜಿ, ಮುತ್ತಾತ ಪ್ರಧಾನಿಯಾಗಿದ್ದರೆಂಬ ಕಾರಣಕ್ಕೆ ಓರ್ವ ಹೆಬ್ಬೆಟ್ಟು ಗಿರಾಕಿ ಕನಸು ಕಾಣುತ್ತಿದ್ದಾನೆ; ಸಿದ್ದರಾಮಯ್ಯ ವಿರುದ್ಧ ಟ್ವೀಟ್ ವಾರ್ ನಡೆಸಿದ ಬಿಜೆಪಿ

ನಿರಂತರ 20 ವರ್ಷಗಳಿಂದ ಜನರಿಂದ ಆಯ್ಕೆಯಾಗಿ ಸಾಂವಿಧಾನಿಕ ಹುದ್ದೆಯಲ್ಲಿರುವ ಪ್ರಧಾನಿಯ ಕುರಿತು ಏಕವಚನದಲ್ಲಿ ಮಾತನಾಡುವ ಮುನ್ನ ಎಚ್ಚರವಹಿಸಿ.

ಅಪ್ಪ, ಅಜ್ಜಿ, ಮುತ್ತಾತ ಪ್ರಧಾನಿಯಾಗಿದ್ದರೆಂಬ ಕಾರಣಕ್ಕೆ ಓರ್ವ ಹೆಬ್ಬೆಟ್ಟು ಗಿರಾಕಿ ಕನಸು ಕಾಣುತ್ತಿದ್ದಾನೆ; ಸಿದ್ದರಾಮಯ್ಯ ವಿರುದ್ಧ ಟ್ವೀಟ್ ವಾರ್ ನಡೆಸಿದ ಬಿಜೆಪಿ
ವಿಪಕ್ಷ ನಾಯಕ ಸಿದ್ದರಾಮಯ್ಯ
Follow us
TV9 Web
| Updated By: sandhya thejappa

Updated on:Oct 17, 2021 | 11:45 AM

ಬೆಂಗಳೂರು: ನಿನ್ನೆ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ಹರಿಹಾಯ್ದಿದ್ದರು. ಕೊರೊನಾ ಓಡಿಸಿ ಅಂದ್ರೆ ಪ್ರಧಾನಿ ಮೋದಿ ಜಾಗಟೆ ಬಾರಿಸಿ, ಚಪ್ಪಾಳೆ ತಟ್ಟಿ ಅಂದರು. ಯಾವನ್ರಿ ಇವನು ಪ್ರಧಾನ ಮಂತ್ರಿ? ಇಂಥವರೆಲ್ಲ ಪ್ರಧಾನಿ ಆಗೋಕೆ ಲಾಯಕ್ಕೇನ್ರಿ? ನನಗೆ ವೈಯಕ್ತಿಕವಾಗಿ ಯಾರ ಮೇಲೂ ಕೋಪ ಇಲ್ಲ. ಅವರು ಮಾಡ್ತಿರೋದನ್ನ ನೋಡಿ ಕೋಪ ಬರ್ತಿದೆ ಅಂತ ಸಿದ್ದರಾಮಯ್ಯ ಗುಡುಗಿದ್ದರು. ಇದಕ್ಕೆ ಕರ್ನಾಟಕ ಬಿಜೆಪಿ, ಸಿದ್ದರಾಮಯ್ಯ ವಿರುದ್ಧ ಟ್ವೀಟ್ ವಾರ್ ನಡೆಸಿದೆ.

ನಿರಂತರ 20 ವರ್ಷಗಳಿಂದ ಜನರಿಂದ ಆಯ್ಕೆಯಾಗಿ ಸಾಂವಿಧಾನಿಕ ಹುದ್ದೆಯಲ್ಲಿರುವ ಪ್ರಧಾನಿಯ ಕುರಿತು ಏಕವಚನದಲ್ಲಿ ಮಾತನಾಡುವ ಮುನ್ನ ಎಚ್ಚರವಹಿಸಿ. ನಿಮ್ಮ ದುರಹಂಕಾರ, ದಾರ್ಷ್ಟ್ಯಕ್ಕಾಗಿ ಮಾಜಿ ಸಿಎಂ ಸಾಂವಿಧಾನಿಕ ಹುದ್ದೆ ಬಗ್ಗೆ ಮಾತಾಡಿದ್ದರು. ಆ ಪದಗಳನ್ನು ನೀವು ಹೇಗೆ ಅರಗಿಸಿಕೊಂಡ್ರಿ ಬುರುಡೆರಾಮಯ್ಯ ಅಂತ ಹ್ಯಾಶ್ ಟ್ಯಾಗ್ ಹಾಕಿ ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಪ್ರಶ್ನಿಸಿದೆ.

ಜನರಿಂದ ಎರಡನೇ ಭಾರಿ ಆಯ್ಕೆಯಾದ ಪ್ರಧಾನ ಸೇವಕ ಅಲಂಕರಿಸಿರುವ ಪ್ರಧಾನಿ ಹುದ್ದೆಯ ಬಗ್ಗೆ ಕೀಳು ಮಟ್ಟದಲ್ಲಿ ಮಾತನಾಡಿ ನಿಮ್ಮ ಕೀಳು ಸಂಸ್ಕಾರ ಅನಾವರಣ ಮಾಡಿಕೊಂಡಿದ್ದೀರಿ. ಸರ್ಕಾರಿ ಬಂಗಲೆಯಲ್ಲೇ ಉಳಿಯಬೇಕೆಂಬ ಹಟಕ್ಕೆ ಪ್ರತಿಪಕ್ಷ ಸ್ಥಾನ ಪಟ್ಟು ಹಿಡಿದು ಉಳಿಸಿಕೊಂಡ ನಿಮ್ಮಂತವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ? ಅಂತ ಕರ್ನಾಟಕ ಬಿಜೆಪಿ ಟ್ವೀಟ್ ಮೂಲಕ ಗುಡುಗಿದೆ.

ಅಪ್ಪ, ಅಜ್ಜಿ, ಮುತ್ತಾತ ಪ್ರಧಾನಿಯಾಗಿದ್ದರೆಂಬ ಕಾರಣಕ್ಕೆ ತಾನು ಪ್ರಧಾನಿಯಾಗಬೇಕೆಂದು ಓರ್ವ ‘ಹೆಬ್ಬೆಟ್ಟು’ ಗಿರಾಕಿ ಕನಸು ಕಾಣುತ್ತಿದ್ದಾನೆ. ಆತನ ಯೋಗ್ಯತೆ, ಅರ್ಹತೆ ಏನು ಎಂದು ವಿಚಾರಿಸಿ. ನಿಮ್ಮ ಶಾಶ್ವತ ಪ್ರಧಾನಿ ಅಭ್ಯರ್ಥಿಯ ಬಗ್ಗೆಯೂ ಹೀಗೇ ಮಾತನಾಡುತ್ತೀರಾ ನೀವು? ಅಂತ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಕೇಳಿದೆ.

ಕುಮಾರಸ್ವಾಮಿ ಟ್ವೀಟ್‌ಗೆ ಸಿದ್ದರಾಮಯ್ಯ ತಿರುಗೇಟು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಆರೋಪಕ್ಕೆ ಸಿದ್ದರಾಮಯ್ಯ ಟ್ವೀಟ್ ಮೂಲಕವೇ ತಿರುಗೇಟು ನೀಡಿದ್ದಾರೆ. ಗಾಂಧಿಯನ್ನು ಹಿಂದೂ ವಿರೋಧಿ ಎನ್ನುತ್ತಿದ್ದ ಹಿಂದೂಗಳು, ದಲಿತ ವಿರೋಧಿ ಎನ್ನುತ್ತಿದ್ದ ದಲಿತರು, ಮುಸ್ಲಿಮರ ವಿರೋಧಿ ಎನ್ನುತ್ತಿದ್ದ ಮುಸ್ಲಿಮರು ಇದ್ದರು. ಟೀಕಾಕಾರರು ಮಹಾತ್ಮ ಗಾಂಧೀಜಿಯನ್ನೇ ಬಿಡಲಿಲ್ಲ. ಇನ್ನು ನನ್ನಂತಹ ಹುಲು ಮಾನವರನ್ನು ಬಿಡುತ್ತಾರೆಯೇ? ಸಬ್ ಕೋ ಸನ್ಮತಿ ದೇ ಭಗವಾನ್ ಎಂದು ಟ್ವೀಟ್​ ಸಿದ್ದರಾಮಯ್ಯ ಮಾಡಿದ್ದಾರೆ.

ಇದನ್ನೂ ಓದಿ

ಕನ್ಯೆ ನೋಡಲು ಬಂದಿದ್ದ ಯುವಕ ಸಾವು; ಮಗನ ಶವ ಕಂಡು ಕಣ್ಣೀರಿಟ್ಟ ಕುಟುಂಬಸ್ಥರು

ಗುಬ್ಬಿ ಜೆಡಿಎಸ್ ಶಾಸಕ ಎಸ್ ಆರ್ ಶ್ರೀನಿವಾಸ್​ಗೆ ಮತ್ತೊಂದು ಶಾಕ್ ನೀಡಿದ ಹೆಚ್​ ಡಿ ಕುಮಾರಸ್ವಾಮಿ

Published On - 11:37 am, Sun, 17 October 21

ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ತಿರಂಗಾ ಯಾತ್ರೆಯಲ್ಲಿ ಮಾಜಿ ಯೋಧರ ಕೈಹಿಡಿದು ಹೆಜ್ಜೆಹಾಕಿದ ನಾಯಕರು
ತಿರಂಗಾ ಯಾತ್ರೆಯಲ್ಲಿ ಮಾಜಿ ಯೋಧರ ಕೈಹಿಡಿದು ಹೆಜ್ಜೆಹಾಕಿದ ನಾಯಕರು