ಬೆಂಗಳೂರು: ನಿನ್ನೆ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ಹರಿಹಾಯ್ದಿದ್ದರು. ಕೊರೊನಾ ಓಡಿಸಿ ಅಂದ್ರೆ ಪ್ರಧಾನಿ ಮೋದಿ ಜಾಗಟೆ ಬಾರಿಸಿ, ಚಪ್ಪಾಳೆ ತಟ್ಟಿ ಅಂದರು. ಯಾವನ್ರಿ ಇವನು ಪ್ರಧಾನ ಮಂತ್ರಿ? ಇಂಥವರೆಲ್ಲ ಪ್ರಧಾನಿ ಆಗೋಕೆ ಲಾಯಕ್ಕೇನ್ರಿ? ನನಗೆ ವೈಯಕ್ತಿಕವಾಗಿ ಯಾರ ಮೇಲೂ ಕೋಪ ಇಲ್ಲ. ಅವರು ಮಾಡ್ತಿರೋದನ್ನ ನೋಡಿ ಕೋಪ ಬರ್ತಿದೆ ಅಂತ ಸಿದ್ದರಾಮಯ್ಯ ಗುಡುಗಿದ್ದರು. ಇದಕ್ಕೆ ಕರ್ನಾಟಕ ಬಿಜೆಪಿ, ಸಿದ್ದರಾಮಯ್ಯ ವಿರುದ್ಧ ಟ್ವೀಟ್ ವಾರ್ ನಡೆಸಿದೆ.
ನಿರಂತರ 20 ವರ್ಷಗಳಿಂದ ಜನರಿಂದ ಆಯ್ಕೆಯಾಗಿ ಸಾಂವಿಧಾನಿಕ ಹುದ್ದೆಯಲ್ಲಿರುವ ಪ್ರಧಾನಿಯ ಕುರಿತು ಏಕವಚನದಲ್ಲಿ ಮಾತನಾಡುವ ಮುನ್ನ ಎಚ್ಚರವಹಿಸಿ. ನಿಮ್ಮ ದುರಹಂಕಾರ, ದಾರ್ಷ್ಟ್ಯಕ್ಕಾಗಿ ಮಾಜಿ ಸಿಎಂ ಸಾಂವಿಧಾನಿಕ ಹುದ್ದೆ ಬಗ್ಗೆ ಮಾತಾಡಿದ್ದರು. ಆ ಪದಗಳನ್ನು ನೀವು ಹೇಗೆ ಅರಗಿಸಿಕೊಂಡ್ರಿ ಬುರುಡೆರಾಮಯ್ಯ ಅಂತ ಹ್ಯಾಶ್ ಟ್ಯಾಗ್ ಹಾಕಿ ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಪ್ರಶ್ನಿಸಿದೆ.
ಜನರಿಂದ ಎರಡನೇ ಭಾರಿ ಆಯ್ಕೆಯಾದ ಪ್ರಧಾನ ಸೇವಕ ಅಲಂಕರಿಸಿರುವ ಪ್ರಧಾನಿ ಹುದ್ದೆಯ ಬಗ್ಗೆ ಕೀಳು ಮಟ್ಟದಲ್ಲಿ ಮಾತನಾಡಿ ನಿಮ್ಮ ಕೀಳು ಸಂಸ್ಕಾರ ಅನಾವರಣ ಮಾಡಿಕೊಂಡಿದ್ದೀರಿ. ಸರ್ಕಾರಿ ಬಂಗಲೆಯಲ್ಲೇ ಉಳಿಯಬೇಕೆಂಬ ಹಟಕ್ಕೆ ಪ್ರತಿಪಕ್ಷ ಸ್ಥಾನ ಪಟ್ಟು ಹಿಡಿದು ಉಳಿಸಿಕೊಂಡ ನಿಮ್ಮಂತವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ? ಅಂತ ಕರ್ನಾಟಕ ಬಿಜೆಪಿ ಟ್ವೀಟ್ ಮೂಲಕ ಗುಡುಗಿದೆ.
ಅಪ್ಪ, ಅಜ್ಜಿ, ಮುತ್ತಾತ ಪ್ರಧಾನಿಯಾಗಿದ್ದರೆಂಬ ಕಾರಣಕ್ಕೆ ತಾನು ಪ್ರಧಾನಿಯಾಗಬೇಕೆಂದು ಓರ್ವ ‘ಹೆಬ್ಬೆಟ್ಟು’ ಗಿರಾಕಿ ಕನಸು ಕಾಣುತ್ತಿದ್ದಾನೆ. ಆತನ ಯೋಗ್ಯತೆ, ಅರ್ಹತೆ ಏನು ಎಂದು ವಿಚಾರಿಸಿ. ನಿಮ್ಮ ಶಾಶ್ವತ ಪ್ರಧಾನಿ ಅಭ್ಯರ್ಥಿಯ ಬಗ್ಗೆಯೂ ಹೀಗೇ ಮಾತನಾಡುತ್ತೀರಾ ನೀವು? ಅಂತ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಕೇಳಿದೆ.
ಸಿದ್ದರಾಮಯ್ಯನವರೇ,
ನಿರಂತರ 20 ವರ್ಷಗಳಿಂದ ಜನರಿಂದ ಆಯ್ಕೆಯಾಗಿ ಸಾಂವಿಧಾನಿಕ ಹುದ್ದೆಯಲ್ಲಿರುವ ಪ್ರಧಾನಿಯ ಕುರಿತು ಏಕವಚನದಲ್ಲಿ ಮಾತನಾಡುವ ಮುನ್ನ ಎಚ್ಚರವಹಿಸಿ.
ನಿಮ್ಮ ದುರಹಂಕಾರ, ದಾರ್ಷ್ಟ್ಯಕ್ಕಾಗಿ ಮಾಜಿ ಮುಖ್ಯಮಂತ್ರಿಯೊಬ್ಬರಿಂದ ನಿಮ್ಮ ಸಾಂವಿಧಾನಿಕ ಹುದ್ದೆಯ ಮೇಲೆ ಪ್ರಯೋಗವಾದ ಪದವನ್ನು ಹೇಗೆ ಅರಗಿಸಿಕೊಂಡಿರಿ?#ಬುರುಡೆರಾಮಯ್ಯ pic.twitter.com/ZZ04IbagSN
— BJP Karnataka (@BJP4Karnataka) October 17, 2021
ಕುಮಾರಸ್ವಾಮಿ ಟ್ವೀಟ್‌ಗೆ ಸಿದ್ದರಾಮಯ್ಯ ತಿರುಗೇಟು
ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಆರೋಪಕ್ಕೆ ಸಿದ್ದರಾಮಯ್ಯ ಟ್ವೀಟ್ ಮೂಲಕವೇ ತಿರುಗೇಟು ನೀಡಿದ್ದಾರೆ. ಗಾಂಧಿಯನ್ನು ಹಿಂದೂ ವಿರೋಧಿ ಎನ್ನುತ್ತಿದ್ದ ಹಿಂದೂಗಳು, ದಲಿತ ವಿರೋಧಿ ಎನ್ನುತ್ತಿದ್ದ ದಲಿತರು, ಮುಸ್ಲಿಮರ ವಿರೋಧಿ ಎನ್ನುತ್ತಿದ್ದ ಮುಸ್ಲಿಮರು ಇದ್ದರು. ಟೀಕಾಕಾರರು ಮಹಾತ್ಮ ಗಾಂಧೀಜಿಯನ್ನೇ ಬಿಡಲಿಲ್ಲ. ಇನ್ನು ನನ್ನಂತಹ ಹುಲು ಮಾನವರನ್ನು ಬಿಡುತ್ತಾರೆಯೇ? ಸಬ್ ಕೋ ಸನ್ಮತಿ ದೇ ಭಗವಾನ್ ಎಂದು ಟ್ವೀಟ್ ಸಿದ್ದರಾಮಯ್ಯ ಮಾಡಿದ್ದಾರೆ.
ಮಹಾತ್ಮ ಗಾಂಧೀಜಿ ಅವರನ್ನು
ಹಿಂದೂ ವಿರೋಧಿ ಎನ್ನುತ್ತಿದ್ದ ಹಿಂದೂಗಳು,
ದಲಿತ ವಿರೋಧಿ ಎನ್ನುತ್ತಿದ್ದ ದಲಿತರು,
ಮುಸ್ಲಿಮ್ ವಿರೋಧಿ ಎನ್ನುತ್ತಿದ್ದ ಮುಸ್ಲಿಮರು ಇದ್ದರು.ಮಹಾತ್ಮರ ಬೆನ್ನು ಬಿಡದ ಟೀಕಾಕಾರರು
ನನ್ನಂತಹ ಹುಲುಮಾನವರನ್ನು ಬಿಡುತ್ತಾರೆಯೇ?ಸಬ್ ಕೋ ಸನ್ಮತಿ ದೇ ಭಗವಾನ್.#MahatmaGandhiji
— Siddaramaiah (@siddaramaiah) October 17, 2021
ಇದನ್ನೂ ಓದಿ
ಕನ್ಯೆ ನೋಡಲು ಬಂದಿದ್ದ ಯುವಕ ಸಾವು; ಮಗನ ಶವ ಕಂಡು ಕಣ್ಣೀರಿಟ್ಟ ಕುಟುಂಬಸ್ಥರು
ಗುಬ್ಬಿ ಜೆಡಿಎಸ್ ಶಾಸಕ ಎಸ್ ಆರ್ ಶ್ರೀನಿವಾಸ್ಗೆ ಮತ್ತೊಂದು ಶಾಕ್ ನೀಡಿದ ಹೆಚ್ ಡಿ ಕುಮಾರಸ್ವಾಮಿ
Published On - 11:37 am, Sun, 17 October 21