Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2023: ಇಂದು 14ನೇ ಬಾರಿ ಬಜೆಟ್​ ಮಂಡಿಸಲಿರುವ ಸಿದ್ದರಾಮಯ್ಯ, 5 ಗ್ಯಾರಂಟಿಗಳ ಜೊತೆ ಇನ್ನೆಷ್ಟು ಭಾಗ್ಯ?

ಇಂದು(ಜು.7) ನೂತನ ಸರ್ಕಾರದ ಮೊದಲ ಬಜೆಟ್​(Karnataka Budget 2023)ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಮಂಡನೆ ಮಾಡಲಿದ್ದಾರೆ.

Karnataka Budget 2023: ಇಂದು 14ನೇ ಬಾರಿ ಬಜೆಟ್​ ಮಂಡಿಸಲಿರುವ ಸಿದ್ದರಾಮಯ್ಯ, 5 ಗ್ಯಾರಂಟಿಗಳ ಜೊತೆ ಇನ್ನೆಷ್ಟು ಭಾಗ್ಯ?
ಇಂಧನ ಇಲಾಖೆ 22,773 ಕೋಟಿ ಮೀಸಲು
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Jul 07, 2023 | 7:12 AM

ಬೆಂಗಳೂರು: ಇಂದು(ಜು.7) ನೂತನ ಸರ್ಕಾರದ ಮೊದಲ ಬಜೆಟ್(Karnataka Budget 2023)ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಮಂಡನೆ ಮಾಡಲಿದ್ದಾರೆ. ಈ ಮೂಲಕ ಬರೊಬ್ಬರಿ 14ನೇ ಬಾರಿ ಬಜೆಟ್ ಮಂಡನೆ ಮಾಡುತ್ತಿದ್ದಾರೆ.  ಕೆಲವೇ ಕ್ಷಣಗಳಲ್ಲಿ ಅಂದ್ರೆ ಇಂದು 12 ಗಂಟೆಗೆ, 14ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಆದ್ರೆ ಇದು ಪೂರ್ಣಪ್ರಮಾಣದ ಬಜೆಟ್ ಅಲ್ಲ, ಹೊಸ ಸರ್ಕಾರದ ಪೂರಕ ಬಜೆಟ್ ಆಗಿರಲಿದೆ.  ಇನ್ನು ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿ ಜಾರಿ ಜೊತೆಗೆ ಆರ್ಥಿಕ ವ್ಯವಸ್ಥೆ ಸರಿದೂಗಿಸುವ ಬಜೆಟ್ ಮಂಡಿಸಲಿದ್ದಾರೆ. 2023-24ನೇ ಸಾಲಿನ ಬಜೆಟ್ ಗಾತ್ರ 3.35ಲಕ್ಷ ಕೋಟಿ ರೂಪಾಯಿ ದಾಟುವ ಅಂದಾಜು ಮಾಡಲಾಗಿದೆ. ಈ ಹಿಂದೆ ಬಸವರಾಜ ಬೊಮ್ಮಾಯಿ ಸರ್ಕಾರ 2 ಲಕ್ಷ 51ಸಾವಿರದ,541ಕೋಟಿ ರೂಪಾಯಿ ಬಜೆಟ್ ಮಂಡಿಸಿತ್ತು.

ಇದನ್ನೂ ಓದಿ: Karnataka Budget 2023: ಗ್ಯಾರಂಟಿ, ಬೆಂಗಳೂರು ಅಭಿವೃದ್ಧಿಗೆ ಅನುದಾನ ನೀಡುವುದು ಸಿಎಂ ಸಿದ್ದರಾಮಯ್ಯ ಆದ್ಯತೆ

13 ಬಾರಿ ಬಜೆಟ್ ಮಂಡಿಸಿ ಇದೀಗ 14ನೇ ಬಾರಿ ದಾಖಲೆಯ ಬಜೆಟ್ ಮಂಡಿಸುತ್ತಿರುವ ಲೆಕ್ಕರಾಮಯ್ಯರ ಮೇಲೆ ರಾಜ್ಯದ ಜನರ ಚಿತ್ತ ನೆಟ್ಟಿದೆ. ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿಗಳು ರಾಜ್ಯದ ಜನರ ನಿರೀಕ್ಷೆಯನ್ನ ಹೆಚ್ಚಿಸಿದೆ. ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜತೆಗೆ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳಲ್ಲಿ ಯಾವೆಲ್ಲ ಭರವಸೆಗಳನ್ನು ಅನುಷ್ಠಾನಗೊಳಿಸಿತ್ತಾರೆ. ಗ್ಯಾರಂಟಿ ಯೋಜನೆಗಳ ಮಧ್ಯೆ ಅಭಿವೃದ್ಧಿ ಕಾರ್ಯಗಳಿಗೆ ಹೇಗೆ ಅನುದಾನ ನೀಡುತ್ತಾರೆ. ಆರ್ಥಿಕ ಶಿಸ್ತನ್ನ ಹೇಗೆ ಪ್ರದರ್ಶಿಸುತ್ತಾರೆ? ಹೀಗೆ ಬಜೆಟ್​ನಲ್ಲಿ ಏನೆಲ್ಲ ಇರಲಿದೆ ಎನ್ನುವುದು ತೀವ್ರ ಕುತೂಹಲ ಕೆರಳಿಸಿದೆ. ಬಜೆಟ್​ನಲ್ಲಿ ಏನೆಲ್ಲ ಭಾಗ್ಯಗಳು ಸಿಗಲಿದೆ ಎಂದು ನಾಡಿನ ಆರುವರೆ ಕೋಟಿ ಜನರು ಎದುರು ನೋಡುತ್ತಿದ್ದಾರೆ.

ರಾಜ್ಯದ ಸಮಗ್ರ ಅಭಿವೃದ್ಧಿ ಮತ್ತು ದೂರದೃಷ್ಟಿ ಆಲೋಚನೆಗಳನ್ನು ಕ್ರೂಢೀಕರಿಸಿ ಮಹತ್ವದ ಬಜೆಟ್ ಮಂಡಿಸಲು ಈಗಾಗಲೇ ಸಿಎಂ ಸಿದ್ದರಾಮಯ್ಯ ಎಲ್ಲ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಜೆಟ್ ಮಂಡನೆಗೆ ಅಂತಿಮ ರೂಪ ನೀಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಗ್ಯಾರಂಟಿ ಯೋಜನೆಗಳ ಜತೆಗೆ ಹಲವು ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಅದರಲ್ಲೂ ಮುಖ್ಯವಾಗಿ ಅಂಗನವಾಡಿ, ಆಶಾ ಕಾರ್ಯಕರ್ತರ ಗೌರವ ಧನ ಹೆಚ್ಚಿಸಲು ಮುಖ್ಯಮಂತ್ರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಅಂಗನವಾಡಿ, ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಸಾಧ್ಯತೆ

ಇನ್ನು ಈ ಬಜೆಟ್​ನಲ್ಲಿ ಕಾಂಗ್ರೆಸ್​ ಸರ್ಕಾರ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಭರವಸೆ ಈಡೇರಿಸುವ ಜೊತೆಗೆ ಅಂಗನವಾಡಿ, ಆಶಾ ಕಾರ್ಯಕರ್ತೆ, ಬಿಸಿಯೂಟ ಸಿಬ್ಬಂದಿಯರ ಗೌರವಧನ ಹೆಚ್ಚಳ ಮಾಡುವ ಸಾಧ್ಯತೆಯಿದೆ. ಇನ್ನು ಇದರ ಜೊತೆಗೆ ಗೃಹಲಕ್ಷ್ಮಿ ಯೋಜನೆಗೆ ಹಣ ಹೊಂದಾಣಿಕೆ ಕುರಿತು ಘೋಷಣೆ ಮೂಲಕ ಬರೊಬ್ಬರಿ 30 ಸಾವಿರ ಕೋಟಿ ಅನುದಾನ ಮೀಸಲಿಡುವ ಸಾಧ್ಯತೆಯಿದೆ. ಜೊತೆಗೆ ಮೇ 2024 ರ ಲೋಕಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಹೊಸ ಕಲ್ಯಾಣ ಕ್ರಮಗಳನ್ನು ಘೋಷಿಸಬಹುದು ಎಂಬ ನಿರೀಕ್ಷೆಗಳೂ ಇವೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 6:41 am, Fri, 7 July 23

ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ