AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಸಂಜೆ ಸಚಿವ ಸಂಪುಟ ಪಟ್ಟಿ ಅಂತಿಮ; ಲಕ್ಷ್ಮಣ ಸವದಿ, ಶಶಿಕಲಾ ಜೊಲ್ಲೆ, ಕೋಟ ಶ್ರೀನಿವಾಸ್ ಪೂಜಾರಿಗೆ ನಿರಾಸೆ?

ಈ ಹಿಂದೆ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಲಕ್ಷ್ಮಣ ಸವದಿ ಅವರ ಹೆಸರನ್ನೂ ಕೈ ಬಿಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಲಕ್ಷ್ಮಣ ಸವದಿ ಭಾರೀ ಕಸರತ್ತು ಶುರು ಮಾಡಿಕೊಂಡಿದ್ದು, ಮುಖ್ಯಮಂತ್ರಿಗಳ ಜತೆ ನಿನ್ನೆಯಿಡೀ ಸುತ್ತಾಡುವುದಲ್ಲದೆ ದೆಹಲಿಯಲ್ಲಿ ಲಾಬಿ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇಂದು ಸಂಜೆ ಸಚಿವ ಸಂಪುಟ ಪಟ್ಟಿ ಅಂತಿಮ; ಲಕ್ಷ್ಮಣ ಸವದಿ, ಶಶಿಕಲಾ ಜೊಲ್ಲೆ, ಕೋಟ ಶ್ರೀನಿವಾಸ್ ಪೂಜಾರಿಗೆ ನಿರಾಸೆ?
ಲಕ್ಷ್ಮಣ ಸವದಿ, ಶಶಿಕಲಾ ಜೊಲ್ಲೆ, ಕೋಟಾ ಶ್ರೀನಿವಾಸ ಪೂಜಾರಿ
TV9 Web
| Edited By: |

Updated on: Aug 03, 2021 | 7:50 AM

Share

ದೆಹಲಿ: ಕರ್ನಾಟಕ ಸರ್ಕಾರದ ನೂತನ ಸಚಿವ ಸಂಪುಟಕ್ಕೆ (Cabinet) ಇಂದು ಅಂತಿಮ ರೂಪ ಸಿಗಲಿದೆ. ಯಾರು ಯಾರು ಸಚಿವ ಸ್ಥಾನವನ್ನು ಅಲಂಕರಿಸಲಿದ್ದಾರೆ. ಯಾರಿಗೆ ಅವಕಾಶ ತಪ್ಪಿಹೋಗಲಿದೆ ಎನ್ನುವುದು ಸಂಜೆಯ ವೇಳೆಗೆ ಗೊತ್ತಾಗಲಿದೆ. ಇಂದು ಸಂಜೆ ನೂತನ ಸಚಿವರ ಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರೇ ದೆಹಲಿ ಭೇಟಿಯ ನಂತರ ತಿಳಿಸಿದ್ದಾರೆ. ಸಂಪುಟ ರಚನೆ ಬಗ್ಗೆ ನಿನ್ನೆ ತಡರಾತ್ರಿ ತನಕವೂ ಜೆ.ಪಿ.ನಡ್ಡಾ ಮತ್ತು ಸಿಎಂ ಬೊಮ್ಮಾಯಿ ಚರ್ಚೆ ನಡೆಸಿದ್ದು, ಆ ಚರ್ಚೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಕೂಡಾ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ಸದರಿ ಸಭೆಯಲ್ಲಿ ಒಂದಷ್ಟು ಹೆಸರುಗಳು ಪ್ರಸ್ತಾಪವಾಗಿದ್ದು, ಕೆಲವರನ್ನು ಸಚಿವ ಸಂಪುಟದಿಂದ ದೂರವಿಡುವ ಸಾಧ್ಯತೆಯೂ ಇರುವುದರಿಂದ ಅವರೀಗ ದೆಹಲಿ ಮಟ್ಟದಲ್ಲಿ ಲಾಬಿ ಶುರುಮಾಡಿಕೊಂಡಿದ್ದಾರೆ.

ಈ ಬಾರಿ ಸಚಿವ ಸ್ಥಾನ ಆಕಾಂಕ್ಷಿಗಳ ಸಾಲಿನಲ್ಲಿ ಅರಗ ಜ್ಞಾನೇಂದ್ರ, ಎಂ.ಪಿ.‌ ರೇಣುಕಾಚಾರ್ಯ, ಎಂ.ಪಿ ಕುಮಾರಸ್ವಾಮಿ, ಮುನಿರತ್ನ, ಜಿ.ಎಚ್. ತಿಪ್ಪಾರೆಡ್ಡಿ, ಹಾಲಪ್ಪ ಆಚಾರ್, ವೀರಣ್ಣ ಚರಂತಿಮಠ, ಪೂರ್ಣಿಮಾ ಶ್ರೀನಿವಾಸ ಮುಂಚೂಣಿಯಲ್ಲಿದ್ದಾರೆ. ಇವರುಗಳಿಗೆ ಸಚಿವ ಸ್ಥಾನ ಒಲಿಯುವುದು ಕೂಡಾ ಬಹುತೇಕ ಖಚಿತವಾಗಿದೆ. ಇಂದು ಸಂಜೆ ಬಿಡುಗಡೆಗೊಳಿಸುವ ಪಟ್ಟಿಯಲ್ಲಿ ಈ ಹೆಸರುಗಳಿರಲಿವೆ ಎಂದು ಮೂಲಗಳು ತಿಳಿಸಿವೆ. ಆದರೆ, ಇದೇ ಸಂದರ್ಭದಲ್ಲಿ ಸಚಿವ ಸಂಪುಟದಿಂದ ಹೊರಗುಳಿಯಲಿರುವವರ ಹೆಸರುಗಳೂ ಓಡಾಡುತ್ತಿದ್ದು, ಅದು ಹೊಸ ಬೆಳವಣಿಗೆಗಳಿಗೆ ಕಾರಣವಾಗಿದೆ.

ನೂತನ ಸಚಿವ ಸಂಪುಟದಿಂದ ಶಶಿಕಲಾ ಜೊಲ್ಲೆ, ಪ್ರಭು ಚೌಹಾಣ್, ಕೋಟ ಶ್ರೀನಿವಾಸ್ ಪೂಜಾರಿ, ಆನಂದ್ ಸಿಂಗ್, ಶ್ರೀಮಂತ್ ಪಾಟೀಲ್, ಆರ್. ಶಂಕರ್, ಸಿ.ಸಿ ಪಾಟೀಲ್ ಅವರ ಹೆಸರು ಇಲ್ಲ ಎನ್ನಲಾಗುತ್ತಿದೆ. ಗಮನಾರ್ಹ ಅಂಶವೆಂದರೆ ಈ ಹಿಂದೆ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಲಕ್ಷ್ಮಣ ಸವದಿ ಅವರ ಹೆಸರನ್ನೂ ಕೈ ಬಿಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಲಕ್ಷ್ಮಣ ಸವದಿ ಭಾರೀ ಕಸರತ್ತು ಶುರು ಮಾಡಿಕೊಂಡಿದ್ದು, ಮುಖ್ಯಮಂತ್ರಿಗಳ ಜತೆ ನಿನ್ನೆಯಿಡೀ ಸುತ್ತಾಡುವುದಲ್ಲದೆ ದೆಹಲಿಯಲ್ಲಿ ಲಾಬಿ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಸಚಿವ ಸಂಪುಟದ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಂದು ಸಂಸತ್‌ ಭವನದಲ್ಲಿ ಮತ್ತೊಮ್ಮೆ ಚರ್ಚೆ ಮಾಡಲಾಗುತ್ತದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಜತೆ ಮಾತುಕತೆ ನಡೆಸಲಾಗಿದೆ. ನಾವು ಹಲವಾರು ವಿಚಾರಗಳನ್ನ ನಡ್ಡಾಗೆ ತಿಳಿಸಿದ್ದೇವೆ. ಒಳ್ಳೆ ತೀರ್ಮಾನ ಮಾಡಲಾಗುತ್ತದೆ ಎಂದು ನಮಗೆ ವಿಶ್ವಾಸ ಇದೆ. ಇಂದು ಸಂಜೆ ಬಹುತೇಕ ಸಂಪುಟ ರಚನೆ ಬಗ್ಗೆ ನಿರ್ಧಾರವಾಗಲಿದ್ದು, ಒಂದು ಪಟ್ಟಿ ಬಗ್ಗೆ ನಮ್ಮ ಮತ್ತು ನಡ್ಡಾ ನಡುವೆ ಚರ್ಚೆಯಾಗಿದೆ. ಎರಡು ಮೂರು ಪಟ್ಟಿಗಳನ್ನ ಕೊಟ್ಟಿದ್ದೇವೆ. ವಲಸಿಗರು ಯಾರೂ ಇಲ್ಲ ಎಲ್ಲರು ನಮ್ಮವರೇ. ಅವರು ಈಗ ಇಲ್ಲೇ ನೆಲೆಸಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಯಾರು ಸಚಿವರಾಗುತ್ತಾರೆ, ಯಾರು ಡಿಸಿಎಂ ಆಗುತ್ತಾರೆ ಎಂದು ನಾಳೆ ಗೊತ್ತಾಗುತ್ತೆ; ವರಿಷ್ಠರ ತೀರ್ಮಾನ ಅಂತಿಮ: ಬಸವರಾಜ ಬೊಮ್ಮಾಯಿ 

Cabinet Expansion: ಎಲ್ಲಾ ಶಾಸಕರೂ ಸಚಿವರಾಗಲು ಸಾಧ್ಯವಿಲ್ಲ, ಪ್ರಾದೇಶಿಕವಾಗಿ ಸಂಪುಟ ರಚಿಸುತ್ತೇವೆ: ಸಿಎಂ ಬಸವರಾಜ ಬೊಮ್ಮಾಯಿ

(Karnataka Cabinet Expansion final list to be announced Tuesday evening here is the latest development details)

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!