AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Cabinet: ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ನಾಳೆಯೇ ಅಸ್ತಿತ್ವಕ್ಕೆ: 24 ಮಂದಿಗೆ ಅವಕಾಶ ಸಾಧ್ಯತೆ

ಕರ್ನಾಟಕ ರಾಜ್ಯ ಸಚಿವ ಸಂಪುಟದ ಪಟ್ಟಿ ಅಂತಿಮಗೊಂಡಿದ್ದು ಸಾಕಷ್ಟು ಹೊಸ ಮುಖಗಳು ಸ್ಥಾನಪಡೆದಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ನೂತನ ಸಚಿವರು ಬುಧವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Karnataka Cabinet: ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ನಾಳೆಯೇ ಅಸ್ತಿತ್ವಕ್ಕೆ: 24 ಮಂದಿಗೆ ಅವಕಾಶ ಸಾಧ್ಯತೆ
ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Aug 03, 2021 | 7:25 PM

Share

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ರಚನೆಗೆ ಮುಹೂರ್ತ ಕೊನೆಗೂ ನಿಗದಿಯಾಗಿದೆ. ಆಗಸ್ಟ್​ 4ರ (ಬುಧವಾರ) ನಾಳೆ ಸಂಜೆ 5 ಗಂಟೆಗೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಸಂಬಂಧ ಈಗಾಗಲೇ ಹೈಕಮಾಂಡ್​ನಿಂದ ಪಟ್ಟಿ ರವಾನೆಯಾಗಿದ್ದು, 24 ಶಾಸಕರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.

ಸಚಿವರ ಪಟ್ಟಿಯನ್ನು ಅಂತಿಮಗೊಳಿಸಿ, ಹಸ್ತಾಂತರವಾಗುವವರೆಗೆ ದೆಹಲಿಯಲ್ಲಿಯೇ ಇರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿ ಹೈಕಮಾಂಡ್​ ಸೂಚನೆ ನೀಡಿದೆ ಎಂದು ಬೊಮ್ಮಾಯಿ ಅವರ ಆಪ್ತರು ಟಿವಿ9ಗೆ ಮಾಹಿತಿ ನೀಡಿದ್ದಾರೆ.

ಕರ್ನಾಟಕ ರಾಜ್ಯದ ನೂತನ ಸಚಿವ ಸಂಪುಟದ ಪಟ್ಟಿ ಕೊನೆಗೂ ಅಂತಿಮಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಷ್ಟ್ರೀಯ ಘಟಕದ ನಾಯಕರು ಸುದೀರ್ಘ ಸಮಾಲೋಚನೆಯ ನಂತರ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ಯಡಿಯೂರಪ್ಪ ರಾಜೀನಾಮೆ ನೀಡಿದ ನಂತರದ ಬೆಳವಣಿಗೆಗಳಲ್ಲಿ ಶಿಗ್ಗಾಂವಿ ವಿಧಾನಸಭೆ ಕ್ಷೇತದ ಶಾಸಕ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಸ್ಥಾನಕ್ಕೆ ಏರಿದರು. ಆದರೆ ಸಚಿವ ಸಂಪುಟ ರಚನೆ ಕಗ್ಗಂಟಾಗಿಯೇ ಉಳಿದಿತ್ತು.

ಇದೀಗ ಬಿಜೆಪಿ ಹೈಕಮಾಂಡ್ ಸಂಪುಟ ರಚನೆಗೆ ಹಸಿರು ನಿಶಾನೆ ತೋರಿಸಿದ್ದು, ಶೀಘ್ರದಲ್ಲಿಯೇ ಸಂಪುಟ ಸಹೋದ್ಯೋಗಿಗಳು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ಪ್ರಮಾಣ ವಚನ ಸ್ವೀಕಾರ ಸಮಾರಂಭ ಆಗಸ್ಟ್ 4ರಂದು ನಡೆಯಲಿದೆ.

ಹಳಬರು ಮತ್ತು ಹೊಸಬರ ಹದವರಿದ ಮಿಶ್ರಣ ಈ ಸಂಪುಟದ ವೈಶಿಷ್ಟ್ಯ. ಕೆಲ ಹಳಬರು ಅಧಿಕಾರ ಕಳೆದುಕೊಂಡಿದ್ದರೂ, ಹೊಸಬರಿಗೆ ಅಧಿಕಾರ ಸಿಕ್ಕಿದೆ. ಜಾತಿ ಮತ್ತು ಪ್ರಾದೇಶಿಕ ಪ್ರಾತಿನಿಧ್ಯಕ್ಕೆ ಬಿಜೆಪಿ ಹೆಚ್ಚು ಗಮನ ನೀಡಿದೆ. ಇದರ ಜೊತೆಗೆ 2023ರ ಕರ್ನಾಟಕ ವಿಧಾನಸಭೆ ಮತ್ತು 2024ರ ಲೋಕಸಭೆ ಚುನಾವಣೆಗೆ ಪಕ್ಷವನ್ನು ಬಲಪಡಿಸುವ ಉದ್ದೇಶವನ್ನು ಹೊಸ ಸಂಪುಟ ರಚನೆಗೆ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ.

(Karnataka Cabinet Formation Ministers of Basavaraj Bommai Cabinet to take oath soon)

ಇದನ್ನೂ ಓದಿ: Cabinet Expansion: ಎಲ್ಲಾ ಶಾಸಕರೂ ಸಚಿವರಾಗಲು ಸಾಧ್ಯವಿಲ್ಲ, ಪ್ರಾದೇಶಿಕವಾಗಿ ಸಂಪುಟ ರಚಿಸುತ್ತೇವೆ: ಸಿಎಂ ಬಸವರಾಜ ಬೊಮ್ಮಾಯಿ

ಇದನ್ನೂ ಓದಿ: ದೇವೇಗೌಡರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಸಿಎಂ ಬಸವರಾಜ ಬೊಮ್ಮಾಯಿ, ದೇವೇಗೌಡರಿಂದ ನೂತನ ಸಿಎಂಗೆ ಸನ್ಮಾನ

Published On - 6:15 pm, Tue, 3 August 21

Follow Us
TV9 Web
TV9 Web

TV9 Kannada

Read More
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
Live: ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ
Live: ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ