Basavaraj Bommai: ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ 1,000 ಕೋಟಿ ರೂ. ವೆಚ್ಚದಲ್ಲಿ ಶಿಷ್ಯ ವೇತನ; ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

CM Basavaraj Bommai Press Conference: ರೈತರ ಮಕ್ಕಳು ಉನ್ನತ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ಪ್ರತಿವರ್ಷ 1,000 ಕೋಟಿ ರೂ. ವೆಚ್ಚದಲ್ಲಿ ಹೆಚ್ಚುವರಿ ಅನುದಾನ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

Basavaraj Bommai: ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ 1,000 ಕೋಟಿ ರೂ. ವೆಚ್ಚದಲ್ಲಿ ಶಿಷ್ಯ ವೇತನ; ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ
ಬಸವರಾಜ ಬೊಮ್ಮಾಯಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jul 28, 2021 | 2:13 PM

ಬೆಂಗಳೂರು: ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ (Basavaraj Bommai) ಇಂದು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿದ್ದಾರೆ. ರೈತರ ಮಕ್ಕಳಿಗೆ ಶಿಷ್ಯ ವೇತನ ನೀಡಲು ನಿರ್ಧರಿಸಲಾಗಿದೆ. ರೈತರ ಮಕ್ಕಳು ಉನ್ನತ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ಪ್ರತಿವರ್ಷ 1,000 ಕೋಟಿ ರೂ. ವೆಚ್ಚದಲ್ಲಿ ಹೆಚ್ಚುವರಿ ಅನುದಾನ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಎಲ್ಲ ಇಲಾಖೆಗಳಲ್ಲೂ ಅನಗತ್ಯ ಖರ್ಚು ಕಡಿಮೆ ಮಾಡಬೇಕೆಂದು ಸೂಚಿಸಿದ್ದೇನೆ. ಕನಿಷ್ಠ ಶೇ. 5ರಷ್ಟು ಅನಗತ್ಯ ಖರ್ಚು ಕಡಿಮೆ ಮಾಡಬೇಕು ಎಂದು ಇಂದಿನ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸರ್ಕಾರಿ ಉದ್ಯೋಗಿಗಳು ಏನು ಮಾಡಿದರೂ ನಡೆಯುತ್ತದೆ ಎಂಬ ಮನೋಭಾವಕ್ಕೆ ಇನ್ನು ಅವಕಾಶವಿಲ್ಲ. ಎಲ್ಲರೂ ಕಟ್ಟುನಿಟ್ಟಾಗಿ ಕೆಲಸ ಮಾಡಲೇಬೇಕು. ಎಲ್ಲ ಇಲಾಖೆಯ ಅಧಿಕಾರಿಗಳೂ ಆಯಾ ಇಲಾಖೆಗಳಿಗೆ ಸಂಬಂಧಿಸಿದ ಫೈಲ್​ಗಳನ್ನು ಕಳುಹಿಸುತ್ತಾರೆ. ಮುಂದಿನ 15 ದಿನಗಳೊಳಗೆ ಆ ಎಲ್ಲ ಫೈಲ್​ಗಳೂ ಕ್ಲಿಯರ್ ಆಗಬೇಕೆಂದು ಆದೇಶಿಸಿದ್ದೇನೆ ಎನ್ನುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಿ ಇಲಾಖೆಗಳ ಸಿಬ್ಬಂದಿಗೆ ಚುರುಕು ಮುಟ್ಟಿಸಲು ಮುಂದಾಗಿದ್ದಾರೆ.

ಹೊಸ ದಿಕ್ಸೂಚಿಯಿಂದ ಆಡಳಿತದಲ್ಲಿ ದಕ್ಷತೆ ತರುತ್ತೇವೆ. ಜನಸಾಮಾನ್ಯರಿಗೆ ಎಲ್ಲ ಕಾರ್ಯಕ್ರಮಗಳು ತಲುಪುತ್ತದೆ. ನಿಗದಿತ ಸಮಯದಲ್ಲಿ ಕಾರ್ಯಕ್ರಮ ತಲುಪುವಂತೆ ಕ್ರಮ ಕೈಗೊಳ್ಳುತ್ತೇವೆ. ಆರ್ಥಿಕವಾಗಿ ಸ್ಥಿತಿಗತಿ ಉತ್ತಮಗೊಳಿಸಲು ಕ್ರಮ ಕೈಗೊಳ್ಳುತ್ತೇವೆ. ಅನಗತ್ಯ ಖರ್ಚು ಕಡಿಮೆ ಮಾಡುವುದಕ್ಕೆ ಹೆಚ್ಚು ಆದ್ಯತೆ ನೀಡಲಾಗುವುದು. ಕೊರೊನಾ, ಪ್ರವಾಹ ನಿಯಂತ್ರಣಕ್ಕೆ ಹೆಚ್ಚು ಕೊರೋನಾ ಲಸಿಕೆ ನೀಡುವಿಕೆಗೆ ಹೆಚ್ಚು ಪ್ರಾಶಸ್ತ್ಯ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬಿ.ಎಸ್. ಯಡಿಯೂರಪ್ಪನವರ ರಾಜೀನಾಮೆಯ ಬಳಿಕ ಕರ್ನಾಟಕದ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಸಾಕಷ್ಟು ಚರ್ಚೆಗಳು ಎದ್ದಿದ್ದವು. ಈ ಬಾರಿ ಬ್ರಾಹ್ಮಣ ಸಮುದಾಯದ ಅಭ್ಯರ್ಥಿಯನ್ನು ಮುಖ್ಯಮಂತ್ರಿಯಾಗಿ ಘೋಷಣೆ ಮಾಡಲಾಗುತ್ತದೆ ಎನ್ನಲಾಗಿತ್ತು. ಈ ಹಿನ್ನೆಲೆಯಲ್ಲಿ ಬಿ.ಎಲ್. ಸಂತೋಷ್, ಪ್ರಹ್ಲಾದ್ ಜೋಷಿ ಹೆಸರು ಮುನ್ನಲೆಗೆ ಬಂದಿತ್ತು. ಒಕ್ಕಲಿಗ ನಾಯಕರಾದ ಸಿ.ಟಿ. ರವಿ, ಆರ್. ಅಶೋಕ್, ಅಶ್ವಥ್ ನಾರಾಯಣ ಅವರ ಹೆಸರುಗಳೂ ಚರ್ಚೆಯಾಗಿದ್ದವು. ಆದರೆ, ಯಡಿಯೂರಪ್ಪನವರ ರಾಜೀನಾಮೆಯಿಂದ ಅಸಮಾಧಾನಗೊಂಡ ಲಿಂಗಾಯತ ಸಮುದಾಯವನ್ನು ಓಲೈಸಲು ಲಿಂಗಾಯತರನ್ನೇ ಮುಖ್ಯಮಂತ್ರಿ ಮಾಡಲಾಗಿದ್ದು, ಯಡಿಯೂರಪ್ಪನವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಬಸವರಾಜ ಬೊಮ್ಮಾಯಿ ಕೊನೆಗೂ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಇದನ್ನೂ ಓದಿ: Basavaraj Bommai Oath Taking: ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ, ದೇವಸ್ಥಾನ ದರ್ಶನ ಬಳಿಕ ಬಿಎಸ್​ವೈ ಭೇಟಿ

(Karnataka CM Basavaraj Bommai Announced 1000 Crore Rupees Scholarship for Farmers Children in Press Conference)

Published On - 2:04 pm, Wed, 28 July 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್