ಸಂಪುಟ ವಿಸ್ತರಣೆ ಸುಳಿವು ಕೊಟ್ಟ ಬೊಮ್ಮಾಯಿ: ಸಚಿವಾಕಾಂಕ್ಷಿಗಳಲ್ಲಿ ಚಿಗುರಿದ ಕುರ್ಚಿ ಕನಸು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟದ ಸುಳಿವು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವಾಕಾಂಕ್ಷಿಗಳಲ್ಲಿ ಮತ್ತೆ ಸಂಪುಟ ಸೇರುವ ನಿರೀಕ್ಷೆ ಗರಿಗೆದರಿದೆ.

ಸಂಪುಟ ವಿಸ್ತರಣೆ ಸುಳಿವು ಕೊಟ್ಟ ಬೊಮ್ಮಾಯಿ:  ಸಚಿವಾಕಾಂಕ್ಷಿಗಳಲ್ಲಿ ಚಿಗುರಿದ ಕುರ್ಚಿ ಕನಸು
ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳು
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Oct 15, 2022 | 5:05 PM

ಬೆಳಗಾವಿ: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಸಮೀಪಿಸುತ್ತಿದ್ದಂತೆಯೇ ರಾಜ್ಯ ಬಿಜೆಪಿಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಈಗಾಗಲೇ ಬಿಜೆಪಿ ಜನಸಂಕಲ್ಪ ಯಾತ್ರೆ ಆರಂಭಿಸಿದೆ. ಇದರ ಮಧ್ಯೆ ಚುನಾವಣಾ ವರ್ಷದಲ್ಲಿ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಪುಟ ವಿಸ್ತರಣೆಗೆ (Cabinet Expansion)  ಕೈ ಹಾಕಿದ್ದಾರೆ.

ಹೌದು….ಬೆಳಗಾವಿಯಲ್ಲಿ ಇಂದು(ಅ.15) ಮಾಧ್ಯಮಗಳೊಂದಿಗೆ ಮಾತನಾಡುವ ವೇಳೆ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸುಳಿವು ನೀಡಿದ್ದಾರೆ. ಇದರೊಂದಿಗೆ  ಸಚಿವಾಕಾಂಕ್ಷಿಗಳ ಕುರ್ಚಿ ಕನಸು ಚಿಗುರೊಡೆದಿದೆ.

ಬೆಂಗಳೂರಿಗೆ ಬರುವಂತೆ ಕಾಂಗ್ರೆಸ್​ ಶಾಸಕರಿಗೆ, ಪರಿಷತ್ ಸದಸ್ಯರಿಗೆ ಸೂಚಿಸಿದ ಸಿದ್ದರಾಮಯ್ಯ, ಏನು ವಿಶೇಷ?

ಸಚಿವಾಕಾಂಕ್ಷಿಗಳಿಗೆ ಶೀಘ್ರದಲ್ಲೇ ಶುಭ ಸುದ್ದಿ ಸಿಗಲಿದೆ, ಶೀಘ್ರದಲ್ಲೇ ದೆಹಲಿಗೆ ಹೋಗುತ್ತೇನೆ  ಜನಸಂಕಲ್ಪ ಯಾತ್ರೆ ನಡುವೆಯೇ ನವದೆಹಲಿಗೆ ತೆರಳಿ ಹೈಕಮಾಂಡ್ ನಾಯಕ ಜೊತೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡುತ್ತೇನೆ. ಬಳಿಕ ವರಿಷ್ಠರ ಸಲಹೆಯಂತೆ ಆದಷ್ಟು ಬೇಗ ಸಂಪುಟ ವಿಸ್ತರಣೆಯ ಕೆಲಸ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ಬೊಮ್ಮಾಯಿ ಅವರ ಸಂಪುಟ ವಿಸ್ತರಣೆ ಸುಳಿವು ರಾಜ್ಯ ಬಿಜೆಪಿಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗೆ ಕಾರಣವಾಗಿದ್ದು,  ಸಚಿವಾಕಾಂಕ್ಷಿಗಳಲ್ಲಿ ಸಂಪುಟ ಸೇರುವ ನಿರೀಕ್ಷೆ ಗರಿಗೆದರಿದೆ.

ಈಗಿರುವ ಖಾಲಿ ಸ್ಥಾನಗಳನ್ನು ತುಂಬಲಿದ್ದಾರೋ ಅಥವಾ ಕೆಲವರಿಗೆ ಕೊಕ್ ಕೊಟ್ಟು ಹೊಸಬರಿಗೆ ಅವಕಾಶ ಮಾಡಿಕೊಡುತ್ತಾರೋ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ. ಚುನಾವಣೆ ದೃಷ್ಟಿಯಿಂದ ಒಂದು ವೇಳೆ ಕೆಲವರನ್ನು ಮಂತ್ರಿ ಸ್ಥಾನದಿಂದ ಡ್ರಾಪ್ ಮಾಡಿ ಹೊಸ ಮುಖಗಳಿಗೆ ಮಣೆ ಹಾಕಬಹುದು. ಇಲ್ಲ ದಿವಂಗತ ಉಮೇಶ್ ಕತ್ತಿ ಸ್ಥಾನ ಸೇರಿದಂತೆ ಇನ್ನುಳಿದು ನಾಲ್ಕೈದು ಮಂತ್ರಿ ಪೋಸ್ಟ್​​ಗಳನ್ನು ಹಂಚಿಕೆ ಮಾಡಬಹುದು ಅಷ್ಟೇ. ಆದ್ರೆ, ಸಚಿವಾಕಾಂಕ್ಷಿಗಳ ಪಟ್ಟಿ ನೋಡಿದರೆ ಹನುಮಂತನ ಬಾಲದಂತೆ ಇದೆ.

ಸಿಡಿ ಪ್ರಕರಣದಲ್ಲಿ ಮಂತ್ರಿ ಸ್ಥಾನ ಕಳೆದುಕೊಂಡಿರುವ ರಮೇಶ್ ಜಾರಕಿಹೊಳಿ ಹಾಗೂ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್​ ಕೆ.ಎಸ್.ಈಶ್ವರಪ್ಪ ಅವರ ಮಿನಿಸ್ಟರ್ ಪದವಿ ಬಲಿಪಡೆದುಕೊಂಡಿತ್ತು. ಇದೀಗ ಜಾರಕಿಹೊಳಿ ಮತ್ತು ಈಶ್ವರಪ್ಪಗೆ ಕೇಸ್​ಗಳಲ್ಲಿ ಕ್ಲಿನ್ ಚೀಟ್ ಸಿಕ್ಕಿದೆ. ಇದರಿಂದ ಮತ್ತೆ ಬೊಮ್ಮಾಯಿ ಸಂಪುಟ ಸೇರುವ ತವಕದಲ್ಲಿದ್ದಾರೆ.

ರಮೇಶ್ ಜಾರಕಿಹೊಳಿ ಹಾಗೂ ಈಶ್ವರಪ್ಪ ಮರಳಿ ತಮ್ಮ ಹಳೆ ಖಾತೆ ಪಡೆಯಲು ಸರ್ಕಸ್ ನಡೆಸುತ್ತಿದ್ರೆ. ಇನ್ನುಳಿದವುಗಳಿಗೆ ಶಾಸಕರಲ್ಲಿ ಬಿಗ್ ಪೈಪೋಟಿ ಇದೆ. ಬಿಎಸ್​ ಯಡಿಯೂರಪ್ಪನವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ, ಸುರಪುರ ಶಾಸಕ ರಾಜುಗೌಡ ಈ ಬಾರಿ ಸಚಿವ ಸ್ಥಾನ ಬೇಕೆಂದು ಪಟ್ಟು ಹಿಡಿದಿದ್ದಾರೆ. ಅಲ್ಲದೇ ಯಡಿಯೂರಪ್ಪನವರ ಮೂಲಕ ಒತ್ತಡ ಹಾಕಿಸುತ್ತಿದ್ದಾರೆ. ಇನ್ನುಳಿದಂತೆ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಇನ್ನುಳಿದು ಹಿರಿಯ ಶಾಸಕರೂ ಸಹ ಸಚಿವಾಕಾಂಕ್ಷಿಗಳಾಗಿದ್ದಾರೆ.

ಒಟ್ಟಿನಲ್ಲಿ ವಿಧಾನಸಭೆ ಚುನಾವಣೆ ಸಮೀಪಿ ಇರುವಾಗಲೇ ಬೊಮ್ಮಾಯಿ ಅವರು ಸಂಪುಟ ವಿಸ್ತರಣೆಗೆ ಕೈಹಾಕಿದ್ದು, ಮುಂದೆ ಇದು ಯಾವ ಹಂತಕ್ಕೆ ಹೋಗಿ ನಿಲ್ಲುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

Published On - 4:49 pm, Sat, 15 October 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ