ದಿಢೀರ್ ದೆಹಲಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ; ಜೆಪಿ ನಡ್ಡಾ ಭೇಟಿ ನಂತರ ಸಚಿವರ ಪಟ್ಟಿ ಅಂತಿಮ
Basavaraj Bommai: ಜಾತಿವಾರು ಪ್ರಾತಿನಿಧ್ಯ, ಭೌಗೋಳಿಕ ಪ್ರಾತಿನಿಧ್ಯ ಹಾಗೂ ಇತರ ಪಕ್ಷಗಳಿಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿ, ಭಾರತೀಯ ಜನತಾ ಪಾರ್ಟಿ ಅಧಿಕಾರ ಪಡೆಯಲು ಕಾರಣರಾದ ಶಾಸಕರು ಎಂಬ ಈ ಮೂರು ನೆಲೆಯಲ್ಲಿ ಸಚಿವರ ಪಟ್ಟಿ ಅಂತಿಮಗೊಳಿಸುವ ಬಗ್ಗೆ ಬಲ್ಲಮೂಲಗಳ ಮಾಹಿತಿ ತಿಳಿದುಬಂದಿದೆ.
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಿಢೀರ್ ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್‌ನಿಂದ ಬುಲಾವ್ ಹಿನ್ನೆಲೆಯಲ್ಲಿ ಸಿಎಂ ಇಂದು (ಆಗಸ್ಟ್ 1) ಸಂಜೆ 5.40ರ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿಯಾಗಿ ಕರ್ನಾಟಕ ಸಚಿವ ಸಂಪುಟ ಅಂತಿಮಗೊಳಿಸುತ್ತೇವೆ ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ಸಿಎಂ ಬೊಮ್ಮಾಯಿ ನೂತನ ಸಚಿವರ ಪಟ್ಟಿ ಕೈಯಲ್ಲಿ ಹಿಡಿದೇ ತೆರಳಿದ್ದಾರೆ. ವರಿಷ್ಠರಿಂದ ಒಪ್ಪಿಗೆ ಪಡೆದು ನಾಳೆಯೇ ಸಿಎಂ ವಾಪಸ್ ಆಗಲಿದ್ದಾರೆ. ಮಂಗಳವಾರ ಅಥವಾ ಬುಧವಾರ ಸಂಪುಟ ರಚನೆ ಸಾಧ್ಯತೆ ಎಂಬ ಬಗ್ಗೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಒಂದೆಡೆ, ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿಯನ್ನು ಬಸವರಾಜ ಬೊಮ್ಮಾಯಿ ಸಿದ್ಧಪಡಿಸಿದ್ದಾರೆ. ಮತ್ತೊಂದೆಡೆ, ಪಕ್ಷದ ವತಿಯಿಂದ ಸಚಿವ ಸ್ಥಾನಕ್ಕೆ ಅರ್ಹ ಶಾಸಕರ ಪಟ್ಟಿ ಸಿದ್ಧವಾಗಿದೆ ಎಂಬ ಕುರಿತು ಮಾಹಿತಿ ಲಭ್ಯವಾಗಿದೆ.
ಜಾತಿವಾರು ಪ್ರಾತಿನಿಧ್ಯ, ಭೌಗೋಳಿಕ ಪ್ರಾತಿನಿಧ್ಯ ಹಾಗೂ ಇತರ ಪಕ್ಷಗಳಿಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿ, ಭಾರತೀಯ ಜನತಾ ಪಾರ್ಟಿ ಅಧಿಕಾರ ಪಡೆಯಲು ಕಾರಣರಾದ ಶಾಸಕರು ಎಂಬ ಈ ಮೂರು ನೆಲೆಯಲ್ಲಿ ಸಚಿವರ ಪಟ್ಟಿ ಅಂತಿಮಗೊಳಿಸುವ ಬಗ್ಗೆ ಬಲ್ಲಮೂಲಗಳ ಮಾಹಿತಿ ತಿಳಿದುಬಂದಿದೆ. ಮುಂದಿನ ಶನಿವಾರದ ಒಳಗೆ ಸಂಪೂರ್ಣ ಸಚಿವ ಸಂಪುಟ ರಚನೆ ಆಗಲಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ಇನ್ನೂ ಮುಗಿಯದ ಸಂಪುಟ ರಚನೆ ಕಸರತ್ತು, ಬಿ.ಎಸ್. ಯಡಿಯೂರಪ್ಪ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ಚರ್ಚೆ
ದೇವೇಗೌಡರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಸಿಎಂ ಬಸವರಾಜ ಬೊಮ್ಮಾಯಿ, ದೇವೇಗೌಡರಿಂದ ನೂತನ ಸಿಎಂಗೆ ಸನ್ಮಾನ
(Karnataka CM Basavaraj Bommai travelling to Delhi to meet JP Nadda finalize Karnataka Cabinet Ministers)
Published On - 5:32 pm, Sun, 1 August 21