Karnataka Cabinet: ಕರ್ನಾಟಕದ ನೂತನ ಸಚಿವರ ಪಟ್ಟಿ ಇಲ್ಲಿದೆ
ಸಿಎಂ ಸಿದ್ದರಾಮಯ್ಯ ಅವರ ಸಚಿವ ಸಂಪುಟದ ನೂತನ ಸಚಿವರ ಪಟ್ಟಿ ಟಿವಿ9ಗೆ ಲಭ್ಯವಾಗಿದೆ. ಕೆಲವರಿಗೆ ಸಚಿವ ಸ್ಥಾನ ಕೈತಪ್ಪಿದ್ದು, ಇನ್ನು ಕೆಲವರಿಗೆ ಸಚಿವ ಸ್ಥಾನ ಸಿಕ್ಕಿದೆ. ಯಾರಿಗೆಲ್ಲ ಮಂತ್ರಿಗಿರಿ ಸಿಕ್ಕಿದೆ ಗೊತ್ತಾ?
ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಅವರ ಸಚಿವ ಸಂಪುಟ ರಚನೆಗೆ ದೆಹಲಿಯ ಕಾಂಗ್ರೆಸ್ ವಾರ್ ರೂಮ್ನಲ್ಲಿ ಭಾರೀ ಕಸರತ್ತು ನಡೆದಿತ್ತು. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ (DK Shivakumar) ನಡುವೆ ಒಮ್ಮತದ ನಿರ್ಧಾರ ಬಾರದ ಹಿನ್ನೆಲೆ ಸಚಿವ ಸಂಪುಟ ರಚನೆ ಹೈಕಮಾಂಡ್ಗೆ ತಲೆನೋವಾಗಿ ಪರಿಣಮಿಸಿತ್ತು. ಸದ್ಯ, ನೂತನ ಸಚಿವರ (Cabinet Ministers) ಪ್ರಮಾಣವಚನ ಮೇ 28ರಂದು ನಡೆಯಲಿದ್ದು, ಸಚಿವರ ಪಟ್ಟಿಯೂ ಅಂತಿಮಗೊಂಡಿದೆ. ಅಧೃಕೃತ ಘೋಷಣೆಯೊಂದೇ ಬಾಕಿ ಇದೆ. ಈ ನಡುವೆ ನೂತನ ಸಚಿವರ ಪಟ್ಟಿ ಟಿವಿ9ಗೆ ಲಭ್ಯವಾಗಿದೆ. ಕೆಲವರಿಗೆ ಸಚಿವ ಸ್ಥಾನ ಕೈತಪ್ಪಿದ್ದು, ಇನ್ನು ಕೆಲವರಿಗೆ ಸಚಿವ ಸ್ಥಾನ ಸಿಕ್ಕಿದೆ.
ಹೆಚ್.ಕೆ.ಪಾಟೀಲ್, ಮಂಕಾಳ ವೈದ್ಯ, ಶಿವಾನಂದ ಪಾಟೀಲ್, ಭೈರತಿ ಸುರೇಶ್, ಕೃಷ್ಣ ಭೈರೇಗೌಡ, ಡಾ.ಶರಣಪ್ರಕಾಶ್ ಪಾಟೀಲ್, ಶರಣಬಸಪ್ಪ ದರ್ಶನಾಪುರ, ರಹೀಂ ಖಾನ್, ಈಶ್ವರ್ ಖಂಡ್ರೆ, ಲಕ್ಷ್ಮೀ ಹೆಬ್ಬಾಳ್ಕರ್, ಲಕ್ಷ್ಮಣ ಸವದಿ, ಕೆ.ವೆಂಕಟೇಶ್, ಮಧು ಬಂಗಾರಪ್ಪ, ಸಂತೋಷ್ ಲಾಡ್, ವಿನಯ್ ಕುಲಕರ್ಣಿ, ವಿಧಾನಪರಿಷತ್ ಸದಸ್ಯ ಎನ್.ಎಸ್.ಬೋಸರಾಜು ಅವರಿಗೆ ಸಚಿವ ಸ್ಥಾನ ಒಲಿದುಬಂದಿದೆ. ಇನ್ನು, ವಿಧಾನಸಭೆ ಉಪಸಭಾಪತಿ ಸ್ಥಾನ ಚಿಂತಾಮಣಿ ಶಾಸಕ ಎಂ.ಸಿ.ಸುಧಾಕರ್ ಅವರಿಗೆ ಸಚಿವ ಸ್ಥಾನ ಒಲಿದು ಬಂದಿದೆ.
ದೇಶಪಾಂಡೆ, ಹರಿಪ್ರಸಾದ್ಗಿಲ್ಲ ಸಚಿವ ಸ್ಥಾನ
ಹಿರಿಯ ಶಾಸಕರಾದ ಆರ್‌ವಿ ದೇಶಪಾಂಡೆ ಹಾಗೂ ಬಿಕೆ ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದೆ. ಬಿ.ಕೆ.ಹರಿಪ್ರಸಾದ್ ಬದಲು ಎಂಎಲ್‌ಸಿ ಬೋಸರಾಜು ಅವರಿಗೆ ಸಚಿವ ಸ್ಥಾನ ಒಲಿದುಬಂದಿದೆ. ಹಿರಿಯರ ಸಂಪುಟ ಸೇರ್ಪಡೆ ವಿಚಾರದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಒಮ್ಮತ ಮೂಡಿಬಂದಿಲ್ಲ.
ಆರ್.ವಿ.ದೇಶಪಾಂಡೆ ಸೇರಿ ಹಲವು ಹಿರಿಯರ ಸೇರ್ಪಡೆಗೆ ಡಿಕೆ ಶಿವಕುಮಾರ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಮಧು ಬಂಗಾರಪ್ಪ, ಬಿ.ಕೆ.ಹರಿಪ್ರಸಾದ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಆದರೆ ಒಂದೇ ಸಮುದಾಯದ ಮಧು, ಹರಿಪ್ರಸಾದ್ ಸೇರ್ಪಡೆಗೆ ಸಿದ್ದರಾಮಯ್ಯ ಅವರು ಅಸಮ್ಮತಿ ಸೂಚಿಸಿದ್ದಾರೆ. ಸದ್ಯ ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ಒಲಿದುಬಂದಿದ್ದು, ಹರಿಪ್ರಸಾದ್ ಅವರಿಗೆ ಮಂತ್ರಿ ಸ್ಥಾನ ಕೈತಪ್ಪಿದೆ.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:18 pm, Thu, 25 May 23