Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಗೃಹ ಅಮಿತ್​ ಶಾ ಭೇಟಿಯಾಗಿ ಒಂದು ಪ್ರಮುಖ ಬೇಡಿಕೆ ಇಟ್ಟ ಸಿದ್ದರಾಮಯ್ಯ: ಏನದು?

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದು, ಈ ವೇಳೆ ಪ್ರಮುಖ ಒಂದು ಬೇಡಿಕೆ ಇಟ್ಟಿದ್ದಾರೆ.

ಕೇಂದ್ರ ಗೃಹ ಅಮಿತ್​ ಶಾ ಭೇಟಿಯಾಗಿ ಒಂದು ಪ್ರಮುಖ ಬೇಡಿಕೆ ಇಟ್ಟ ಸಿದ್ದರಾಮಯ್ಯ: ಏನದು?
ಅಮಿತ್​ ಶಾ ಭೇಟಿಯಾದ ಸಿದ್ದರಾಮಯ್ಯ
Follow us
ರಮೇಶ್ ಬಿ. ಜವಳಗೇರಾ
|

Updated on: Jun 22, 2023 | 9:51 AM

ನವದೆಹಲಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಕ್ಕಿ ಖರೀದಿ ವಿಚಾರವಾಗಿ ರಾಜ್ಯ ಸರ್ಕಾರ ಮತ್ತು ಬಿಜೆಪಿ ನಾಯಕರ ಮಧ್ಯೆ ವಾಕ್ಸಮರ ಮುಂದುವರಿದಿದ್ದು, ಇದರ ಮಧ್ಯೆ ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಿಎಂ ಸಿದ್ಧರಾಮಯ್ಯ ಭೇಟಿ ಮಾಡಿದ್ದಾರೆ. ಇನ್ನು ಅಮಿತ್ ಶಾ ಭೇಟಿ ಬಗ್ಗೆ ದೆಹಲಿಯ ಕರ್ನಾಟಕ ಭವನದಲ್ಲಿ ಇಂದು(ಜೂನ್ 22) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ರಾಜ್ಯಕ್ಕೆ ಅಕ್ಕಿ ಪೂರೈಸುವ ಬಗ್ಗೆ ಅಮಿತ್ ಶಾ ಜತೆ ಚರ್ಚಿಸಿದ್ದೇನೆ. ಮೊದಲು FCI ರಾಜ್ಯಕ್ಕೆ ಅಕ್ಕಿ ಪೂರೈಕೆ ಮಾಡುವುದಾಗಿ ಹೇಳಿತ್ತು. ಆ ನಂತರ ರಾಜ್ಯಕ್ಕೆ ಅಕ್ಕಿ ಪೂರೈಸಲು ಆಗಲ್ಲ ಎಂದು ಹೇಳಿದ್ದಾರೆ. ದ್ವೇಷ ರಾಜಕೀಯ ಮಾಡುವುದು ಬೇಡ ಎಂದು ಹೇಳಿದ್ದೇನೆ. ಅಮಿತ್ ಶಾ ಕೂಡ ಈ ಬಗ್ಗೆ ಚರ್ಚಿಸುವುದಾಗಿ ಹೇಳಿದ್ದಾರೆ ಎಂದು ತಿಳಿಸಿದರು. ಅಲ್ಲದೇ ಇನ್ನೂ IRB ಎರಡು ಬೆಟಾಲಿಯಾನ್ ಕೊಡುವಂತೆ ಬೇಡಿಕೆ ಅಮಿತ್​ ಶಾ ಮುಂದೆ ಇಟ್ಟಿದ್ದಾರೆ.

ಇದನ್ನೂ ಓದಿ: ನಿರೀಕ್ಷೆಗೂ ಮೀರಿ ಗೆಲುವು ಸಾಧಿಸಿದ್ದೀರಿ; ಸಿಎಂ ಸಿದ್ದರಾಮಯ್ಯ ಬಗ್ಗೆ ಅಮಿತ್ ಶಾ ಮೆಚ್ಚುಗೆ ಮಾತು

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿದೆ, ಏನೂ ಸಮಸ್ಯೆ ಇಲ್ಲ. ಅಕ್ಕಿ ಖರೀದಿ ಬಗ್ಗೆ ಕೆಲವು ರಾಜ್ಯಗಳ ಜತೆ ಚರ್ಚೆ ಮಾಡಿದ್ದೇವೆ. ಕೆಲವು ಕಡೆ ಅಕ್ಕಿ ಸಿಗುತ್ತೆ, ಆದರೆ ಸಾರಿಗೆ ವೆಚ್ಚ ಹೆಚ್ಚಾಗಲಿದೆ. ರಾಜ್ಯಕ್ಕೆ ಅಕ್ಕಿ ನೀಡುವ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಮಾತಾಡಿದ್ದೇನೆ. ರಾಜ್ಯದಲ್ಲಿ ಆಗಿರುವ ಸಮಸ್ಯೆ ಬಗ್ಗೆ ಅವರ ಗಮನಕ್ಕೆ ತಂದಿದ್ದೇನೆ. FCI ನವರು ಮೊದಲು ಅಕ್ಕಿ ಕೊಡುತ್ತೇನೆ ಅಂತ ಹೇಳಿದ್ರು. ಆಮೇಲೆ ಅವರು ಹೇಳಿದಂತೆ ಅಕ್ಕಿ ಕೊಟ್ಟಿಲ್ಲ, ಮತ್ತೆ ಕೊಡುವುದಕ್ಕೆ ಆಗಲ್ಲ ಎಂದು ಹೇಳಿದ್ದಾರೆ ಎಂದು ವಿವರಣೆಯನ್ನ ಅಮಿತ್ ಶಾಗೆ ನೀಡಿದ್ದೇನೆ.

ರಾಜ್ಯದ ಕಾನೂನು ಸುವ್ಯವಸ್ಥೆಯಲ್ಲಿ ಏನೂ ಸಮಸ್ಯೆಗಳು ಇಲ್ಲ.IRB ಎರಡು ಬೆಟಾಲಿಯಾನ್ ಇದೆ, ಇನ್ನು ಎರಡು ಕೊಡಿ ಎಂದು ಕೇಳಿದ್ದೇವೆ ಅಷ್ಟೇ. ಕೆಲವು ರಾಜ್ಯಗಳಲ್ಲಿ ಅಕ್ಕಿ ಕೊಡುವ ಬಗ್ಗೆ ಮಾತನಾಡಿದ್ದೇವೆ. ಬೇರೆ ಬೇರೆ ರಾಜ್ಯಗಳ ಜೊತೆ ಮಾತುಕತೆ ಮಾಡಿದ್ದೇವೆ. ಕೆಲವು ಕಡೆ ಇದೆ. ಆದ್ರೆ ಸಾರಿಗೆ ವೆಚ್ಚ ಹೆಚ್ಚಾಗಲಿದೆ ಎಂದು ವಿವರಿಸಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ