ಅಕ್ಕಿ ರಾಜಕೀಯ ಜಟಾಪಟಿ ನಡುವೆ ಖುದ್ದು ಪ್ರಧಾನಿ ಮೋದಿ ಭೇಟಿಗೆ ಮುಂದಾದ ಸಿದ್ದರಾಮಯ್ಯ

ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ರಾಷ್ಟ್ರಪತಿ ದ್ರೌಪತಿ ಮುರ್ಮು ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಸಮಯಾವಕಾಶ ಕೋರಿದ್ದಾರೆ. ಒಂದು ವೇಳೆ ಭೇಟಿ ಅವಕಾಶ ಸಿಕ್ಕರೆ ರಾಜ್ಯದ ಕೆಲ ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.

ಅಕ್ಕಿ ರಾಜಕೀಯ ಜಟಾಪಟಿ ನಡುವೆ ಖುದ್ದು ಪ್ರಧಾನಿ ಮೋದಿ ಭೇಟಿಗೆ ಮುಂದಾದ ಸಿದ್ದರಾಮಯ್ಯ
ಸಿದ್ದರಾಮಯ್ಯ, ನರೇಂದ್ರ ಮೋದಿ
Follow us
|

Updated on: Jun 15, 2023 | 3:44 PM

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರ ಕನಸಿನ ಯೋಜನೆ ಅನ್ನಭಾಗ್ಯಕ್ಕೆ(Anna Bhagya scheme) ಇದೀಗ ಅಕ್ಕಿ ಕೊರತೆ ಎದುರಾಗಿದೆ. ಅಕ್ಕಿ(Rice) ಪೂರೈಕೆ ಮಾಡದಂತೆ ಕೇಂದ್ರ ಸರ್ಕಾರ ಷಡ್ಯಂತ್ರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದು, ಇದಕ್ಕೆ ಬಿಜೆಪಿ ನಾಯಕರು ಸಹ ಗರಂ ಆಗಿದ್ದಾರೆ. ಹೀಗಾಗಿ ರಾಜ್ಯ ರಾಜಕಾರಣದಲ್ಲಿ ಅಕ್ಕಿ ಪಾಲಿಟಿಕ್ಸ್ ಜೋರಾಗಿದ್ದು, ಇದರ ನಡುವೆ ಖುದ್ದು ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು(Narendra Modi) ಭೇಟಿ ಮಾಡಲು ಮುಂದಾಗಿದ್ದಾರೆ.

ಇದನ್ನೂ ಓದಿ: ಅನ್ನಭಾಗ್ಯ ಯೋಜನೆಗೆ ಕೇಂದ್ರ ಅಕ್ಕಿ ನೀಡುತ್ತಿಲ್ಲ ಎನ್ನುವ ಸಿದ್ದರಾಮಯ್ಯ ಆರೋಪಕ್ಕೆ ಬೊಮ್ಮಾಯಿ ತಿರುಗೇಟು: ಪ್ರತಿಭಟನೆ ಎಚ್ಚರಿಕೆ

ಹೈಕಮಾಂಡ್‌ ಭೇಟಿಗಾಗಿ ಜೂ.21 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಲಿದ್ದಾರೆ. ಇದೇ ವೇಳೆ ಭೇಟಿಗೆ ಅವಕಾಶ ಸಿಕ್ಕರೆ ಪ್ರಧಾನಮಂತ್ರಿ ಹಾಗೂ ರಾಷ್ಟ್ರಪತಿಗಳನ್ನೂ ಭೇಟಿಯಾಗಿ ಬರಲಿದ್ದಾರೆ. ಸೌಜನ್ಯ ಭೇಟಿ ವೇಳೆ ರಾಜ್ಯದ ವಿಚಾರಗಳ ಬಗ್ಗೆಯೂ ಪ್ರಸ್ತಾಪಿಸುವ ಸಾಧ್ಯತೆಯಿದೆ. ಅದರಲ್ಲೂ ಮುಖ್ಯವಾಗಿ ಅನ್ನಭಾಗ್ಯಕ್ಕೆ ನೀಡುವ ಅಕ್ಕಿ ಬಗ್ಗೆ ಚರ್ಚೆ ನಡೆಸಲಿದ್ದು, ರಾಜ್ಯ ಹೆಚ್ಚಿನ ಪ್ರಮಾಣದಲ್ಲಿ ಅಕ್ಕಿ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.  ಆದ್ರೆ,  ಇನ್ನು ಈವರೆಗೂ ಪ್ರಧಾನಮಂತ್ರಿ ಹಾಗೂ ರಾಷ್ಟ್ರಪತಿಗಳ ಕಚೇರಿಯಿಂದ ಅಧಿಕೃತ ಭೇಟಿ ಬಗ್ಗೆ ಸಮಯವಕಾಶದ ಬಗ್ಗೆ ಮಾಹಿತಿ ಬಂದಿಲ್ಲ. ಅವಕಾಶ ದೊರೆತ ತಕ್ಷಣ ಭೇಟಿ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

ಅನ್ನಭಾಗ್ಯ ಯೋಜನೆ ಜಾರಿಗಾಗಿ ತಿಂಗಳಿಗೆ 2 ಲಕ್ಷದ 28 ಸಾವಿರ ಮೆಟ್ರಿಕ್​ ಟನ್ ಹೆಚ್ಚುವರಿ​ ಅಕ್ಕಿ ಬೇಕು. ಹೆಚ್ಚುವರಿ ಅಕ್ಕಿ ಪಡೆಯಲು ರಾಜ್ಯ ಸರ್ಕಾರ ಕೇಂದ್ರದ ಮೊರೆ ಹೋಗಿತ್ತು. ಜೂನ್‌ 12 ರಂದು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದ ಎಫ್‌ಸಿಐ ಹೆಚ್ಚುವರಿ ಅಕ್ಕಿ ಕೊಡುವುದಾಗಿ ಹೇಳಿತ್ತಂತೆ. ಆದ್ರೆ ಈಗ ಉಲ್ಟಾ ಹೊಡೆಯುತ್ತಿದೆ ಅಕ್ಕಿ ಪೂರೈಕೆ ಮಾಡದಂತೆ ಕೇಂದ್ರ ಸರ್ಕಾರ ಷಡ್ಯಂತ್ರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಇದಕ್ಕೆ ಬಿಜೆಪಿ ನಾಯಕರು ಸಹ ಗರಂ ಆಗಿದ್ದು, ಸಿದ್ದರಾಮಯ್ಯನವರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ಈ ಅಕ್ಕಿ ಗಲಾಟೆ ನಡುವೆ ಖುದ್ದು ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಹೆಚ್ಚುವರಿ ಅಕ್ಕಿ ನೀಡುವಂತೆ ಮನವಿ ಮಾಡಲಿದ್ದಾರೆ. ಇದಕ್ಕೆ ನರೇಂದ್ರ ಮೋದಿ ಅವರು ಏನು ಹೇಳಲಿದ್ದಾರೆ ಎನ್ನುವುದು ಕುತೂಃಲ ಮೂಡಿಸಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!