Siddaramaiah Meet PM Modi: ಇಂದು ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿದ್ದರಾಮಯ್ಯ, ಭೇಟಿ ಹಿಂದಿನ ಕಾರಣವೇನು?

Karnataka CM Siddaramaiah to Meet PM Modi: ಹೈಕಮಾಂಡ್​ ಜೊತೆಗಿನ ಸಭೆ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ.

Siddaramaiah Meet PM Modi: ಇಂದು ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿದ್ದರಾಮಯ್ಯ, ಭೇಟಿ ಹಿಂದಿನ ಕಾರಣವೇನು?
ಸಿದ್ದರಾಮಯ್ಯ ಮತ್ತು ನರೇಂದ್ರ ಮೋದಿ
Follow us
ರಮೇಶ್ ಬಿ. ಜವಳಗೇರಾ
|

Updated on: Aug 03, 2023 | 7:07 AM

ನವದೆಹಲಿ, (ಆಗಸ್ಟ್ 03): ಕಾಂಗ್ರೆಸ್ ಹೈಕಮಾಂಡ್​ ಬುಲಾವ್ ಮೇರೆಗೆ ನಿನ್ನೆ  (ಆಗಸ್ಟ್ 02) ನವದೆಹಲಿಗೆ(New delhi) ತೆರಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಇಂದು (ಆಗಸ್ಟ್ 03) ಪ್ರಧಾನಿ ನರೇಂದ್ರ ಮೋದಿ(Narendra Modi)  ಅವರನ್ನು ಭೇಟಿಯಾಗಲಿದ್ದಾರೆ.  ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಭೇಟಿಗೆ ಸಮಯ ಸಿಕ್ಕಿದ್ದು, ವಿವಿಧ ಯೋಜನೆಗಳಡಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಅನುದಾನ ಬಿಡುಗಡೆ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಅವರು ಎರಡನೇ ಸಲ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿಯವರನ್ನು ಭೇಟಿಯಾಗುತ್ತಿರುವುದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಗ್ಯಾರಂಟಿ ಯೋಜನೆಯಿಂದ ರಾಜ್ಯದ ಖಜಾನೆ ಖಾಲಿ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಸಿಎಂ ಸಿದ್ಧರಾಮಯ್ಯ ಹೇಳಿದ್ದಿಷ್ಟು

ಕೇವಲ ಪ್ರಧಾನಿ ನರೇಂದ್ರ ಮೋದಿ ಮಾತ್ರವಲ್ಲದೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹಾಗೂ ರಸ್ತೆ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರನ್ನು ಸಹ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

ಪೂರ್ತಿ ಜಿಎಸ್‌ಟಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ನಿರ್ಮಲಾ ಸೀತಾರಾಮನ್‌ ಅವರ ಜೊತೆ ಮಾತುಕತೆ ನಡೆಸುವ ಸಾಧ್ಯತೆ ಇದ್ದು, ರಾಜ್ಯದಲ್ಲಿ ಹೆದ್ದಾರಿಗಳ ಅಭಿವೃದ್ಧಿ, ಹೊಸ ಹೆದ್ದಾರಿಗಳ ಬಗ್ಗೆ ನಿತಿನ್‌ ಗಡ್ಕರಿ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.