Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂವಿಧಾನ ಬದಲಾವಣೆ ಮಾಡಲು ಹೊರಟರೆ ದೇಶದಲ್ಲಿ ರಕ್ತಪಾತ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆಯವರು ಸಂವಿಧಾನ ಬದಲಾವಣೆಗೆ ಸಂಬಂಧಿಸಿದ ಮತ್ತೆ ಹೇಳಿಕೆ ನೀಡಿರುವುದು ರಾಜ್ಯ ರಾಜಕೀಯದಲ್ಲಿ ವಾಕ್ಸಮರಕ್ಕೆ ಕಾರಣವಾಗಿದೆ. ಹೆಗಡೆ ಹೇಳಿಕೆಯನ್ನು ಕಾಂಗ್ರೆಸ್ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಸಂವಿಧಾನ ಬದಲಾವಣೆ ಮಾಡಿದರೆ ದೇಶದಲ್ಲಿ ರಕ್ತಪಾತವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸಂವಿಧಾನ ಬದಲಾವಣೆ ಮಾಡಲು ಹೊರಟರೆ ದೇಶದಲ್ಲಿ ರಕ್ತಪಾತ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
ಸಿದ್ದರಾಮಯ್ಯ
Follow us
Anil Kalkere
| Updated By: Ganapathi Sharma

Updated on: Mar 11, 2024 | 12:02 PM

ಬೆಂಗಳೂರು, ಮಾರ್ಚ್​ 11: ಬಿಜೆಪಿಯವರು ಒಂದು ವೇಳೆ ಸಂವಿಧಾನ ಬದಲಾವಣೆ ಮಾಡುವ ಕೆಲಸಕ್ಕೆ ಹೊರಟರೆ ದೇಶದಲ್ಲಿ ರಕ್ತಪಾತವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು. ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ (Anantkumar Hegde) ಅವರ ಸಂವಿಧಾನ ಬದಲಾವಣೆ ಹೇಳಿಕೆಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಹೆಗಡೆ ಈ ರೀತಿ ಹೇಳಿಕೆ ನೀಡುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಸಚಿವರಾಗಿದ್ದಾಗಲೂ ಸಂವಿಧಾನ ಬದಲಾವಣೆ ಬಗ್ಗೆ ಹೇಳಿಕೆ ನೀಡಿದ್ದರು. ನರೇಂದ್ರ ಮೋದಿ ಅವರು ಪ್ರಧಾನಿಯಾಗಿದ್ದಾಗಲೇ ಹೆಗಡೆ ಸಂವಿಧಾನ ಬದಲಾವಣೆ ಹೇಳಿಕೆ ನೀಡಿದ್ದರು. ಆದರೆ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ಸಂವಿಧಾನ ಬದಲಾವಣೆ ಮಾಡುವುದು ಬಿಜೆಪಿಯವರ ರಹಸ್ಯ ಅಜೆಂಡಾ. ಸಂವಿಧಾನಕ್ಕೆ ಅನಗತ್ಯ ತಿದ್ದುಪಡಿತರಲಾಗಿದೆ. ಅವುಗಳನ್ನು ಸರಿಪಡಿಸಬೇಕು. ಅದಕ್ಕೆ ಮೂರನೇ ಎರಡರಷ್ಟು ಬಹುಮತ ಬೇಕು ಎಂದು ಹೆಗಡೆ ಹೇಳಿದ್ದಾರೆ. ಅವರು ಜನತೆಯಲ್ಲಿ ಮೂರನೇ ಎರಡರಷ್ಟು ಬಹುಮತ ಕೇಳಿರುವುದು ದೇಶದ ಉದ್ಧಾರಕ್ಕಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಮನವಾದಿವನ್ನು ಸಮರ್ಥನೆ ಮಾಡಿಕೊಳ್ಳೋದು, ಮನುಸ್ಮೃತಿಗೆ ಅನುಗುಣವಾಗಿ ಸಂವಿಧಾನ ಇರಬೇಕು ಅನ್ನೋದು ಅವರ ಹಿಡನ್ ಅಜೆಂಡಾ. ಅದಕ್ಕೆ ಇಡೀ ದೇಶದ ಬಡವರು, ದಲಿತರು, ಅಲ್ಪಸಂಖ್ಯಾತರು ಹಿಂದುಳಿಬದವರು ಎಲ್ಲರೂ ಅವರನ್ನು ವಿರೋಧ ಮಾಡುತ್ತಾರೆ. ಒಂದು ವೇಳೆ ಸಂವಿಧಾನ ಬದಲಾವಣೆಯ ಕೆಲಸ ಆದರೆ ದೇಶದಲ್ಲಿ ರಕ್ತಪಾತವಾಗಲಿದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಏನು ಹೇಳಿದ್ದರು ಅನಂತಕುಮಾರ್ ಹೆಗಡೆ?

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹಲಗೇರಿ ಗ್ರಾಮದಲ್ಲಿ ಶನಿವಾರ ಮಾತನಾಡಿದ ಅನಂತ್ ಕುಮಾರ್ ಹೆಗಡೆ, ಕಾಂಗ್ರೆಸ್ ಪಕ್ಷದವರು ಆಡಳಿತದಲ್ಲಿದ್ದಾಗ ಸಂವಿಧಾನವನ್ನು ಹಲವು ಬಾರಿ ತಿರುಚಿದ್ದಾರೆ. ಬೇಡದೆ ಇರುವ ವಿಚಾರಗಳನ್ನೆಲ್ಲ ಸೇರಿಸಿ ಹಿಂದೂ ಸಮಾಜವನ್ನು ಗಮನಿಸುವ ರೀತಿ ಬದಲಾಯಿಸಿದ್ದಾರೆ. ಅವುಗಳನ್ನೆಲ್ಲ ಸರಿಪಡಿಸಬೇಕಿದೆ. ಆದರೆ, ಹಾಗೆ ಮಾಡಬೇಕಿದ್ದರೆ ಲೋಕಸಭೆಯಲ್ಲಿ ಮಾತ್ರವಲ್ಲದೆ ರಾಜ್ಯಸಭೆಯಲ್ಲಿ ಕೂಡ ನಮಗೆ ಬಹುಮತ ಬೇಕಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿಯು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ಸಂವಿಧಾನ ತಿದ್ದುಪಡಿ ಮಾಡಲು ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬೇಕು: ಅನಂತ್ ಕುಮಾರ್ ಹೆಗಡೆ

ಈ ಹಿಂದೆ ಕೂಡ ಸಂವಿಧಾನ ಬದಲಾವಣೆಗೆ ಸಂಬಂಧಿಸಿ ಅವರು ನೀಡಿದ್ದ ಹೇಳಿಕೆ, ರಾಜ್ಯದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು. ಇದೀಗ ಹೆಗಡೆ ಮತ್ತೆ ಅಂತದ್ದೇ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಗೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ, ಅನಂತಕುಮಾರ್ ಹೆಗಡೆ ಹೇಳಿಕೆಯಿಂದ ಬಿಜೆಪಿ ಅಂತರ ಕಾಯ್ದುಕೊಂಡಿದೆ. ಅದು ಅವರ ವೈಯಕ್ತಿಕ ಹೇಳಿಕೆಯಾಗಿದ್ದು ಅದಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಹೇಳಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ