ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿ; ಸೋನಿಯಾಗೆ ಕರ್ನಾಟಕ ವಾಣಿಜ್ಯ ವಾಹನಗಳ ಚಾಲಕರ ಒಕ್ಕೂಟ ಪತ್ರ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಕರ್ನಾಟಕ ವಾಣಿಜ್ಯ ವಾಹನ ಚಾಲಕರ ಒಕ್ಕೂಟದ ಸದಸ್ಯರು ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರಿಗೆ ಸೋಮವಾರ ಪತ್ರ ಬರೆದಿದ್ದಾರೆ.

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿ; ಸೋನಿಯಾಗೆ ಕರ್ನಾಟಕ ವಾಣಿಜ್ಯ ವಾಹನಗಳ ಚಾಲಕರ ಒಕ್ಕೂಟ ಪತ್ರ
ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್
Follow us
Ganapathi Sharma
|

Updated on: May 15, 2023 | 6:10 PM

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಕರ್ನಾಟಕ ವಾಣಿಜ್ಯ ವಾಹನ ಚಾಲಕರ ಒಕ್ಕೂಟದ ಸದಸ್ಯರು ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರಿಗೆ ಸೋಮವಾರ ಪತ್ರ ಬರೆದಿದ್ದಾರೆ. ಡಿಕೆ ಶಿವಕುಮಾರ್ ಅವರು ಚುನಾವನೆಗೂ ಮುನ್ನ ಸ್ವಯಂಪ್ರೇರಣೆಯಿಂದ ನಮ್ಮನ್ನು ಸಂಪರ್ಕಿಸಿ ನಮ್ಮ ಚಾಲಕ ಸಮುದಾಯಕ್ಕೆ ಸಹಾಯ ಮಾಡುತ್ತಾರೆ ಎಂಬ ಭರವಸೆಯನ್ನು ನೀಡಿದ್ದರು. ಅಂದಿನಿಂದ ಶಿವಕುಮಾರ್ ಸರ್ ನಿರಂತರವಾಗಿ ತಮ್ಮ ಬದ್ಧತೆಯನ್ನು ತೋರಿಸಿದ್ದಾರೆ ಎಂದು ಚಾಲಕರ ಒಕ್ಕೂಟ ಪತ್ರದಲ್ಲಿ ಉಲ್ಲೇಖಿಸಿದೆ.

ಚಾಲಕರ ಸಮುದಾಯಕ್ಕೆ ಉಜ್ವಲ ಭವಿಷ್ಯವನ್ನು ತರುತ್ತೇನೆ ಎಂದು ಭರವಸೆ ನೀಡಿದ ಡಿಕೆ ಶಿವಕುಮಾರ್, ನಮ್ಮ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಹಲವಾರು ಸಭೆಗಳನ್ನೂ ನಡೆಸಿದ್ದಾರೆ. ಇದು ನಮ್ಮ ಚಾಲಕ ಸಮುದಾಯವು ಅವರನ್ನು ಬೆಂಬಲಿಸಲು ಕಾರಣವಾಯಿತು. ಏಕೆಂದರೆ ಅವರು ನಮಗೆ ಏಕೈಕ ಭರವಸೆಯಾಗಿದ್ದಾರೆ ಎಂದು ಓಲಾ, ಉಬರ್ ಚಾಲಕರು ಮತ್ತು ಮಾಲೀಕರ ಸಂಘ ಮತ್ತು ಕರ್ನಾಟಕ ವಾಣಿಜ್ಯ ವಾಹನ ಚಾಲಕರ ಒಕ್ಕೂಟದ ಅಧ್ಯಕ್ಷ ತನ್ವೀರ್ ಪಾಷಾ ಪತ್ರದಲ್ಲಿ ತಿಳಿಸಿದ್ದಾರೆ.

ಶಿವಕುಮಾರ್ ಅವರನ್ನು ಕರ್ನಾಟಕದ ಸಾರಥಿಯನ್ನಾಗಿ ನೋಡಲು ಚಾಲಕರು ಬಯಸುತ್ತಿದ್ದಾರೆ ಎಂದು ಪಾಷಾ ಹೇಳಿದ್ದಾರೆ. ಸಮಾಜದಲ್ಲಿ ಗೌರವಾನ್ವಿತ ಸ್ಥಾನದೊಂದಿಗೆ ನಮಗೆ ಉತ್ತಮ ಜೀವನಕ್ಕೆ ಒದಗಿಸಬಲ್ಲ ಏಕೈಕ ವ್ಯಕ್ತಿ ಅವರು. ನಾವೆಲ್ಲರೂ ಅವರ ಸೂಚನೆ, ಸಿದ್ಧಾಂತಗಳ ಪ್ರಕಾರ ನಮ್ಮ ಪ್ರೀತಿಯ ನಾಯಕ ಶಿವಕುಮಾರ್ ಅವರ ಪರ ಶ್ರಮಿಸಿದ್ದೇವೆ. ಪಕ್ಷ ಮತ್ತು ಪಕ್ಷದ ಮುಖಂಡರಿಂದ ಏನನ್ನೂ ನಿರೀಕ್ಷಿಸದೆ ಸ್ವಯಂಪ್ರೇರಿತರಾಗಿ ಕೆಲಸ ಮಾಡಿದ್ದೇವೆ. ಶಿವಕುಮಾರ್ ನಮಗೆ ಮುಖ್ಯಮಂತ್ರಿಯಾಗಬೇಕು ಎಂಬುದು ಪಕ್ಷ ಮತ್ತು ಪಕ್ಷದ ನಾಯಕರ ಏಕೈಕ ನಿರೀಕ್ಷೆಯಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಾನೊಬ್ಬ ಏಕಾಂಗಿ, ಏಕಾಂಗಿಯಾಗಿಯೇ ಹೋರಾಟ ಮಾಡಿದ್ದೇನೆ; ಡಿಕೆ ಶಿವಕುಮಾರ್

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಜಯಿಸುವ ಮೂಲಕ ಭರ್ಜರಿ ಬಹುಮತ ಪಡೆದಿದೆ. ಮುಖ್ಯಮಂತ್ರಿ ಹುದ್ದೆಗೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಪೈಪೋಟಿ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್