ಕೆಕೆಆರ್​ಡಿಬಿ ಅಧ್ಯಕ್ಷರಾಗಿ ಅಜಯ್ ಸಿಂಗ್ ನೇಮಕ, ತನ್ನದೇ ವಾಗ್ದಾನಕ್ಕೆ ಎಳ್ಳುನೀರು ಬಿಟ್ಟ ಕಾಂಗ್ರೆಸ್​

ಅಸಮಾಧಾನಿತ ಶಾಸಕರನ್ನು ಸಮಾಧಾನಕ್ಕಾಗಿ ಕಾಂಗ್ರೆಸ್​ ಸರ್ಕಾರ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನವನ್ನು ಶಾಸಕರೊಬ್ಬರಿಗೆ ನೀಡಿದೆ. ಇದರೊಂದಿಗೆ ಕಾಂಗ್ರೆಸ್ ತನ್ನದೇ ವಾಗ್ದಾನವನ್ನು ಮುರಿದಿದೆ.

ಕೆಕೆಆರ್​ಡಿಬಿ  ಅಧ್ಯಕ್ಷರಾಗಿ ಅಜಯ್ ಸಿಂಗ್ ನೇಮಕ,  ತನ್ನದೇ ವಾಗ್ದಾನಕ್ಕೆ ಎಳ್ಳುನೀರು ಬಿಟ್ಟ ಕಾಂಗ್ರೆಸ್​
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Aug 11, 2023 | 7:44 AM

ಕಲಬುರಗಿ/ಬೆಂಗಳೂರು, (ಆಗಸ್ಟ್ 11) ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ(Kalyana Karnataka Region Development Board (KKRDB) ಅಧ್ಯಕ್ಷರಾಗಿ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್ (Ajay Singh) ಅವರನ್ನು ನೇಮಕ ಮಾಡಲಾಗಿದೆ. ಒಂದು ವರ್ಷದ ಅವಧಿಗೆ ಅಧ್ಯಕ್ಷರನ್ನಾಗಿ ಅಜಯ್ ಸಿಂಗ್ ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಶಾಸಕ ಬಸವರಾಜ ರಾಯರೆಡ್ಡಿ, ಬಿ.ಆರ್.ಪಾಟೀಲ್, ಹಂಪನಗೌಡ ಬಾದರ್ಲಿಗೂ ಸದಸ್ಯ ಸ್ಥಾನ ನೀಡಲಾಗಿದೆ. ಇದರ ಜೊತೆಗೆ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ತುಕಾರಾಂ, ರಾಘವೇಂದ್ರ ಹಿಟ್ನಾಳ್​​ರನ್ನ ನೇಮಕ ಮಾಡಿದೆ. ಆದ್ರೆ, ಕಾಂಗ್ರೆಸ್​ ನೀಡಿದ್ದ ವಾಗ್ದಾನಕ್ಕೆ ಎಳ್ಳುನೀರು ಬಿಟ್ಟಿದೆ. ಹೌದು..ಮಂತ್ರಿಯಿದ್ದವರಿಗೇ KKRDB ಅಧ್ಯಕ್ಷ ಸ್ಥಾನ ನೀಡುವ ತನ್ನದೇ ವಾಗ್ದಾನವನ್ನು ಕಾಂಗ್ರೆಸ್ ಮುರಿದಿದೆ.

ಇದನ್ನೂ ಓದಿ: KKRDB Committee: ಕೆಕೆಆರ್​ಡಿಬಿಗೆ ಸಮಿತಿ ರಚನೆ, ಅಧ್ಯಕ್ಷರಾಗಿ ಡಾ.ಅಜಯಸಿಂಗ್ ನೇಮಕ

ಕಲ್ಯಾಣ ಕರ್ನಾಟಕ ಭಾಗದ ಸಚಿವರಿಗೆ ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕು ಎನ್ನುವ ನಿಯಮವನ್ನು 2013ರಲ್ಲಿ ಸ್ವತಃ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿತ್ತು. ಆದ್ರೆ, ಈ ಹಿಂದಿನ ಬಿಜೆಪಿ ಸರ್ಕಾರ, ಅಧ್ಯಕ್ಷ ಹುದ್ದೆಯನ್ನು ಡಿ ಗ್ರೇಡ್ ಮಾಡಿ, ಮಂತ್ರಿಗಳ ಬದಲಾಗಿ ಶಾಸಕರನ್ನು ಮಂಡಳಿ ಅಧ್ಯಕ್ಷ ಹುದ್ದೆಗೆ ನೇಮಕ ಮಾಡಿತ್ತು. ಕಲಬುರಗಿ ದಕ್ಷಿಣ ಶಾಸಕರಾಗಿದ್ದ ದತ್ತಾತ್ರೇಯ ಪಾಟೀಲ ರೇವೂರ ಅವರನ್ನು ಕೆಕೆಆರ್​ಡಿಬಿ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ಬಿಜೆಪಿ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ನಾಯಕರು ತೀವ್ರವಾಗಿ ವಿರೋಧಿಸಿದ್ದರು. ಅಲ್ಲದೇ ತಮ್ಮ ಸರ್ಕಾರ ಬಂದರೆ ಮತ್ತೆ ಅಧ್ಯಕ್ಷ ಹುದ್ದೆಯನ್ನು ಅಪಗ್ರೇಡ್ ಮಾಡುತ್ತೇವೆ. ಮಂತ್ರಿ ಇದ್ದವರಿಗೆ ಅಧ್ಯಕ್ಷ ಹುದ್ದೆ ನೀಡುವುದಾಗಿ ಕಾಂಗ್ರೆಸ್​ ಮಾಯಕರು ವಾಗ್ದಾನ ನೀಡಿದ್ದರು. ಶಾಸಕರಿಗೆ ಮಂಡಳಿ ಅಧ್ಯಕ್ಷ ಹುದ್ದೆ ನೀಡಿದರೆ ಅಭಿವೃದ್ಧಿ ಆಗುವುದಿಲ್ಲ ಎಂದು ಕೈ ನಾಯಕರು ಪ್ರತಿಪಾದಿಸಿದ್ದರು. ಇದೀಗ ಕಾಂಗ್ರೆಸ್ ಸರ್ಕಾರವೇ ಶಾಸಕ ಅಜಯ್ ಸಿಂಗ್ ಅವರನ್ನು ಮಂಡಳಿ ಅಧ್ಯಕ್ಷ ಹುದ್ದೆಗೆ ನೇಮಕ ಮಾಡಿದೆ. ಇದರೊಂದಿಗೆ ಕಾಂಗ್ರೆಸ್​ ತನ್ನ ನಿಮಯದ ಜೊತೆ ನೀಡಿದ್ದ ವಾಗ್ದಾನಕ್ಕೆ ಎಳ್ಳುನೀರು ಬಿಟ್ಟಿದೆ.

ಅಸಮಾಧಾನ ಹೊರಹಾಕಿದ್ದ ಅಜಯ್ ಸಿಂಗ್

ಮಾಜಿ ಸಿಎಂ, ದಿವಂಗತ ಧರ್ಮಸಿಂಗ್ ಪುತ್ರ ಡಾ. ಅಜಯಸಿಂಗ್, ಜೇವರ್ಗಿ ಕ್ಷೇತ್ರದಿಂದ ಮೂರು ಬಾರಿ ಗೆದ್ದು ಹ್ಯಾಟ್ರಿಕ್ ಬಾರಿಸಿದ್ದಾರೆ. ಕೊನೆ ಕ್ಷಣದಲ್ಲಿ ಮಂತ್ರಿ ಸ್ಥಾನ ಕೈತಪ್ಪಿದ್ದಕ್ಕೆ ಬೇಸರಗೊಂಡಿದ್ದರು. ಕಳೆದ ವಾರ ಕಲಬುರಗಿ ನಗರದಲ್ಲಿ ನಡೆದ ಗೃಹಜ್ಯೋತಿ ಕಾರ್ಯಕ್ರಮಕ್ಕೂ ಗೈರಾಗಿ ಅಸಮಾಧಾನ ಹೊರಹಾಕಿದ್ದರು. ಇದೀಗ ಶಾಸಕರ ಅಸಮಾಧಾನ ಹೆಚ್ಚಾದ್ರೆ ಸರ್ಕಾರಕ್ಕೆ ಆಪತ್ತು ಎನ್ನುವುದನ್ನ ಅರಿತ ಸಿಎಂ ಸಿದ್ದರಾಮಯ್ಯ, ನಾಯಕರ ಬೇಸರಕ್ಕೆ ಮದ್ದರೆಯುವ ಕೆಲಸ ಮಾಡುತ್ತಿದ್ದಾರೆ. ಈಗಾಗಿ ಅನಿವಾರ್ಯವಾಗಿ ಅಜಯ್ ಸಿಂಗ್ ಅವರನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಕ ಮಾಡಿದ್ದಾರೆ. ಇದರೊಂದಿಗೆ ಅಸಮಾಧಾನ ಶಮನಕ್ಕೆ ಮುಂದಾಗಿದ್ದಾರೆ.

11 ಜನ ಮಂಡಳಿಯ ಸದಸ್ಯರನ್ನಾಗಿ ನೇಮಕ

ಅಜಯ್ ಸಿಎಂ ಮುಂದಿನ ಒಂದು ವರ್ಷದ ಅವಧಿಗೆ ಕೆಕೆಆರ್​ಡಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ನಿನ್ನೆ ಸಂಜೆ ಸಿಎಂ ಸಿದ್ದರಾಮಯ್ಯ ಸೂಚನೆಯಂತೆ, ಮಂಡಳಿಗೆ ಆಳಂದ ಶಾಸಕ ಬಿ.ಆರ್.ಪಾಟೀಲ್, ಯಲಬುರ್ಗಾ ಶಾಸಕ ಬಸವರಾಜ್ ರಾಯರೆಡ್ಡಿ, ಜೇವರ್ಗಿ ಶಾಸಕ ಡಾ. ಅಜಯಸಿಂಗ್, ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್, ವಿಜಯನಗರ(ಹೊಸಪೇಟೆ) ಶಾಸಕ ಗವಿಯಪ್ಪ ಸೇರಿದಂತೆ ಹನ್ನೊಂದು ಜನರನ್ನು ಮಂಡಳಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!