ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Election 2023) ಇನ್ನೇನು ಐದಾರು ತಿಂಗಳು ಬಾಕಿ ಇದ್ದು, ಈ ಬಾರಿ ಶತಾಯಗತಾಯವಾಗಿ ಅಧಿಕಾರಕ್ಕೇರಲೇಬೇಕೆಂದು ಕಾಂಗ್ರೆಸ್ ಪಣತೊಟ್ಟಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದೆ. ಇನ್ನು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ಕೈ ನಾಯಕ ಮಹತ್ವದ ಸಭೆ ನಡೆದಿದೆ.
ಬೆಂಗಳೂರಿನ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸದಾಶಿವನಗರದ ನಿವಾಸದಲ್ಲಿ ಇಂದು(ನವೆಂಬರ್ 16) ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಮಹತ್ವದ ಸಭೆ ನಡೆದಿದ್ದು, ಮುಂಬರುವ ವಿಧಾನಸಭಾ ಚುನಾವಣೆಗಾಗಿ ಬಸ್ ಯಾತ್ರೆ ಸೇರಿ ಹಲವು ವಿಚಾರಗಳ ಬಗ್ಗೆ ಮಹತ್ವದ ಚರ್ಚೆಯಾಗಿದೆ.
ಇನ್ನು ಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್ ಸೇರಿದಂತೆ ಇತರೆ ಪ್ರಮುಖ ನಾಯಕರು ಭಾಗಿಯಾಗಿದ್ರು. ಇನ್ನು ಕಾಂಗ್ರೆಸ್ ನಾಯಕರು ನಾಳೆ(ನವೆಂಬರ್ 17) ಜಂಟಿ ಸುದ್ದಿಗೋಷ್ಠಿ ಕರೆದಿದ್ದಾರೆ. ರಣದೀಪ್ ಸಿಂಗ್ ಸುರ್ಜೇವಾಲ,,ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸೇರಿ ಕೆಪಿಸಿಸಿ ಕಚೇರಿಯಲ್ಲಿ ನಾಳೆ ಬೆಳಗ್ಗೆ 9 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ಜಂಟಿ ಸುದ್ದಿಗೋಷ್ಠಿಯಲ್ಲಿ ವಿವಿಧ ವಿಚಾರವಾಗಿ ರಾಜ್ಯ ಬೊಮ್ಮಾಯಿ ಸರ್ಕಾರವನ್ನು ತರಾಟೆಗೆ ತೆದುಕೊಳ್ಳುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಈ ಜಂಟಿ ಸುದ್ದಿಗೋಷ್ಠಿ ತೀವ್ರ ಕುತೂಹಲ ಕಾರಣವಾಗಿದೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:10 pm, Wed, 16 November 22