ನಾಳೆ ಕಾಂಗ್ರೆಸ್ ಪ್ರಚಾರ ಸಮಿತಿ ಸಭೆ; ಲೋಕಸಭೆ ಚುನಾವಣೆ ಮೇಲೆ ‘ಕೈ’ ಕಣ್ಣು
Karnataka Congress campaign committee meeting; ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಓಟಕ್ಕೆ ತಡೆ ಹಾಕಿರುವ ರಾಜ್ಯ ಕಾಂಗ್ರೆಸ್ ಈಗ ಉತ್ಸಾಹದ ಬುಗ್ಗೆಯಾಗಿದ್ದು, ರಾಷ್ಟ್ರ ಮಟ್ಟದಲ್ಲೂ ಇದೇ ರೀತಿಯ ಫಲಿತಾಂಶ ಬರುವಂತೆ ನೋಡಿಕೊಳ್ಳಲು ಬಯಸುತ್ತಿದೆ. ಇದಕ್ಕೆ ವೇದಿಕೆಯಾಗಿ, ಭಾನುವಾರದ ಸಭೆಯನ್ನು ಕರೆಯಲಾಗಿದೆ ಎನ್ನಲಾಗಿದೆ.
ಬೆಂಗಳೂರು, ಸೆಪ್ಟೆಂಬರ್ 2: ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ರಾಜ್ಯ ಕಾಂಗ್ರೆಸ್ (Congress) ಪಾಳೆಯ ಮುಂಬರುವ ಲೋಕಸಭಾ ಚುನಾವಣೆಯ (Lok Sabha Elections 2024) ಮೇಲೆ ಕಣ್ಣಿಟ್ಟಿದ್ದು, ಇದರ ಅಂಗವಾಗಿ ಕೆಪಿಸಿಸಿ (KPCC) ಕಚೇರಿಯಲ್ಲಿ ರಾಜ್ಯ ಮತ್ತು ಜಿಲ್ಲಾ ಪ್ರಚಾರ ಸಮಿತಿಯ ಪದಾಧಿಕಾರಿಗಳ ಸಭೆಯನ್ನು ಭಾನುವಾರ (ಸೆ.3) ಕರೆಯಲಾಗಿದೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರೂ ಆಗಿರುವ ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಸೇರಿದಂತೆ ಹಲವು ನಾಯಕರು ಈ ಸಭೆಯಲ್ಲಿ ಭಾಗವಹಿಸಿ ಮಾತನಾಡಲಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಯಶಸ್ಸಿಗೆ ದುಡಿದ ಪ್ರಚಾರ ಸಮಿತಿಯ ರಾಜ್ಯ, ಜಿಲ್ಲಾ ಹಾಗೂ ವಿಧಾನಸಭಾ ಕ್ಷೇತ್ರವಾರು ಸಮಿತಿಗಳ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುವುದು ಸಭೆಯ ಉದ್ದೇಶವಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಈ ಮೂಲಕ ಪದಾಧಿಕಾರಿಗಳನ್ನು ಮುಂಬರುವ ಲೋಕಸಭೆಯ ಚುನಾವಣೆಗೆ ಹುರಿದುಂಬಿಸುವುದು ಪಕ್ಷದ ಚಿಂತನೆಯಾಗಿದೆ.
ಇದನ್ನೂ ಓದಿ: ಕರ್ನಾಟಕ ರಾಜಕೀಯ; ಬಿಜೆಪಿಯಲ್ಲಿ ಬಿಎಸ್ ಯಡಿಯೂರಪ್ಪ VS ಬಿಎಲ್ ಸಂತೋಷ್ ಬಣ ಸಂಘರ್ಷ ಮತ್ತೆ ಮುನ್ನೆಲೆಗೆ
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಓಟಕ್ಕೆ ತಡೆ ಹಾಕಿರುವ ರಾಜ್ಯ ಕಾಂಗ್ರೆಸ್ ಈಗ ಉತ್ಸಾಹದ ಬುಗ್ಗೆಯಾಗಿದ್ದು, ರಾಷ್ಟ್ರ ಮಟ್ಟದಲ್ಲೂ ಇದೇ ರೀತಿಯ ಫಲಿತಾಂಶ ಬರುವಂತೆ ನೋಡಿಕೊಳ್ಳಲು ಬಯಸುತ್ತಿದೆ. ಇದಕ್ಕೆ ವೇದಿಕೆಯಾಗಿ, ಭಾನುವಾರದ ಸಭೆಯನ್ನು ಕರೆಯಲಾಗಿದೆ ಎನ್ನಲಾಗಿದೆ.
ಬೆಳಿಗ್ಗೆ 11ಗಂಟೆಗೆ ಆರಂಭವಾಗುವ ಸಭೆ ಮಧ್ಯಾಹ್ನದವರೆಗೆ ನಡೆಯಲಿದೆ ಎಂದು ಪ್ರಚಾರ ಸಮಿತಿಯ ಸಮನ್ವಯಕಾರ ಎಪಿ ಬಸವರಾಜ ಅವರು ತಿಳಿಸಿದ್ದಾರೆ.
ಅತ್ತ ಬಿಜೆಪಿ ಈಗಾಗಲೇ ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈಗಾಗಲೇ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಸಭೆ ನಡೆಸಿದೆ. ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ನೇತೃತ್ವದಲ್ಲಿ ಸಭೆ ನಡೆದಿದೆ. ಆದರೆ, ಈ ಸಭೆಗೆ ಕೆಲವು ಮಂದಿ ಪ್ರಮುಖ ನಾಯಕರು ಹಾಜರಾಗದಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಅಲ್ಲದೆ, ಸಭೆಯ ನಂತರ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಪ್ತ ಎಂಪಿ ರೇಣುಕಾಚಾರ್ಯ ಅಸಮಾಧಾನದ ಹೇಳಿಕೆ ನೀಡಿರುವುದು ಬಿಜೆಪಿಯಲ್ಲಿ ಬಣ ರಾಜಕೀಯ ಮತ್ತೆ ಮುನ್ನೆಲೆಗೆ ಬರುವ ಎಲ್ಲ ಸಾಧ್ಯತೆಗಳನ್ನು ದಟ್ಟವಾಗಿಸಿದೆ.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:43 pm, Sat, 2 September 23