ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಏನೇನು ಚರ್ಚೆ? ಇಲ್ಲಿದೆ ವಿವರ

Congress CLP Meeting: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಬುಧವಾರ ರಾತ್ರಿ ಬೆಂಗಳೂರಿನಲ್ಲಿ ನಡೆಯಿತು. ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಏನೇನು ಚರ್ಚೆಯಾಯಿತು? ಏನೇನೂ ಸೂಚನೆ ನೀಡಲಾಯಿತು ಎಂಬ ವಿವರ ಇಲ್ಲಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಏನೇನು ಚರ್ಚೆ? ಇಲ್ಲಿದೆ ವಿವರ
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಏನೇನು ಚರ್ಚೆ? ಇಲ್ಲಿದೆ ವಿವರ
Follow us
ಪ್ರಸನ್ನ ಗಾಂವ್ಕರ್​
| Updated By: Ganapathi Sharma

Updated on: Feb 15, 2024 | 6:54 AM

ಬೆಂಗಳೂರು, ಫೆಬ್ರವರಿ 15: ಮುಂಬರುವ ರಾಜ್ಯಸಭೆ ಚುನಾವಣೆಗೆ (Rajya Sabha Election) ಪಕ್ಷವು 5ನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಎಲ್ಲರೂ ಮತದಾನ ಮಾಡಬೇಕು ಎಂದು ಕಾಂಗ್ರೆಸ್ (Congress) ಶಾಸಕಾಂಗ ಪಕ್ಷದ ಸಭೆಯಲ್ಲಿ (CLP Meeting) ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು. ಬುಧವಾರ ರಾತ್ರಿ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ರಾಜ್ಯಸಭೆ ಚುನಾವಣೆ, ಗ್ಯಾರಂಟಿ ಅನುಷ್ಠಾನ, ಲೋಕಸಭೆ ಚುನಾವಣೆ ಸಿದ್ಧತೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಿತು. ಮುಖ್ಯವಾಗಿ ಸಿಎಲ್​ಪಿ ಸಭೆಯಲ್ಲಿ 3 ಪ್ರಮುಖ ವಿಚಾರಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು.

ಸಿಎಲ್​​ಪಿ ಮೀಟಿಂಗ್​ನಲ್ಲಿ ನಡೆದ ಚರ್ಚೆ ಹೀಗಿದೆ

  1. ರಾಜ್ಯಸಭೆಗೆ 5ನೇ ಅಭ್ಯರ್ಥಿ ಹಾಕಿದರೆ ಎಲ್ಲರೂ ವೋಟ್ ಹಾಕಬೇಕು.
  2. ಚುನಾವಣೆಗೆ ಮುನ್ನ ನಾಯಕರು ಸೂಚಿಸುವ ರೆಸಾರ್ಟ್​ಗೆ ಬರಬೇಕು.
  3. ಸಿಎಂ, ಡಿಸಿಎಂ, ಸಚಿವರು, ಶಾಸಕರು ರೆಸಾರ್ಟ್​ಗೆ ಬಂದು ಇರಬೇಕು.
  4. ಗ್ಯಾರಂಟಿ ಸಮಿತಿ ಘೋಷಣೆಮಾಡಿ ಆದೇಶಿಸಿದ್ದರೂ ಸಮತಿ ರಚಿಸಿಲ್ಲ.
  5. ಗ್ಯಾರಂಟಿ ಸಮಿತಿ ರಚನೆಗೆ ಉಸ್ತುವಾರಿ ಸಚಿವರು, ಶಾಸಕರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲರಿಂದ ಗಡುವು.
  6. 2 ವಾರದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಗೆ ಹೆಸರು ಶಿಫಾರಸುಮಾಡಬೇಕು.
  7. ವಿಧಾನಸಭಾ ಕ್ಷೇತ್ರವಾರು ಸಮಿತಿಗೆ ಹೆಸರು ಕಳುಹಿಸುವಂತೆ ಸೂಚನೆ.
  8. ಶಾಸಕರು ಹೆಸರು ಕಳುಹಿಸುವಂತೆ ರಣದೀಪ್ ಸುರ್ಜೇವಾಲ ಸೂಚನೆ.
  9. ಜಿಲ್ಲಾ ಸಮಿತಿಗೆ ಸಚಿವರು ಹೆಸರು ಅಂತಿಮಗೊಳಿಸಿ ಪಟ್ಟಿ ರವಾನಿಸಬೇಕು.
  10. ಕಾಂಗ್ರೆಸ್ ಕಾರ್ಯಕರ್ತರ ಪಟ್ಟಿ ನೀಡುವಂತೆ ಸಚಿವರಿಗೆ 2 ದಿನ ಗಡುವು.
  11. ರಾಜ್ಯ ಸಮಿತಿಗೆ 2 ದಿನದೊಳಗೆ ಹೆಸರು ಅಂತಿಮಗೊಳಿಸುವಂತೆ ಸೂಚನೆ.
  12. 15 ಜಿಲ್ಲೆ ವಿಂಗಡಿಸಿ ಸಿಎಂ, ಡಿಸಿಎಂ ಇಬ್ಬರೂ ಸಮಾವೇಶ ಮಾಡಬೇಕು.
  13. ಸಿಎಂಗೆ 15 ಜಿಲ್ಲೆಗಳಲ್ಲಿ ಸಮಾವೇಶ ಆಯೋಜನೆ, ಪ್ರಚಾರ ಜವಾಬ್ದಾರಿ.
  14. ಡಿಸಿಎಂಗೆ 15 ಜಿಲ್ಲೆಗಳಲ್ಲಿ ಸಮಾವೇಶ ಆಯೋಜನೆ, ಪ್ರಚಾರ ಜವಾಬ್ದಾರಿ.
  15. ಶಾಸಕರ ಮುಂದೆ ತಮ್ಮ ಜವಾಬ್ದಾರಿಗಳನ್ನು ತಿಳಿಸಿದ ಸಿಎಂ, ಡಿಸಿಎಂ.

ಇದನ್ನೂ ಓದಿ: ಕಾಂಗ್ರೆಸ್​ ಸ್ಕ್ರೀನಿಂಗ್ ಕಮಿಟಿ ಸಭೆ ಅಂತ್ಯ: ಸಭೆಯಲ್ಲಿ ಏನೆಲ್ಲಾ ಚರ್ಚೆ ಆಯ್ತು? ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು

ಇನ್ನು ಲೋಕಸಭೆ ಹಾಗೂ ರಾಜ್ಯಸಭೆ ಟಿಕೆಟ್ ಹಂಚಿಕೆ ವಿಚಾರವಾಗಿ ಮತ್ತೊಂದು ಸುತ್ತಿನ ಸಭೆ ಅಗತ್ಯವಿದೆ ಎಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್​​ನಲ್ಲಿ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ಬಳಿಕ ಅವರು ಬುಧವಾರ ರಾತ್ರಿ ಈ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ